Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಮೇ 4ಕ್ಕೆ ಕೆಪಿಎಸ್‍ಸಿ...

ಬೆಂಗಳೂರು | ಮೇ 4ಕ್ಕೆ ಕೆಪಿಎಸ್‍ಸಿ ಕಚೇರಿಗೆ ಬೀಗ ಜಡಿದು ಎಎಪಿ ಪ್ರತಿಭಟನೆ: ಮೋಹನ್ ದಾಸರಿ

ವಾರ್ತಾಭಾರತಿವಾರ್ತಾಭಾರತಿ2 May 2022 10:24 PM IST
share
ಬೆಂಗಳೂರು | ಮೇ 4ಕ್ಕೆ ಕೆಪಿಎಸ್‍ಸಿ ಕಚೇರಿಗೆ ಬೀಗ ಜಡಿದು ಎಎಪಿ ಪ್ರತಿಭಟನೆ: ಮೋಹನ್ ದಾಸರಿ

ಬೆಂಗಳೂರು, ಮೇ 2: ವ್ಯಾಪಕ ಭ್ರಷ್ಟಾಚಾರದ ಕೂಪವಾಗಿರುವ ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‍ಸಿ) ಕಚೇರಿಗೆ ನಾಳೆ (ಮೇ 4) ಬೀಗ ಜಡಿದು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದರು.

ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್ ದಾಸರಿ, ಶ್ಯಾಮ್ ಭಟ್‍ರಂತಹ ಪರಮ ಭ್ರಷ್ಟಾಚಾರಿಗಳನ್ನು ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದೇ ದೊಡ್ಡ ದುರಂತವಾಗಿದೆ. ಇದನ್ನು ಖಂಡಿಸಿ ರಾಜಭವನದ ಮುಂದೆ ಪ್ರತಿಭಟನೆ ಮಾಡಿದ್ದ ಎಎಪಿ ಕಾರ್ಯಕರ್ತರು ಈಗಲೂ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ.  ಭ್ರಷ್ಟಾಚಾರದ ತಾಣ ಎಂಬ ಕುಖ್ಯಾತಿಗೆ ಒಳಗಾಗಿರುವ ಕರ್ನಾಟಕ ಲೋಕಸೇವಾ ಆಯೋಗವನ್ನು ಸರಿದಾರಿಗೆ ತರುವ ಕುರಿತು ಎಲ್ಲ ಸರಕಾರಗಳು ಮಾತನಾಡಿವೆ. ಆದರೆ ಇದಕ್ಕೆ ಕಾಯಕಲ್ಪ ಮಾತ್ರ ಇನ್ನೂ ಆಗಿಲ್ಲ. ಹಾಗಾಗಿ ಕೆಪಿಎಸ್‍ಸಿ ಅಕ್ರಮಗಳನ್ನು ಖಂಡಿಸಿ, ಕೆಪಿಎಸ್‍ಸಿ ಕಚೇರಿಗೆ ಬೀಗ ಜಡಿದು ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.
1998ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಹುದ್ದೆಗಳ ನೇಮಕದಲ್ಲಿ ಅನರ್ಹರಿಗೆ ಹುದ್ದೆ ನೀಡಿರುವುದನ್ನು ಕರ್ನಾಟಕ ಲೋಕಸೇವಾ ಆಯೋಗ ಒಪ್ಪಿಕೊಂಡಿದ್ದು, 28 ಗೆಜೆಟೆಡ್ ಅಧಿಕಾರಿಗಳನ್ನು ಕೈಬಿಟ್ಟು ಉಳಿದವರನ್ನು ನೇಮಿಸಲಾಯಿತು. 1998, 1999, 2004ರಲ್ಲಿ ಕೆಪಿಎಸ್ಸಿ ನಡೆಸಿದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೆ.ಆರ್. ಖಲೀಲ್ ಅಹ್ಮದ್ ಮತ್ತು ಇತರ ಅಭ್ಯರ್ಥಿಗಳು ಹೈಕೋರ್ಟ್‍ಗೆ 2008ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ 2016ರ ಜೂನ್ 21ರಂದು ತೀರ್ಪು ನೀಡಿತ್ತು. ಇದನ್ನು ಸುಪ್ರೀಂ ಕೋರ್ಟ್ 2018 ರಲ್ಲಿ ಎತ್ತಿ ಹಿಡಿದಿದೆ ಎಂದು ಅವರು ಮಾಹಿತಿ ನೀಡಿದರು.

