Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಆಲದ ಮರದಡಿ 'ಇಫ್ತಾರ್...

ಮಂಗಳೂರು: ಆಲದ ಮರದಡಿ 'ಇಫ್ತಾರ್ ಮುಸ್ಸಂಜೆ'

ಶಾಂತಿ ಸಮಾನತೆಗಾಗಿ ವಿಶಿಷ್ಟ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 April 2022 7:58 PM IST
share
ಮಂಗಳೂರು: ಆಲದ ಮರದಡಿ ಇಫ್ತಾರ್ ಮುಸ್ಸಂಜೆ

ಮಂಗಳೂರು : ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ದಿನೇಶ್ ಹೆಗ್ಡೆ ಉಳೆಪಾಡಿ ನೇತೃತ್ವದ ಸಹಕಾರ ನ್ಯಾಯ ಕೂಟ ಮಂಗಳೂರು ಇದರ ವತಿಯಿಂದ ಶಾಂತಿ ಸಮಾನತೆಗಾಗಿ 'ಇಫ್ತಾರ್ ಮುಸ್ಸಂಜೆ' ಕಾರ್ಯಕ್ರಮವು ಶುಕ್ರವಾರ ನಗರದ ಬಲ್ಮಠ ಸಹೋದಯ ಸಭಾಂಗಣದ ಹತ್ತಿರದ ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆಯ ಆವರಣದ ಆಲದ ಮರದಡಿಯಲ್ಲಿ ವಿಶಿಷ್ಟವಾಗಿ ನಡೆಯಿತು.

ಹಿಂದೂ, ಮುಸ್ಲಿಂ, ಕ್ರೈಸ್ತರು, ಜೈನರು ಜೊತೆಗೂಡಿ ಇಫ್ತಾರ್ ಮುಸ್ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧರ್ಮ ಸಮನ್ವಯಕ್ಕೆ ಸಾಕ್ಷಿಯಾದರು. ಗೋಪಾಡ್ಕರ್ ಕಲ್ಪನೆಯ ವೇದಿಕೆಯಲ್ಲೇ ಮಗ್ರಿಬ್ ಬಾಂಗ್ ಕರೆ ಕೊಡಲಾಯಿತು. ಅದರೊಂದಿಗೆ ಉಪವಾಸಿಗರು ವೃತ ತೊರೆದರೆ, ಇತರರು ಸಹಭಾಗಿಗಳಾದರು. ಈ ಸಂದರ್ಭ ನಾದ ಮಣಿನಾಲ್ಕೂರು ಭಾವೈಕ್ಯ ಸಾರುವ ಕತ್ತಲ ಹಾಡುಗಳನ್ನು ಹಾಡಿದರು.

ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿ ಸ್ವಾಗತಿಸಿದರು. ಚಿಂತಕ ಅರವಿಂದ ಚೊಕ್ಕಾಡಿ ಕಾರ್ಯಕ್ರಮದ ಸಮನ್ವಯಕಾರರಾಗಿ ಸಹಕರಿಸಿದ್ದರು. ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ವಂದಿಸಿದರು.

ಇಸ್ಲಾಂ ಧರ್ಮದ ಬಗ್ಗೆ ಕೆಲವರಿಗೆ ಅಪನಂಬಿಕೆ ಇದೆ. ಮುಸ್ಲಿಮರ ಬಗ್ಗೆಯೂ ಅಸಹಿಷ್ಣುತೆ ಇದೆ. ಪರಸ್ಪರ ಅರ್ಥ ಮಾಡಿಕೊಂಡರೆ ಇಂತಹ ಅಪನಂಬಿಕೆ ದೂರವಾಗಬಹುದು. ಅಸಹಿಷ್ಣುತೆ ಕಡಿಮೆಯಾಗಬಹುದು. ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿ ಇಂತಹ ವೇದಿಕೆಯ ಮೂಲಕ ಧರ್ಮಗಳ ಸಮನ್ವಯತೆಗೆ ನಾಂದಿ ಹಾಡಿರುವುದು ಅಭಿನಂದನೀಯ. ಇಸ್ಲಾಂ ಯಾವತ್ತೂ ಮತಾಂತರಕ್ಕೆ ಆಸ್ಪದ ನೀಡುವುದಿಲ್ಲ. ಜಿಹಾದ್‌ಗೂ ಕರೆ ನೀಡುವುದಿಲ್ಲ. ಇಸ್ಲಾಮನ್ನು ಅರ್ಥ ಮಾಡದವರು ಮಾತ್ರ ಇಂತಹ ವಿಷಯಗಳಿಗೆ ಸಂಕುಚಿತ ಅರ್ಥ ಕಲ್ಪಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಾರೆ. ಯುವ ತಲೆಮಾರುಗಳನ್ನು ದಾರಿ ತಪ್ಪಿಸುವ ವರ್ಗವೇ ಇದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಮುಸ್ಲಿಮರನ್ನು ಕಂಡರೆ ಸಂಶಯಿಸುವ ಗುಂಪುಗಳಿಗೆ ಈ ವೇದಿಕೆಯೇ ಸೌಹಾರ್ದದ ಮುನ್ನುಡಿ ಬರೆಯುವಂತಾಗಲಿ ಎಂದು ಸುನ್ನಿ ಯುವಜನ ಸಂಘದ ರಾಜ್ಯಾಧ್ಯಕ್ಷರಾದ ಡಾ.ಎಂ.ಎಸ್.ಎಂ. ಝೈನಿ ಕಾಮಿಲ್ ತಿಳಿಸಿದರು. 

