Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಡುಬಿದ್ರಿ: ಟ್ರಾಫಿಕ್ ಸಮಸ್ಯೆಗೆ...

ಪಡುಬಿದ್ರಿ: ಟ್ರಾಫಿಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ವಾರ್ತಾಭಾರತಿವಾರ್ತಾಭಾರತಿ30 April 2022 7:15 PM IST
share
ಪಡುಬಿದ್ರಿ: ಟ್ರಾಫಿಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ಪಡುಬಿದ್ರಿ: ಪಡುಬಿದ್ರಿ ಪೇಟೆಯಲ್ಲಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮೇ 1ರಿಂದ ಜಾರಿಗೆ ಬರುವಂತೆ ವಾಹನ ಸಂಚಾರದಲ್ಲಿ ಕೆಲವೊಂದು ಮಾರ್ಪಾಟು ಮಾಡಲಾಗಿದೆ. 

ಪಡುಬಿದ್ರಿ ಗ್ರಾಮ ಪಂಚಾಯಿತಿಯಲ್ಲಿ ಟ್ರಾಫಿಕ್ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖಾಧಿಕಾರಿಗಳು ಮತ್ತು ವಿವಿಧ ಮುಖಂಡರ ಜತೆಗೆ ಶುಕ್ರವಾರ ನಡೆದ ಸಮಾಲೋಚನಾ ಸಭೆಯಲ್ಲಿ ಈ ಬಗ್ಗೆ ತೀರ್ಮಾಣ ಕೈಗೊಳ್ಳಲಾಯಿತು.

ಉಡುಪಿ ಕಡೆಯಿಂದ ಬರುವ ಎ ಪ್ರೆಸ್ ಬಸ್ಸು ಮತ್ತು ಸರ್ವಿಸ್ ಬಸ್ಸುಗಳು ಕೋರ್ಟ್‍ಯಾರ್ಡ್ ಬಳಿಯಿಂದ ಸರ್ವಿಸ್ ರಸ್ತೆಗೆ ಬಂದು ಸಿಎ ಬ್ಯಾಂಕ್ ಸಿಟಿ ಶಾಖೆ ಮುಂಭಾಗ ನಿಲುಗಡೆಗೊಳಿಸಬೇಕು. ಮಂಗಳೂರು ಕಡೆಯಿಂದ ಬರುವ ಎಲ್ಲಾ ಬಸ್ಸುಗಳು ಪಂಪ್‍ ಹೌಸ್ ಬಳಿಯಿಂದ ಸರ್ವಿಸ್ ರಸ್ತೆಗೆ ಆಗಮಿಸಿ ಸನ್ನಿಧಿ ಮೆಡಿಕಲ್ ಬಳಿ ನಿಲುಗಡೆಗೊಳಿಸಬೇಕು. ಮತ್ತು ಎರಡೂ ಬದಿಯಿಂದ ಸರ್ವಿಸ್ ರಸ್ತೆ ಇರುವಲ್ಲಿಯವರೆಗೆ ಬಸ್ಸುಗಳು ಸರ್ವಿಸ್ ರಸ್ತೆಯಲ್ಲೇ ಸಂಚರಿಸಬೇಕು.

