Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರು ತಿಂಗಳಲ್ಲಿ ಎಲ್ಲರಿಗೂ ಆಯುಷ್ಮಾನ್...

ಆರು ತಿಂಗಳಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡ್, ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಡ್ ವಿತರಿಸಿ: ಸಚಿವ ಡಾ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ30 April 2022 11:15 PM IST
share
ಆರು ತಿಂಗಳಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡ್, ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಡ್ ವಿತರಿಸಿ: ಸಚಿವ ಡಾ.ಸುಧಾಕರ್

ಬೆಂಗಳೂರು, ಎ. 30: ‘ಆಯುಷ್ಮಾನ್ ಭಾರತ್ ಯೋಜನೆ'ಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡುಗಳು ದೊರೆಯುವಂತೆ ಮಾಡಬೇಕು. ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಈ ಕಾರ್ಡ್ ದೊರೆಯುವಂತೆ ಕಾರ್ಯನಿರ್ವಹಿಸಬೇಕು' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ‘ಆರೋಗ್ಯ ಮಂಥನ' ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿವಿಧ ಜಿಲ್ಲೆಗಳ ಆರೋಗ್ಯ-ಕ್ಷೇಮ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂ ಯೋಜನೆಗಳ ಫಲಾನುಭವಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಆಯುಷ್ಮಾನ್ ಕಾರ್ಡ್ ಮೂಲಕ ಜನರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಈ ಕಾರ್ಡ್ ಎಲ್ಲರಿಗೂ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ' ಎಂದರು.

ಹೂವಿನಹಡಗಲಿಯ ಮೈಲಾರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ವರ್ಷದ ಪ್ರಸನ್ನ ಮಾತನಾಡಿ, ‘10 ವರ್ಷದಿಂದ ಬಿಪಿ ಹಾಗೂ ಮಧುಮೇಹವಿದ್ದು, ದಾವಣಗೆರೆ, ಹಾವೇರಿ ಮೊದಲಾದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಈಗ ನಮ್ಮ ಊರಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಪ್ರತಿ ತಿಂಗಳು ಉಚಿತವಾಗಿ ಮಾತ್ರೆ ದೊರೆಯುತ್ತಿದ್ದು, ಮಧುಮೇಹ ನಿಯಂತ್ರಣಕ್ಕೆ ಬಂದಿದೆ' ಎಂದು ತಿಳಿಸಿದರು. 

‘ಆಹಾರ ಮತ್ತು ವ್ಯಾಯಾಮ ಕುರಿತು ಮಾರ್ಗದರ್ಶನ ದೊರೆತಿದೆಯೇ?' ಎಂದು ಸಚಿವ ಡಾ.ಕೆ.ಸುಧಾಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸನ್ನ, ‘ಪ್ರತಿ ದಿನ ವಾಕಿಂಗ್ ಹಾಗೂ ವ್ಯಾಯಾಮ ಮಾಡಲು ಮಾರ್ಗದರ್ಶನ ದೊರೆತಿದೆ. ಯೋಗವನ್ನೂ ಮಾಡುತ್ತಿದ್ದೇನೆ ಎಂದು ಹೇಳಿದರು.

‘1ರಿಂದ 2 ಸಾವಿರ ರೂ.ಬದಲು 500 ರೂ.ಖರ್ಚು: ‘ಬೆಂಗಳೂರಿನ ಯಲಹಂಕದ ಜನಔಷಧಿ ಕೇಂದ್ರದ ಫಲಾನುಭವಿ ವಸಂತ್ ಮಾತನಾಡಿ, ‘ಜನ ಔಷಧಿ ಕೇಂದ್ರದಿಂದಾಗಿ ಮಧುಮೇಹದ ಔಷಧಿಯ ಖರ್ಚು ತಿಂಗಳಿಗೆ 2ರಿಂದ 3 ಸಾವಿರ ರೂ.ಕಡಿಮೆಯಾಗಿದೆ. 1ರಿಂದ 2 ಸಾವಿರ ರೂ.ಬದಲು ಕೇವಲ 500 ರೂ.ಗೆ ಔಷಧಿ ಇಲ್ಲಿ ದೊರೆಯುತ್ತಿದೆ' ಎಂದು ಅವರು ಶ್ಲಾಘಿಸಿದರು.

