ಮಂಗಳೂರು ವಿಮಾನ ನಿಲ್ದಾಣ; ಜಪಾನ್, ಥೈಲ್ಯಾಂಡ್ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್

ಮಂಗಳೂರು : ಜಪಾನ್ ಮತ್ತು ಥೈಲ್ಯಾಂಡ್ ದೇಶಗಳಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಬರುವ ಪ್ರಯಾಣಿಕರನ್ನು ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು ಎಂದು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಕೋವಿಡ್-೧೯ ಸೋಂಕಿನ ಲಕ್ಷಣಗಳಿರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಪ್ರಯೋಗಾಲಯದಲ್ಲಿಯೇ ಆರ್‌ಟಿಪಿಸಿಆರ್ ಪರೀಕ್ಷೆಗೊಳಪಡಿಸಲಾಗುವುದು ಹಾಗೂ ಪಾಸಿಟಿವ್ ಮಾದರಿಗಳನ್ನು ಜೀನೋಮ್ ಸೀಕ್ವೇನ್ಸಿಂಗ್ ಪರೀಕ್ಷೆಗೆ ಕಳುಹಿಸುವುದು ಕಡ್ಡಾಯವಾಗಿದೆ. ಕೋವಿಡ್-೧೯ ಧೃಡಪಟ್ಟ ಪ್ರಕರಣಗಳಿಗೆ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಿಷ್ಟಾಚಾರದಂತೆ ಚಿಕಿತ್ಸೆ ಮತ್ತು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದ್ದಾರೆ.
Next Story