Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿ ಪಶ್ಚಾತ್ತಾಪಪಡುವ ದಿನ ಬರಲಿದೆ:...

ಬಿಜೆಪಿ ಪಶ್ಚಾತ್ತಾಪಪಡುವ ದಿನ ಬರಲಿದೆ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ2 May 2022 12:45 PM IST
share
ಬಿಜೆಪಿ ಪಶ್ಚಾತ್ತಾಪಪಡುವ ದಿನ ಬರಲಿದೆ: ರಮಾನಾಥ ರೈ

ಮಂಗಳೂರು, ಮೇ 2: ಸರಕಾರ ಮಾಡುವ ಅಭಿವೃದ್ಧಿಗಳಿಗಾಗಿ ಜನ ಮತ ಹಾಕುವುದಿಲ್ಲ ಎಂಬ ನಂಬಿಕೆ ಬಿಜೆಪಿಯವರದ್ದಾಗಿದ್ದು, ಅವರು ಪಶ್ಚಾತ್ತಾಪ ಪಡುವ ದಿನ ಖಂಡಿತಾ ಬರಲಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಧರ್ಮ, ದೇವರು ದೇಶ ಪ್ರೇಮದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಯಾಚಿಸುವ ಬಿಜೆಪಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬುದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಸಾಮರಸ್ಯ ಕದಡುತ್ತಿರುವವರಿಗೆ ಜನ ಪಾಠ ಕಲಿಸಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಯಾವತ್ತೂ ಸಾಮಾಜಿಕ ಸಾಮರಸ್ಯ ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಒತ್ತು ನೀಡಿದೆ. ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ಮಾಡಿದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕಾರ್ಯವನ್ನಷ್ಟೆ ಪ್ರಸಕ್ತ ರಾಜ್ಯ ಸರಕಾರ ಮಾಡುತ್ತಿದೆ. ಜಿಲ್ಲೆಯಲ್ಲಿ ಪಶ್ಚಿಮವಾಹಿನಿ, ಅಂಬೇಡ್ಕರ್ ಭವನ, ಜಿಲ್ಲಾಧಿಕಾರಿ ಕಚೇರಿ, ಜಲಸಿರಿ, ತುಂಬೆ ಅಣೆಕಟ್ಟು, ಸ್ಮಾರ್ಟ್ ಸಿಟಿ ಯೋಜನೆ ಎಲ್ಲವೂ ಸಿದ್ದರಾಮಯ್ಯ ನೇತೃತ್ವದ ಸರಕಾರದ ಅವಧಿಯಲ್ಲಿ ಆರಂಭಗೊಂಡಿರುವುದು ಎಂದು ಅವರು ಹೇಳಿದರು.

ಬಿಜೆಪಿ ಸರಕಾರದ ವೈಫಲ್ಯಗಳು ಹೆಚ್ಚುತ್ತಿದ್ದು, ಬೆಲೆ ಏರಿಕೆ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಕೇಂದ್ರ ಸರಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು, ಜನರ ಮೇಲೆ ಭಾರ ಹೊರಿಸುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ನಿಯಂತ್ರಣದಲ್ಲಿ ರಾಜ್ಯ ಸರಕಾರ ಕೂಡಾ ಹೊಣೆಗಾರರು ಎಂದು ಹೇಳಿಕೆ ನೀಡುತ್ತಿದೆ. ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದಾಗ ಪೆಟ್ರೋಲ್ ಡೀಸೆಲ್ ದರ ಏರಿಕೆ ಬಗ್ಗೆ ಬಿಜೆಪಿಯವರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದಾಗಲೂ ರಾಜ್ಯ ಸರಕಾರ ಹೊಣೆಗಾರರು ಎಂದು ಒಂದು ಬಾರಿಯೂ ಯಾರೂ ಹೇಳಿಕೆ ನೀಡಿಲ್ಲ. ಇದೀಗ ಜನರನ್ನು ಗೊಂದಲಕ್ಕೀಡು ಮಾಡಿ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ಸರಕಾರ ಅದರಿಂದ ತಪ್ಪಿಸಲು ಜನರ ನಡುವೆ ಕೋಮು ಭಾವನೆ ಸೃಷ್ಟಿಸಿ ಜಗಳ ಮಾಡಿಸಿ ಅದರ ಪ್ರಯೋಜನ ಪಡೆಯುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.

 ಈ ನಡುವೆ ಗಲಾಟೆಗೆ ಕಾಂಗ್ರೆಸ್ ಕಾರಣ ಎಂದು ಸಂಸದರು ಹೇಳುತ್ತಾರೆ. ಅದಕ್ಕೆ ಅವರು ಪುರಾವೆ ಒದಗಿಸಲಿ. ಜಿಲ್ಲೆಯಲ್ಲಿ ಧರ್ಮದ ಹೆಸರಿನಲ್ಲಿ ಅನೇಕ ಹತ್ಯೆ, ಸಂಘರ್ಷಗಳು ನಡೆದಿವೆ. ಆದರೆ ಆ ಹತ್ಯೆಯ ಪ್ರಕರಣಗಳಲ್ಲಿ ಎಫ್‌ಐಆರ್‌ಗೊಳಗಾಗಿ ಆರೋಪಿ ಸ್ಥಾನದಲ್ಲಿ ಯಾವನೇ ಒಬ್ಬ ಕಾಂಗ್ರೆಸ್ ಕಾರ್ಯಕರ್ತ ಇಲ್ಲ. ಸಭೆ ಸಮಾರಂಭಗಳ ವೇದಿಕೆಗಳಲ್ಲಿ ಕಾಂಗ್ರೆಸ್‌ನವರು ಯಾವತ್ತೂ ಪ್ರಚೋದನಕಾರಿ ಭಾಷಣ ಮಾಡುವುದಿಲ್ಲ. ಇದ್ದರೆ ತೋರಿಸಲಿ ಎಂದು ರಮಾನಾಥ ರೈ ಸವಾಲೆಸೆದರು.

ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಆಡಿ 2012ರಲ್ಲಿ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಯೋಜನೆ ಆರಂಭಿಸಿರುವುದು. ಸರ್ವ ಶಿಕ್ಷಾ ಅಭಿಯಾನ ಜಾರಿಗೊಳಿಸಿದ್ದು ಕೂಡಾ ಮನಮೋಹನ ಸಿಂಗ್ ಅವಧಿಯಲ್ಲಿ. ಬೆಲೆ ಏರಿಕೆ ಆ ಅವಧಿಯಲ್ಲಿ ಆಗಿಲ್ಲ. ಚುನಾವಣಾ ಪ್ರಚಾರ ಭಾಷಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ನೋಡಿ, ಸಿಲಿಂಡರ್‌ಗೆ ನಮಸ್ಕಾರ ಹಾಕಿ ಮತ ಹಾಕಿ ಎಂದವರು 340 ರೂ.ಗಳಿದ್ದ ಅಡುಗೆ ಅನಿಲ ದರವನ್ನು ಇಂದು 1,000 ರೂ.ಗೆ ತಂದು ನಿಲ್ಲಿಸಿದ್ದಾರೆ. ಮಾಧ್ಯಮದವರು ಕೂಡಾ ಪ್ರಧಾನಿಯಾಗಿರುವ ನರೇಂದ್ರ ಮೋದಿಯನ್ನು ಪಶ್ನಿಸುತ್ತಿಲ್ಲ. ಅವರು ಸುದ್ದಿಗೋಷ್ಠಿಯನ್ನೇ ನಡೆಸುವುದಿಲ್ಲ. ಆದರೆ ವಿಪಕ್ಷದಲ್ಲಿರುವ ರಾಹುಲ್ ಗಾಂಧಿ, ಸಿದ್ದರಾಮಯ್ಯರನ್ನು ಈ ಬಗ್ಗೆ ಪ್ರಶ್ನಿಸುತ್ತಾರೆ ಎಂದು ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದುತ್ವ ಸಂಘಟನೆಗಳಿಂದ 'ಹಿಂದೂ ಶಾಸಕ' ಅಭಿಯಾನದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮಾನಾಥ ರೈ, ಅದು ಬಿಜೆಪಿಯವರ ಕಾರ್ಯತಂತ್ರ ಅವರು ಮಾಡುತ್ತಾರೆ. ನಮ್ಮ ಕಾರ್ಯತಂತ್ರ ನಾವು ಮಾಡುತ್ತೇವೆ ಎಂದರು.

ಪಿಎಸ್ಸೈ ನೇಮಕಾತಿ ಹಗರಣ ಗಂಭೀರ ವಿಚಾರ. ಕಾನೂನು ಸುವ್ಯವಸ್ಥೆಗಾಗಿ ಪಿಎಸ್ಸೈಗಳ ಪಾತ್ರ ಮಹತ್ತರವಾಗಿದ್ದು, ಆ ನೇಮಕಾತಿಯಲ್ಲಿ ಅಕ್ರಮ ನಡೆಸಿರುವ ಪ್ರಮುಖ ಆರೋಪಿ ಯಾವ ಪಕ್ಷದವರೆಂದು ಎಲ್ಲರಿಗೂ ತಿಳಿದಿದೆ. ಆ ಆರೋಪಿಗೆ ನಮ್ಮ ಪಕ್ಷದ ಕೆಲವರ ಪರಿಚಯ ಇದೆ ಎನ್ನುವುದು ಮುಖ್ಯವಲ್ಲ. ಆದರೆ ಪ್ರಮುಖ ಆರೋಪಿ ಯಾವ ಪಕ್ಷದವರು ಎಂಬುದು ಮುಖ್ಯ ವಿಚಾರ ಎಂದು ರಮಾನಾಥ ರೈ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಶಾಹುಲ್ ಹಮೀದ್, ಹರಿನಾಥ್, ಶಶಿಧರ ಹೆಗ್ಡೆ, ಪ್ರಕಾಶ್ ಸಾಲ್ಯಾನ್, ಮಮತಾ ಗಟ್ಟಿ, ಅಪ್ಪಿ, ದಿವ್ಯಪ್ರಭಾ, ಸಲೀಂ, ಬೇಬಿ ಕುಂದರ್, ಉಮೇಶ್ ದಂಡೆಕೇರಿ, ಅಬ್ದುಲ್ ರವೂಫ್, ನವೀನ್ ಡಿಸೋಜ, ಶೆರಿಲ್, ಶಬ್ಬೀರ್, ವಿಶ್ವನಾಥ್, ನಝೀರ್ ಬಜಾಲ್, ಸುದೀಪ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X