Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೀನುಗಾರರು ಕಡಲಾಮೆ ರಕ್ಷಣೆಯ ಮುಖ್ಯ...

ಮೀನುಗಾರರು ಕಡಲಾಮೆ ರಕ್ಷಣೆಯ ಮುಖ್ಯ ರಾಯಭಾರಿಗಳಾಗಲಿ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಆಮೆ ಹಬ್ಬ, ಕಡಲಾಮೆ ಜಾಗೃತಿ, ಮರಳು ಶಿಲ್ಪ, ಗಾಳಿಪಟ ಉತ್ಸವ

ವಾರ್ತಾಭಾರತಿವಾರ್ತಾಭಾರತಿ30 April 2022 8:45 PM IST
share
ಮೀನುಗಾರರು ಕಡಲಾಮೆ ರಕ್ಷಣೆಯ ಮುಖ್ಯ ರಾಯಭಾರಿಗಳಾಗಲಿ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಕುಂದಾಪುರ : ಸರಕಾರ, ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳಿಗಳ ಜೊತೆ ಕಡಲಿನಲ್ಲೇ ಹೆಚ್ಚು ಕಾಲ ಕಳೆಯುವ ಮೀನುಗಾರರು ಕೂಡ ಕಡಲಾಮೆಗಳ ರಕ್ಷಣೆಯ ಮುಖ್ಯ ರಾಯಭಾರಿಗಳಾಗಬೇಕು ಎಂದು ಮೈಸೂರು ಸಂಸ್ಥಾನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಅರಣ್ಯ ಇಲಾಖೆ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಎಫ್‌ಎಸ್‌ಎಲ್ ಇಂಡಿಯಾ ಆಶ್ರಯ ಹಾಗೂ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಶನಿವಾರ ಕೋಡಿಯ ಕಡಲ ಕಿನಾರೆಯಲ್ಲಿ ಆಯೋಜಿಸ ಆಮೆ ಹಬ್ಬ, ಬೀಚ್ ಸ್ವಚ್ಛತೆ, ಕಡಲಾಮೆ ಜಾಗೃತಿ, ಮರಳು ಶಿಲ್ಪ, ಗಾಳಿಪಟ ಉತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮೀನಿನ ಸಂತತಿ ಉಳಿಯಲು, ಹೆಚ್ಚುತ್ತಿರುವ ಜೆಲ್ಲಿ ಫಿಶ್‌ಗಳ ನಾಶಕ್ಕೆ ಕಡಲಾಮೆಗಳ ರಕ್ಷಣೆ ಅತೀ ಅಗತ್ಯವಾಗಿ ಆಗಬೇಕಾಗಿದೆ. ಬೀಚ್‌ಗಳಲ್ಲಿ ಪ್ಲಾಸ್ಟಿಕ್, ತ್ಯಾಜ್ಯ ರಾಶಿ ಹೆಚ್ಚುತ್ತಿರುವುದರಿಂದ ಕಡಲಾಮೆಗಳಿಗೆ ಮಾರಕವಾಗಿದೆ. ನಮ್ಮೂ ರಲ್ಲಿ ವನ್ಯಜೀವಿ, ಕಾಡಿನ ರಕ್ಷಣೆ ಅಗತ್ಯವಾಗಿದ್ದರೆ, ಕರಾವಳಿಯಲ್ಲಿ ಮೀನಿನ ಸಂತತಿ, ಆಮೆ, ಸ್ವಚ್ಛ ಬೀಚ್‌ನ ಅಗತ್ಯತೆ ಬಹಳಷ್ಟಿದೆ. ಆ ದಿಸೆಯಲ್ಲಿ ನಾವೆಲ್ಲರೂ ಕೈಜೋಡಿಸಬೇಕಾಗಿದೆ ಎಂದರು.

ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನಟಲ್ಕರ್ ಮಾತನಾಡಿ, ಅತಿಯಾದ ಪರಿಸರ ನಾಶ, ತ್ಯಾಜ್ಯ ರಾಶಿಯಿಂದಾಗಿ ಎಲ್ಲೆಡೆ ಮಾಲಿನ್ಯ ಹೆಚ್ಚುತ್ತಿದೆ. ಕಡಲ ಕಿನಾರೆಗಳು ಕೂಡ ಸ್ವಚ್ಚತೆ ಇಲ್ಲದೆ ಸಮಸ್ಯೆ ಯಾಗುತ್ತಿದೆ. ಬೀಚ್ ಸ್ವಚ್ಛತೆ, ಕಡಲಾಮೆ ರಕ್ಷಣೆಯಲ್ಲಿ ಇಲಾಖೆ, ಸಂಘಟನೆಗಳ ಜತೆಗೆ ಸ್ಥಳೀಯ ಜನರ ಸಹಭಾಗಿತ್ವವಿದ್ದರೆ ಮಾತ್ರ, ಸರಕಾರದ ಯೋಜನೆ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.

ನಟ ಶೈನ್ ಶೆಟ್ಟಿ, ಕೋಡಿ ಚಕ್ರೇಶ್ವರಿ ದೇವಸ್ಥಾನದ ಗೋಪಾಲ್ ಪೂಜಾರಿ, ಮಂಗಳೂರು ಡಿಸಿಎಫ್ ದಿನೇಶ್, ಕುದುರೆಮುಖ ವನ್ಯಜೀವಿ ಸಂರಕ್ಷಣಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ವಿಜ್ಞಾನಿ ಡಾ. ಸೂರ್ಯ, ಎಫ್‌ಎಸ್‌ಎಲ್ ಅಧ್ಯಕ್ಷ ರಾಕೇಶ್ ಉಪಸ್ಥಿತರಿದ್ದರು.

ಕಡಲಾಮೆ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡ ಬಾಬು ಮೊಗವೀರ, ಗೋಪಾಲ ಬಾಳಿಗ, ಗೋಪಾಲ ಪೂಜಾರಿ ಕೋಡಿ, ಪುರಸಭಾ ಸದಸ್ಯರಾದ ನಾಗರಾಜ ಕಾಂಚನ್, ಕಮಲ ಮಂಜುನಾಥ ಪೂಜಾರಿ, ಲಕ್ಷ್ಮೀ ಬಾಯಿ, ಅಶ್ಪಕ್, ಎಫ್‌ಎಸ್‌ಎಲ್‌ನ ವೆಂಕಟೇಶ, ದಿನೇಶ್ ಸಾರಂಗ, ನಾಗರಾಜ ಶೆಟ್ಟಿ, ಅಶೋಕ್ ಪೂಜಾರಿ ಕೋಡಿ, ರಾಘವೇಂದ್ರ ಕೋಡಿ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್‌ನ ಭರತ್ ಬಂಗೇರ, ಸ್ಥಳೀಯರಾದ ಶಂಕರ ಪೂಜಾರಿ ಕೋಡಿ, ರೀಫ್ ವಾಚ್ ಸಂಸ್ಥೆಯ ತೇಜಸ್ವಿ ಅವರನ್ನು ಗೌರವಿಸಲಾಯಿತು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಸ್ವಾಗತಿಸಿದರು. ಕಲ್ಪನಾ ಭಾಸ್ಕರ್ ವಂದಿಸಿದರು. ಅರಣ್ಯ ಇಲಾಖೆಯ ನಾಗರಾಜ ಪಟವಾಲ್ ಕಾರ್ಯ ಕ್ರಮ ನಿರೂಪಿಸಿದರು.

ಮರಳಿನ ಶಿಲ್ಪದ ಮೂಲಕ ಕಡಲಾಮೆ ಪ್ರತಿಕೃತಿ, ತೆಂಗಿನ ಸಿಪ್ಪೆಮೂಲಕ ಕಡಲಾಮೆ ಪ್ರತಿಕೃತಿ ನೋಡುಗರ ಗಮನಸೆಳೆಯಿತು. ’ಕಡಲೊಡಲಿಗೆ ಸ್ವಾಗತ’ ಎನ್ನುವ ಬರಹದೊಂದಿಗೆ ಖಾಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳ ಮೂಲಕ ಸಿಂಗರಿಸಿದ ಸ್ವಾಗತ ಕಮಾನು ವಿಭಿನ್ನವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X