ಸೇವಾ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ
ಮಂಗಳೂರು : ಗ್ರಾಮ ಒನ್ ಯೋಜನೆಯನ್ನು ರಾಜ್ಯದ 9 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸುವ ಸಲುವಾಗಿ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ ಮುಂದಾಗಿದ್ದು, ದ.ಕ. ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಪ್ರಾಂಚೈಸಿ ಆಧಾರದಲ್ಲಿ ಸೇವಾ ಕೇಂದ್ರ ಆರಂಭಿಸಲು ಉದ್ದೇಶಿಸಲಾಗಿದೆ.
ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ ಗ್ರಾಮ ಒನ್ ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂಬ ಉದ್ದೇಶದಿಂದ ಸೇವಾಸಿಂಧು ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.
ಈ ಯೋಜನೆಯಡಿ 750ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅದೇ ರೀತಿ ಸಕಾಲ, ಮಾಹಿತಿ ಹಕ್ಕು ಅಧಿನಿಯಮ, ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದು ಕೊರತೆ ನಿವಾರಣೆ ಕೋರಿ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ವಾರದ ಎಲ್ಲಾ ಏಳು ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಗ್ಗೆ 6 ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಸ್ಥಾಪಿಸಲಾಗಿದೆ.
ಫ್ರಾಂಚೈಸಿ ಅರ್ಜಿದಾರರು ಡಿಪ್ಲೋಮಾ/ಐಟಿಐ/ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ತಾಂತ್ರಿಕ ವಿಭಾಗದಲ್ಲಿ ಪರಿಣತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿದಾರರು ಸ್ವಂತ ಕಟ್ಟಡ ಹೊಂದಿರಬೇಕು ಅಥವಾ ಟೈಲ್ ಗ್ರಾನೈಟ್ ಫ್ಲೋರಿಂಗ್,ಆರ್‌ಸಿಸಿ,ಛಾವಣಿ ಇತ್ಯಾದಿ ಯಾವುದೇ ನೀರು ಸೋರಿಕೆಯಾಗದ ಕಟ್ಟಡಗಳಲ್ಲಿ ಗ್ರಾಮ-1ಕೇಂದ್ರವನ್ನು ಸ್ಥಾಪಿಸಲು ತಯಾರಿರಬೇಕು.
ಆಧಾರ್ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ ಉತ್ತಮ. ಮಹಿಳೆಯರು, ವಿಕಲ ಚೇತನರು, ತೃತೀಯ ಲಿಂಗಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ಆಸಕ್ತರು
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ. ೧೯೧೭೬೨೯೨೭೪೩೭೭, ೯೭೪೩೬೬೯೭೪೧, ೯೬೮೬೫೭೯೨೨೪ ಅಥವಾ ಇ-ಮೇಲ್: onehelpdesk@karnataka.gov.in







