ಗಾಂಜಾ ಸೇವನೆ ಆರೋಪ : ಯುವಕ ಸೆರೆ
ಮಂಗಳೂರು : ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವನೆ ಮಾಡಿ ತಿರುಗಾಡುತ್ತಿದ್ದ ಆರೋಪದಲ್ಲಿ ಅರ್ಕುಳ ವಳಚ್ಚಿಲ್ ಹೌಸ್‌ನ ಇಸ್ಮಾಯಿಲ್(28) ಎಂಬಾತನನ್ನು ಶನಿವಾರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





