ಬೆಂಗಳೂರು | ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗಾಗಿ ತೀವ್ರ ಶೋಧ

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.29: ಯುವತಿ ಮೇಲೆ ಆ್ಯಸಿಡ್ ಎರಚಿ ತಲೆಮರೆಸಿಕೊಂಡಿರುವ ಆರೋಪಿ ನಾಗೇಶ್ ಪತ್ತೆಗಾಗಿ ಪಶ್ಚಿಮ ವಿಭಾಗದ ಪೆÇಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.
ಆರೋಪಿ ಬಂಧನಕ್ಕೆ ವಿಜಯನಗರ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಆರೋಪಿ ನಾಗೇಶ್ ಘಟನೆ ನಂತರ ಮೊಬೈಲ್ ಸಂಪರ್ಕ ಕಡಿತಗೊಳಿಸಿದ್ದು, ಆತನ ಊರು ಸೇರಿದಂತೆ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ.
ಯುವತಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಬೆಳಗ್ಗೆ ಎಂಟೂವರೆ ಗಂಟೆ ಸುಮಾರಿಗೆ ಯುವತಿ ತಂದೆ ಬೈಕ್ನಲ್ಲಿ ಕರೆದುಕೊಂಡು ಹೋಗಿ ಡ್ರಾಪ್ ಮಾಡಿ ಹೋಗಿದ್ದರು. ಯುವತಿ ತಂದೆ ಡ್ರಾಪ್ ಮಾಡಿ ಹೋದ ಕೆಲವೇ ಕ್ಷಣದಲ್ಲಿ ಆರೋಪಿ ನಾಗೇಶ್, ಯುವತಿ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ಹೇಳಲಾಗಿದೆ.
Next Story