ನಮ್ಮಲ್ಲಿ ಮತಗಳು, ಪಥಗಳು ಹಲವು ಇರಬಹುದು. ಆದರೆ ಸಮನ್ವಯತೆಗೆ, ಭಾತೃತ್ವಕ್ಕೆ ಎಂದೂ ಧಕ್ಕೆಯಾಗಬಾರದು. ಸಮಾನತೆ, ಸರಳತೆ ದೇಶದ ಭವ್ಯ ಸಂಸ್ಕೃತಿಯಾಗಿದೆ ಎಂಬುದನ್ನು ಅರ್ಥ ಮಾಡಿಕೊಂಡು ಹಿಂದಿಗಿಂತಲೂ ಈಗ ಸಮನ್ವಯತೆಯ ಅಗತ್ಯವನ್ನು ಮನಗಂಡು ಸೌಹಾರ್ದದ ಬದುಕು ಕಟ್ಟುವ ಕೆಲಸಕ್ಕೆ ಮುಂದಾಗಬೇಕಿದೆ ಎಂದು ರಾಮಕೃಷ್ಣ ಮಿಷನ್ ಮಂಗಳೂರು ಇದರ ಸಂಯೋಜಕರಾದ ರಂಜನ್ ಬೆಳ್ಳರ್ಪಾಡಿ ತಿಳಿಸಿದರು. 

ಪರಸ್ಪರ ಧರ್ಮಗಳನ್ನು ಗೌರವಿಸಿ ಸಮಾಜದಲ್ಲಿ ಭಾವೈಕ್ಯತೆ ಬೆಸೆಯುವುದು ಎಲ್ಲರ ಕರ್ತವ್ಯವಾಗಿದೆ. ನಾವು ಪರಸ್ಪರ ಕ್ಷಮಿಸೋಣ, ಪ್ರೀತಿಸೋಣ. ಸಹೋದರತೆ ಬೆಳೆಸೋಣ, ದೇಶ ಕಟ್ಟೋಣ ಎಂದು ಸಿಎಸ್‌ಐ ಶಾಂತಿ ಕೆಥೆಡ್ರಲ್ ಮಂಗಳೂರು ಇದರ ಸಭಾಪಾಲಕರಾದ ರೆ. ಎಂ. ಪ್ರಭುರಾಜ್ ಹೇಳಿದರು.

ಧರ್ಮ ಯಾವುದೇ ಇರಲಿ, ಅವುಗಳ ಗುರಿ ಒಂದೇ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ನಾನು ಶ್ರೇಷ್ಠ ಎನ್ನುವುದು ತಪ್ಪಲ್ಲ. ಆದರೆ ನಾನೇ ಶ್ರೇಷ್ಠ ಎನ್ನುವುದು ತಪ್ಪು. ಅದು ಸಮಸ್ಯೆಗೆ ನಾಂದಿ ಹಾಡುತ್ತದೆ. ದೇಶದ 121 ಕೋಟಿ ಜನಸಂಖ್ಯೆಯಲ್ಲಿ ಗರಿಷ್ಠ 1 ಕೋಟಿಯಷ್ಟು ಜನರು ಸೌಹಾರ್ದ ಕದಡಬಹುದು, ಅಶಾಂತಿ ಸೃಷ್ಟಿಸಬಹುದು. ಆದರೆ ದೇಶದ 120 ಕೋಟಿ ಜನರು ಸೌಹಾರ್ದ ಬಯಸುತ್ತಾರೆ ಎಂಬುದನ್ನು ನಾವು ಮರೆಯಬಾದರು. ಈ ವೇದಿಕೆಯೇ ಆ ಸೌಹಾರ್ದತೆಗೆ ಸಾಕ್ಷಿಯಾಗಲಿ ಎಂದು ನಿವೃತ್ತ ಮುಖ್ಯ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X