ಅಕ್ರಮಗಳನ್ನೇ ಹೊದ್ದು ಮಲಗಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 2015ನೇ ಸಾಲಿನ 428 ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲೂ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಹಿಂದೆಲ್ಲಾ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಗೊಂಡ ಬಳಿಕ ಭ್ರಷ್ಟಾಚಾರವಾದರೆ 2015ರಲ್ಲಿ ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆ ಸಿದ್ಧತೆ ನಡೆಯುತ್ತಿರುವ ಹಂತದಲ್ಲಿಯೇ ಅಕ್ರಮವಾಗಿದೆ. 129 ಅಭ್ಯರ್ಥಿಗಳು ಉತ್ತರ ಪತ್ರಿಕೆಯಲ್ಲಿ ಗುರುತಿನ ಚಿಹ್ನೆ ಹಾಕುವ ಮೂಲಕ ಅಕ್ರಮ ನಡೆಸಿದ್ದರು. ಇಷ್ಟೇ  ಅಲ್ಲದೆ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರೀ ಅಕ್ರಮ ನಡೆದಿದೆ. ಜೊತೆಗೆ ಕೆಪಿಎಸ್‍ಸಿ ಅವರೇ ಐಡಿ ಮತ್ತು ಪಾಸ್‍ವರ್ಡ್ ಕ್ರಿಯೇಟ್ ಮಾಡಿ ಮೌಲ್ಯಮಾಪನವಾದ ನಂತರ ಅಂಕಗಳನ್ನು ತಿದ್ದಿದ ಆರೋಪವಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಚನ್ನಪ್ಪಗೌಡ ನೆಲ್ಲೂರು, ಸುರೇಶ್ ರಾಥೋಡ್, ಮುರುಳಿ ಸೇರಿದಂತೆ ಹಲವು ಮುಖಂಡರುಗಳು ಭಾಗವಹಿಸಿದ್ದರು.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 106 ಹುದ್ದೆಗಳ ನೇಮಕಾತಿಯಲ್ಲಿ, ಅಂಗವಿಕಲರೆಂದು ಸುಳ್ಳು ಪ್ರಮಾಣಪತ್ರ ನೀಡಿ 20 ಮಂದಿ ಪರೀಕ್ಷೆ ಬರೆದಿದ್ದರು. ಇನ್ನು 64 ಅಭ್ಯರ್ಥಿಗಳು ಉತ್ತರ ಪತ್ರಿಕೆಯಲ್ಲಿ ಹೆಸರು, ವಿಳಾಸ ಬರೆದು ಉತ್ತೀರ್ಣರಾಗಿದ್ದರು. ನಂತರ ಇವರನ್ನೆಲ್ಲ ಅನರ್ಹ ಮಾಡಲಾಯಿತು. 1999, 2004 ಮತ್ತು 2008ರ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂಬ ಆರೋಪಗಳಿದ್ದು, ಇವು ಕೋರ್ಟ್ ಅಂಗಳದಲ್ಲಿವೆ. 

-ಮೋಹನ್ ದಾಸರಿ, ಎಎಪಿ ಮುಖಂಡ

ಕೆಪಿಎಸ್‍ಸಿ ಭ್ರಷ್ಟಾಚಾರದಿಂದಾಗಿ ಸರಕಾರಿ ಉದ್ಯೋಗಗಳು ಇಂದು ಭ್ರಷ್ಟರ, ಪ್ರಭಾವಿಗಳ ಹಾಗೂ ಉಳ್ಳವರ ಪಾಲಾಗುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳು ಬೀದಿಗೆ ಬೀಳುವ ಪರಿಸ್ಥಿತಿ ಉದ್ಭವಿಸಿದೆ. ಹಾಗಾಗಿ ಕೂಡಲೇ ಈ ಉದ್ಯೋಗಸೌಧವನ್ನು ಮುಚ್ಚಿ ಹರಾಜಾಗುತ್ತಿರುವ ಸರಕಾರಿ ಉದ್ಯೋಗಗಳನ್ನು ರಕ್ಷಿಸುವ ಉದ್ದೇಶವನ್ನಿಟ್ಟುಕೊಂಡು, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ, ಕಮಿಷನರ್ ಭಾಸ್ಕರ್ ರಾವ್, ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಇನ್ನಿತರ ನಾಯಕರುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು.

-ಜಗದೀಶ್ ವಿ ಸದಂ, ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X