ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಜ್ಞಾನಜ್ಯೋತಿ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ್ ಸಿಐಡಿಗೆ ಶರಣು

ಕಾಶಿನಾಥ್
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಇಲ್ಲಿನ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ ಸೋಮವಾರ ಸಿಐಡಿ ಪೊಲೀಸರಿಗೆ ಶರಣಾಗಿದ್ದಾನೆ.
ಪ್ರಕರಣದ ಮುಖ್ಯ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಒಡೆತನದ ಜ್ಞಾನಜ್ಯೋತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿದೆ.
ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ, ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮಂಜುನಾಥ ಮೇಳಕುಂದಿ ರವಿವಾರ ಸಿಐಡಿಗೆ ಶರಣಾಗಿದ್ದರು. ಪ್ರಕರಣ ಬಯಲಿಗೆ ಬರಲು ಕಾರಣರಾಗಿದ್ದ ಶ್ರೀಧರ ಪವಾರ್ ಅವರನ್ನು ರವಿವಾರ ಬಂಧಿಸಲಾಗಿತ್ತು.
ಇದೀಗ ದಿವ್ಯಾ ಹಾಗರಗಿ ವಿಚಾರಣೆ ಮಧ್ಯೆ ಕಾಶಿನಾಥ್ ಶರಣಾಗಿದ್ದಾರೆ.
Next Story





