Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ.ಹರಿಕೃಷ್ಣ ಪುನರೂರು ನಿಜವಾದ...

ಡಾ.ಹರಿಕೃಷ್ಣ ಪುನರೂರು ನಿಜವಾದ ‘ಧರ್ಮದರ್ಶಿ’ : ಚಂದ್ರಶೇಖರ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ2 May 2022 5:24 PM IST
share
ಡಾ.ಹರಿಕೃಷ್ಣ ಪುನರೂರು ನಿಜವಾದ ‘ಧರ್ಮದರ್ಶಿ’ : ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ಡಾ. ಹರಿಕೃಷ್ಣ ಪುನರೂರು ಅವರು ಕೇವಲ ಧಾರ್ಮಿಕ ಲೋಕದ ಧರ್ಮದರ್ಶಿಯಾಗಿರಲಿಲ್ಲ. ಅವರು ಸಾಹಿತ್ಯ, ಕ್ರೀಡೆ, ಸಮಾಜ ಸೇವೆ, ಸಂಸ್ಕೃತಿ, ಸಾಂಸ್ಕೃತಿಕ ಲೋಕ ಹೀಗೆ ಆಯಾ ಕ್ಷೇತ್ರದ ಧರ್ಮವನ್ನು ಅರಿತು ಅವುಗಳನ್ನು ಪಾಲಿಸಿಕೊಂಡು ಬಂದ ನಿಜವಾದ ‘ಧರ್ಮದರ್ಶಿ’, ಮಂಗಳೂರು ವಿವಿಯು ಗೌರವ ಡಾಕ್ಟರೇಟ್ ನೀಡುವ ಮೂಲಕ ಸಮಾಜಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವಿಸಿದೆ ಎಂದು ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಡಾ.ಹರಿಕೃಷ್ಣ ಪುನರೂರುರನ್ನು ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಚಂದ್ರಶೇಖರ ಆಶ್ರಮದ ವತಿಯಿಂದ ಗೌರವಿಸಿದ ಬಳಿಕ ಅವರು ಮಾತನಾಡಿದರು.

ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಸಾಹಿತ್ಯ, ಕ್ರೀಡೆ, ಸಮಾಜ ಸೇವೆ, ಸಾಂಸ್ಕೃತಿಕ ಸೇವೆಗಾಗಿ ಕೇಂದ್ರ ಸರಕಾರವು ನೀಡುವ ಪದ್ಮಶ್ರೀ ಪುರಸ್ಕಾರ ಪಡೆಯಲು ಅರ್ಹರಾಗಿದ್ದಾರೆ. ಮುಂದಿನ ದಿನಗಳಲ್ಲಿ ಸರಕಾರವು ಇವರ ಸೇವೆಯನ್ನು ಪರಿಗಣಿಸಿ, ಗುರುತಿಸುವ ಕೆಲಸ ಮಾಡಬೇಕು. ಇದರಿಂದ ಇನ್ನಷ್ಟು ಮಂದಿಗೆ ತಮ್ಮನ್ನು ಸಮಾಜ ಸೇವೆಗೆ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಉದ್ಯಮದಿಂದ ಬಂದ ಲಾಭದಿಂದ ನೂರಾರು ವಸತಿ ನಿರ್ಮಾಣ ಮಾಡಿ ಬಡವರಿಗೆ ಆಶ್ರಯ ನೀಡಿದ ಆಶ್ರಯದಾತರಾದ ಪುನರೂರು ಅವರು, ಸಾಹಿತ್ಯ, ಸಾಂಸ್ಕೃತಿಕ ಲೋಕದ ಪೋಷಕರಾಗಿ ಸೇವೆ ಮಾಡಿದ್ದಾರೆ.

ಸಾಹಿತಿಯಲ್ಲದವರು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿ ಏನು ಮಾಡಬಹುದು ಎಂದು ಪ್ರಶ್ನಿಸಿದ ಪ್ರಶ್ನಾಕಾರರಿಗೆ, ಕನ್ನಡ ಸಾಹಿತ್ಯ ಪರಿಷತ್‌ಗೆ ಹೊಸ ಸ್ವರೂಪ ನೀಡುವ ಮೂಲಕ ಕನ್ನಡ ನಾಡು, ನುಡಿ, ಭಾಷೆಗಾಗಿ ಹೋರಾಟ ನಡೆಸುವ ಮೂಲಕ, ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸುವುದರೊಂದಿಗೆ ಸಾಹಿತಿಗಳಿಗೆ ನಾನಾ ವೇದಿಕೆಯನ್ನು ಕಲ್ಪಿಸುವ ಮೂಲಕ ಕ್ರಾಂತಿ ಮಾಡಿದ ಸಂಘಟಕ. ಹೀಗಾಗಿ ನಿಜವಾದ ಅರ್ಥದ ಸಾಹಿತ್ಯ ಧರ್ಮದರ್ಶಿಯಾಗಿದ್ದಾರೆ. ಪುನರೂರು ಅವರ ಹಡೆದ ತಾಯಿ ತುಳುದೇವಿಯಾದರೆ ಅವರ ಪಡೆದ ತಾಯಿ ಕನ್ನಡಾಂಬೆಯ ವಾತ್ಸಲ್ಯದ ವೃಕ್ಷದಲ್ಲಿ ಬೆಳೆದು ಯಶಸ್ಸಿನ ಕುಸುಮವಾಗಿದ್ದಾರೆ ಎಂದರು.

ಈ ಸಂದರ್ಭ ಉಷಾ ಹರಿಕೃಷ್ಣ ಪುನರೂರು, ಪುನರೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಉದ್ಯಮಿ ರಾಮಮೂರ್ತಿರಾವ್, ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಸಿ ಭಟ್, ಸಂಚಾಲಕ ಪುನೀತ್ ಕೃಷ್ಣ, ಪುನರೂರು ವಿಪ್ರ ಸಂಪದದ ಅಧ್ಯಕ್ಷ ಸುಧಾಕರ್ ರಾವ್ , ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಸುರೇಶ್ ರಾವ್ ನೀರಳಿಕೆ ರಾಘವೇಂದ್ರರಾವ್ ಕೆರೆಕಾಡು, ಪುರಂದರ ಶೆಟ್ಟಿಗಾರ್, ಪಟೇಲ್ ವಿಶ್ವನಾಥ ರಾವ್, ಗೋಪಿನಾಥ್ ರಾವ್, ದೇವಸ್ಥಾನದ ಅರ್ಚಕ ಶಶಾಂಕ್ ಮುಚ್ಚಿಂತಾಯ, ಧನಂಜಯ ಶೆಟ್ಟಿಗಾರ್, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X