ಎ. 30: ಶಾಲಾ ಶಿಕ್ಷಕರ ಕೌನ್ಸಿಲಿಂಗ್
ಮಂಗಳೂರು : ಪ್ರಾಥಮಿಕ ಶಾಲಾ ವೃಂದದ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರ ಹುದ್ದೆಯಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಎ.30ರ ಬೆಳಗ್ಗೆ 10ಕ್ಕೆ ನಗರದ ಬಿಆರ್‌ಸಿ ಕೇಂದ್ರ ಗಾಂಧಿನಗರದಲ್ಲಿ ಮುಂಬಡ್ತಿ ನೀಡಿ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು.
ಅರ್ಹ ಶಿಕ್ಷಕರ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಸಂಬಂಧಿಸಿದ ಶಿಕ್ಷಕರು/ಮುಖ್ಯ ಶಿಕ್ಷಕರು ಈ ದಿನಾಂಕದಂದು ನಿಗದಿಪಡಿಸಿರುವ ಸ್ಥಳದಲ್ಲಿ ಸಭೆಗೆ ಹಾಜರಾಗಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story