ಮೇ 3ಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದಾಗ ಸಂಪುಟ ವಿಸ್ತರಣೆ ಚರ್ಚೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಎ.29: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮೇ 3ರಂದು ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದಾಗ ಚರ್ಚಿಸಿ ತೀರ್ಮಾನಿಸಲಾಗುವುದು. ಇಂದಿನ ತನ್ನ ದಿಲ್ಲಿ ಪ್ರವಾಸದ ವೇಳೆ ಯಾವುದೇ ಕೇಂದ್ರ ಸಚಿವರನ್ನಾಗಲಿ ಅಥವಾ ಪಕ್ಷದ ನಾಯಕರನ್ನಾಗಲಿ ಭೇಟಿ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.
ಈಗಾಗಲೇ ಖಾಲಿಯಿರುವ ಸಚಿವ ಸ್ಥಾನ ಭರ್ತಿ ಮಾಡುವ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗಿದೆ. ಅಮಿತ್ ಶಾ ಬೆಂಗಳೂರಿಗೆ ಬಂದಾಗಲೇ ಈ ಬಗ್ಗೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇಂದು (ಎ.29) ಸಂಜೆ ತಾನು ದಿಲ್ಲಿಗೆ ತೆರಳುತ್ತಿದ್ದು, ಶನಿವಾರ ನ್ಯಾಯಾಧೀಶರು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸುತ್ತೇನೆ. ರವಿವಾರ ಬೆಳಗ್ಗೆ ಬೆಂಗಳೂರಿಗೆ ಹಿಂದಿರುಗಲಿದ್ದೇನೆ ಎಂದು ಸಿಎಂ ತಿಳಿಸಿದರು.
Next Story