‘ಯಲಹಂಕದ ಜನ ಔಷಧಿ ಕೇಂದ್ರದ ನೇತ್ರಾ ಮಾತನಾಡಿ, ‘ಆರಂಭದಲ್ಲಿ 90 ಸಾವಿರ ಔಷಧಿ ಪೂರೈಕೆಯಾಗುತ್ತಿದ್ದು, ದಿನಕ್ಕೆ 100-200 ಮಾತ್ರ ಮಾರಾಟವಾಗುತ್ತಿತ್ತು. ಈಗ ದಿನಕ್ಕೆ ಸುಮಾರು 20 ಸಾವಿರದಷ್ಟು ಔಷಧಿ ಮಾರಾಟವಾಗುತ್ತಿದೆ. ಇಡೀ ದೇಶದಲ್ಲಿ 1 ಲಕ್ಷ ಔಷಧಿ ಮಾರಾಟ ಗುರಿಯನ್ನು ನಾವು ತಲುಪಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಜನರಿಗೆ ಔಷಧಿ ತಲುಪಿಸಿದ್ದೇವೆ. ಮೊದಲು ಔಷಧಿಗೆ 1-2 ಸಾವಿರ ರೂ.ಖರ್ಚು ಮಾಡುತ್ತಿದ್ದರೆ, ಈಗ 700-800 ರೂ.ಖರ್ಚು ಮಾಡುತ್ತಿದ್ದೇವೆ' ಎಂದು ರೋಗಿಗಳು ಹೇಳುತ್ತಿದ್ದಾರೆ ಎಂದು ತಿಳಿಸಿದರು.

ವೈದ್ಯಕೀಯ ತಪಾಸಣೆಗೆ ಸೂಚನೆ: ‘ರಾಜ್ಯದ ಪ್ರತಿ ಆರೋಗ್ಯ ಉಪ ಕೇಂದ್ರ ವ್ಯಾಪ್ತಿಯಲ್ಲಿ ಎಲ್ಲರಿಗೂ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಯಬೇಕಿದೆ. ಬಳಿಕ ಈ ಅಂಕಿ ಅಂಶವನ್ನು ಇಲಾಖೆಗೆ ಕಳುಹಿಸಿಕೊಡಬೇಕು. ಇದನ್ನು ಎಲ್ಲಾ ವೈದ್ಯರು ಜನಾಂದೋಲನದಂತೆ ಮಾಡಿ ಎಂದು ಡಾ.ಕೆ.ಸುಧಾಕರ್ ಸೂಚನೆ ನೀಡಿದರು.

ಕರ್ನಾಟಕಕ್ಕೆ ಪ್ರಥಮ ಸ್ಥಾನ: 

ವರ್ಚುವಲ್ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆಯುಷ್ಮಾನ್ ಭಾರತ್ ಯೋಜನೆಯ ಆಯುಷ್ಮಾನ್ ಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷ 960 ಕೋಟಿ ರೂ.ಗೂ ಅಧಿಕ ಹಣವನ್ನು ಇದರಡಿ ನೀಡಲಾಗಿದೆ. 6.68 ಕೋಟಿ ಜನರು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸೇವೆ ಪಡೆದಿದ್ದಾರೆ. 997 ಜನ ಔಷಧಿ ಕೇಂದ್ರಗಳು ರಾಜ್ಯದಲ್ಲಿದ್ದು, ಇಡೀ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಜನ ಔಷಧಿಗೆ ಹೆಚ್ಚು ಜನರು ಬಂದು ಔಷಧಿ ಪಡೆಯುವಂತಾಗಬೇಕು. ಅಸಾಂಕ್ರಾಮಿಕ ರೋಗಗಳ ತಪಾಸಣೆ, ಚಿಕಿತ್ಸೆಗೆ ವೈದ್ಯರು ಹೆಚ್ಚು ಒತ್ತು ನೀಡಬೇಕು. ಮಧುಮೇಹಿಗಳ ಆಹಾರ ಶೈಲಿ, ನಿತ್ಯದ ಚಟುವಟಿಕೆಗಳು ಬದಲಾಗಬೇಕು. ಇದಕ್ಕಾಗಿ ವೈದ್ಯರು ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. 2025ಕ್ಕೆ ಕ್ಷಯ ರೋಗವನ್ನು ರಾಜ್ಯದಿಂದ ನಿರ್ಮೂಲನೆ ಮಾಡುವ ಗುರಿ ಇದೆ. ಇದರಲ್ಲಿ ವೈದ್ಯರು, ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ'

-ಡಾ.ಕೆ.ಸುಧಾಕರ್ ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X