ಬೆಂಗಳೂರು: ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪಟ್ಟು
ಬೆಂಗಳೂರು, ಮೇ 1: ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ, ಖಾಸಗೀಕರಣ ವ್ಯವಸ್ಥೆಯನ್ನು ಕೈಬಿಡಬೇಕೆಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಗ್ರಹಿಸಿದರು.
ರವಿವಾರ ನಗರದ ಫ್ರೀಡಂ ಪಾರ್ಕ್ ಮೈದಾನದಲ್ಲಿ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ ಕಾರ್ಮಿಕ ಸಂಘಗಳ ಮುಖಂಡರು, ಸದಸ್ಯರು, ಅಸಂಘಟಿಕ ಕಾರ್ಮಿಕ ಹಿತ ಕಾಪಾಡಲು ಸರಕಾರ ಮುಂದಾಗಬೇಕೆಂದು ಆಗ್ರಹಿಸಿದರು.
ಮೇ ದಿನಾಚರಣೆವನ್ನುದ್ದೇಶಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಜಿ.ಆರ್.ಶಿವಶಂಕರ್, ಕೇಂದ್ರ ಸರಕಾರವು ಎನ್‍ಎಂಪಿ ಹಿಂಪಡೆಯಬೇಕು. ಗುತ್ತಿಗೆ, ಹೊರಗುತ್ತಿಗೆ ಕಾರ್ಮಿಕರಿಗೆ ಯೋಗ್ಯ ವೇತನ ನೀಡಿ, ಭದ್ರತೆ ಒದಗಿಸಬೇಕು.ಅದೇ ರೀತಿ, ನರೇಗಾ ಯೋಜನೆದಡಿ ಹೆಚ್ಚಿನ ಅನುದಾನ ನೀಡಿ, ನಗರ ಪ್ರದೇಶಕ್ಕೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಆಶಾ, ಅಂಗನವಾಡಿ, ಬಿಸಿ ಊಟ ನೌಕರರನ್ನು ಖಾಯಂಗೊಳಿಸಬೇಕು. ಬೆಲೆ ಏರಿಕೆಗೆ ಕಡಿವಾಣ ಹಾಕಿ, ಎನ್‍ಪಿಎಸ್ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನೇ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಹೋರಾಟಗಾರ ಎಂ.ಝೆಡ್.ಆಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.





