ಬಿಹಾರ: ದೂರು ಕೊಡಲು ಹೋಗಿದ್ದ ಮಹಿಳೆಯಿಂದಲೇ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ!
![ಬಿಹಾರ: ದೂರು ಕೊಡಲು ಹೋಗಿದ್ದ ಮಹಿಳೆಯಿಂದಲೇ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ! ಬಿಹಾರ: ದೂರು ಕೊಡಲು ಹೋಗಿದ್ದ ಮಹಿಳೆಯಿಂದಲೇ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ!](https://www.varthabharati.in/sites/default/files/images/articles/2022/04/29/333435-1651213807.jpg)
ಪಾಟ್ನಾ: ಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆಯಿಂದ ಪೊಲೀಸ್ ಠಾಣೆಯೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಮಸಾಜ್ ಮಾಡಿಸಿಕೊಂಡ ಹಿರಿಯ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು NDTV ವರದಿ ಮಾಡಿದೆ.
ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಔಟ್ಪೋಸ್ಟ್ನ ಹಿರಿಯ ಅಧಿಕಾರಿ ಶಶಿಭೂಷಣ ಸಿನ್ಹಾ ಅವರು ಶರ್ಟ್ ಇಲ್ಲದೆ ಮಸಾಜ್ ಮಾಡಿಸಿಕೊಳ್ಳುತ್ತಿದ್ದಾಗ ಫೋನ್ನಲ್ಲಿ ಮಾತನಾಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.
ಪೊಲೀಸ್ ಔಟ್ಪೋಸ್ಟ್ನಲ್ಲಿರುವ ವಸತಿ ಕ್ವಾರ್ಟರ್ಸ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ವಿಡಿಯೋ ವೈರಲ್ ಆದ ನಂತರ ಸಹರ್ಸಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ.
Next Story