ಬಸ್ಸು ತಂಗುದಾಣ, ರಿಕ್ಷಾ, ಟೆಂಪೋ, ಕಾರು ನಿಲ್ದಾಣಗಳಿಗೆ ಸೂಕ್ತ ಸ್ಥಳ ನಿಗದಿಪಡಿಸುವ ಬಗ್ಗೆ ಚರ್ಚಿಸಲಾಯಿತು ಅತೀ ಹೆಚ್ಚು ರಿಕ್ಷಾಗಳಿದ್ದು, ಅವುಗಳನ್ನು ವಿಂಗಡಿಸಿ, ಪಶ್ಚಿಮ ಭಾಗದಲ್ಲಿ ನವರಂಗ್ ಎದುರುಗಡೆ ಮತ್ತು ಬಸ್ಸು ನಿಲ್ದಾಣ ಬಳಿಯ ಬೂತ್ ಬಳಿ ಸರ್ವಿಸ್ ರಸ್ತೆಯ ಒಳಭಾಗದಲ್ಲಿ ನಿಲುಗಡೆಗೊಳಿಸಬೇಕು. ಪೂರ್ವ ಬದಿಯಲ್ಲಿ ಕಾರ್ಕಳ ರಸ್ತೆಯ ಹಳೇ ಲೋಕೋಪಯೋಗಿ ರಸ್ತೆಯಲ್ಲಿ ಮತ್ತು ಹಳೇ ಕೆಇಬಿ ರಸ್ತೆಯ ಉತ್ತರ ಬದಿಯಲ್ಲಿ ನಿಲುಗಡೆಗೊಳಿಸಬೇಕು.

75 ಅಧಿಕ ಟೆಂಪೋಗಳಿದ್ದು, ಕಾರ್ಕಳ ರಸ್ತೆಯ ಬಸ್ಸು ನಿಲ್ದಾಣವನ್ನು ಬಿಟ್ಟು ಪೂರ್ವ ಬದಿಯಲ್ಲಿ ನಿಲುಗಡೆ ಗೊಳಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಎಲ್ಲಾ ನಿರ್ಧಾರಗಳು ತಾತ್ಕಾಲಿಕವಾಗಿದ್ದು, ಮುಂದಿನ ಒಂದು ತಿಂಗಳ ಬಳಿಕ ಸಮಸ್ಯೆ ಬಗೆಹರಿಯದಿದ್ದಲ್ಲಿ ಮಾರ್ಪಾಡುಗೊಳಿಸಲು ನಿರ್ಧರಿಸಲಾಯಿತು.

ಇದೇ ಸಂದರ್ಭ ಮಂಗಳವಾರ ಸಂತೆ ದಿನದಂದು ಸರ್ವಿಸ್ ರಸ್ತೆಯಲ್ಲಿ ಯಾವುದೇ ವಾಹನ ನಿಲುಗಡೆಗೆ ಅವಕಾಶ ಇಲ್ಲ. ಎಲ್ಲಾ ವಾಹನಗಳು ಬೋರ್ಡ್ ಶಾಲಾ ಆವರಣದಲ್ಲಿ ನಿಲುಗಡೆಗೊಳಿಸಬೇಕು. ಅಲ್ಲದೆ ಇನ್ನು ಮುಂದೆ ಸರ್ವಿಸ್ ರಸ್ತೆಯಲ್ಲಿ ಎಲ್ಲಾ ಉದ್ಯಮದವರು ತಮ್ಮ ಅಂಗಡಿಗಳ ಮುಂದೆ ವಾಹನ ನಿಲುಗಡೆಗೆ ಅವಕಾಶ ನೀಡಬಾರದು. ಈ ಬಗ್ಗೆ ಪೋಲಿಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಯಶೋದಾ ಪೂಜಾರಿ, ಆರ್‍ಟಿಒ ಅಧಿಕಾರಿ ಜೆ.ಪಿ.ಗಂಗಾಧರ್, ಪಡುಬಿದ್ರಿ ಎಸ್‍ಐ ಅಶೋಕ್ ಕುಮಾರ್ ನವಯುಗ್ ಕಂಪನಿಯ ಶ್ರೀನಿವಾಸನ್, ಮುಖಂಡರುಗಳಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹರೀಶ್ ಕುಮಾರ್ ಶೆಟ್ಟಿ, ಕೌಸರ್ ಉಪಸ್ಥಿತರಿದ್ದರು. ಪಿಡಿಒ ಪಂಚಾಕ್ಷರಿ ಸ್ವಾಮಿ ಕೆರಮಠ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X