ಅಕ್ರಮ ಹಿನ್ನೆಲೆ: 545 ಪಿಎಸ್ಸೈ ಹುದ್ದೆ ನೇಮಕಾತಿ ಪರೀಕ್ಷೆ ರದ್ದುಗೊಳಿಸಿದ ಸರಕಾರ
ಶೀಘ್ರದಲ್ಲೇ ಮರು ಪರೀಕ್ಷೆ: ಆರಗ ಜ್ಞಾನೇಂದ್ರ

ಬೆಂಗಳೂರು, ಎ.29: ಪಿಎಸ್ಸೈ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 545 ಪಿಎಸ್ಸೈ ಹುದ್ದೆ ನೇಮಕಾತಿ ಪರೀಕ್ಷೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿದೆ.
ಈ ಬಗ್ಗೆ ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
545 ಪಿಎಸ್ಸೈ ಹುದ್ದೆ ನೇಮಕಾತಿಗಾಗಿ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಈ ಹುದ್ದೆಗೆ ಪರೀಕ್ಷೆ ಬರೆದಿದ್ದ 54,289 ಮಂದಿಯಲ್ಲಿ ಅಕ್ರಮ ಪ್ರಕರಣದ ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ಮಾಡಲಾಗುವುದು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಮರು ಪರೀಕ್ಷೆ ಬಗ್ಗೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು ಎಂದು ಗೃಹಸಚಿವರು ಮಾಹಿತಿ ನೀಡಿದ್ದಾರೆ.
Next Story





