Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಉಷ್ಣಮಾರುತದಿಂದ ಕೃಷಿ ಇಳುವರಿಯಲ್ಲಿ ಭಾರೀ...

ಉಷ್ಣಮಾರುತದಿಂದ ಕೃಷಿ ಇಳುವರಿಯಲ್ಲಿ ಭಾರೀ ಕುಸಿತ

ಮಾನವಿ ಕಪೂರ್ಮಾನವಿ ಕಪೂರ್3 May 2022 12:09 AM IST
share
ಉಷ್ಣಮಾರುತದಿಂದ ಕೃಷಿ ಇಳುವರಿಯಲ್ಲಿ ಭಾರೀ ಕುಸಿತ

ನಿರಂತರ ಎರಡನೇ ತಿಂಗಳು ಭಾರತ ತೀವ್ರ ಉಷ್ಣ ಮಾರುತದ ಹೊಡೆತಕ್ಕೆ ಸಿಲುಕಿದೆ. ಇದು ದೇಶದ ಕೃಷಿ ಕ್ಷೇತ್ರದ ಮೇಲೆ, ಅದರಲ್ಲೂ ಮುಖ್ಯವಾಗಿ ಗೋಧಿ ಉತ್ಪಾದನೆಯ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ.

ಕಡಿಮೆ ಫಸಲಿನ ಕಾರಣದಿಂದಾಗಿ ಆಹಾರ ಧಾನ್ಯಗಳ ಬೆಲೆಗಳಲ್ಲಿ ಹೆಚ್ಚಳವಾಗುವುದು ಸಹಜ. ಹಾಗಾಗಿ, ಸರಕಾರವು ಆಹಾರ ಧಾನ್ಯಗಳ ರಫ್ತನ್ನು ಮರೆತು, ಇರುವ ಎಲ್ಲ ಧಾನ್ಯಗಳನ್ನು ದೇಶಿ ಬಳಕೆಗೆ ಬಿಡುಗಡೆ ಮಾಡಬೇಕಾಗುತ್ತದೆ. ಇದು ಜಗತ್ತಿಗೆ ಉಣಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ನೀಡಿರುವ ಕೊಡುಗೆಗೆ ಹಿನ್ನಡೆಯಾಗಬಹುದಾಗಿದೆ.

ಅತ್ಯಂತ ಬಿಸಿಯ ತಿಂಗಳುಗಳು

ಭಾರತದಲ್ಲಿ ಈ ವರ್ಷದ ಮಾರ್ಚ್ ತಿಂಗಳು 122 ವರ್ಷಗಳಲ್ಲೇ ಅತ್ಯಂತ ಬಿಸಿಯ ಮಾರ್ಚ್ ಆಗಿತ್ತು. ಈಗ ಎಪ್ರಿಲ್ ಕೂಡ 100ಕ್ಕೂ ಹೆಚ್ಚಿನ ವರ್ಷಗಳಲ್ಲಿ ಅತ್ಯಂತ ಬಿಸಿಯ ಎಪ್ರಿಲ್ ಆಗಿದೆ. ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ತಲುಪುತ್ತಿದೆ. ಹಾಗಾಗಿ, ಭಾರತೀಯ ಹವಾಮಾನ ಇಲಾಖೆಯು ಎಪ್ರಿಲ್ 27ರಂದು ‘ಹಳದಿ’ ಎಚ್ಚರಿಕೆಯನ್ನು ಹೊರಡಿಸಿದೆ. ಈಗ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳನ್ನೊಳಗೊಂಡ ಪ್ರದೇಶವು ಕಾದ ಬಾಣಲೆಯಾಗಲಿದೆ.

ಹೊಸದಿಲ್ಲಿಯಲ್ಲಿ, ಗರಿಷ್ಠ ಉಷ್ಣತೆಯು ಇತ್ತೀಚಿನ ದಿನಗಳಲ್ಲಿ 42 ಡಿಗ್ರಿ ಸೆಲ್ಸಿಯಸ್‌ನ ಆಸುಪಾಸಿನಲ್ಲಿದೆ. ಒಂದು ದಶಕದ ಅವಧಿಯಲ್ಲಿ, ಒಂದು ತಿಂಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಉಷ್ಣ ಮಾರುತ ದಿನಗಳು ಹೊಸದಿಲ್ಲಿಯಲ್ಲಿ ದಾಖಲಾಗಿವೆ. ಹವಾಮಾನ ಬದಲಾವಣೆಯ ಕಾರಣದಿಂದಾಗಿ, ಇತ್ತೀಚಿನ ವರ್ಷಗಳಲ್ಲಿ ಆಗ್ನೇಯ ಏಶ್ಯದಲ್ಲಿ ತೀವ್ರ ಉಷ್ಣ ಮಾರುತ ಮತ್ತು ಬಿರುಸಿನ ಮಳೆಗಾಲ ಸಾಮಾನ್ಯವಾಗಿದೆ. ಇದರ ಮಾನವ ಮತ್ತು ಆರ್ಥಿಕ ವೆಚ್ಚಗಳು ಅಗಾಧವಾಗಿವೆ.

ಕೃಷಿಯ ಮೇಲೆ ಪರಿಣಾಮ

ರಶ್ಯ-ಉಕ್ರೇನ್ ಯುದ್ಧವನ್ನು ಬಳಸಿಕೊಂಡು ತನ್ನ ಗೋಧಿ ರಫ್ತನ್ನು ಹೆಚ್ಚಿಸುವ ಯೋಜನೆಯನ್ನು ಭಾರತ ಹಾಕಿಕೊಂಡಿತ್ತು. ವಿಶ್ವ ವ್ಯಾಪಾರ ಸಂಘಟನೆಯು ಅನುಮತಿ ನೀಡಿದರೆ ಭಾರತದ ಗೋಧಿಯು ‘‘ಜಗತ್ತಿನ ಹೊಟ್ಟೆ ತುಂಬಿಸಬಲ್ಲದು’’ ಎಂಬುದಾಗಿ ಎಪ್ರಿಲ್ 11ರಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗೆ ನಡೆಸಿದ ಮಾತುಕತೆಯ ವೇಳೆ ಮೋದಿ ಹೇಳಿದ್ದರು. ಆದರೆ, ತೀವ್ರ ಉಷ್ಣತೆ ಮತ್ತು ಮಾರ್ಚ್ ತಿಂಗಳ ಶುಷ್ಕ ಹವಾಮಾನದಿಂದಾಗಿ ಕೃಷಿ ಇಳುವರಿಯಲ್ಲಿ ನಿರೀಕ್ಷೆಗಿಂತ ಭಾರೀ ಕಡಿತವಾಗಿದೆ.

ಪಂಜಾಬ್‌ನ ಕೃಷಿ ಮಾರುಕಟ್ಟೆಗಳಿಗೆ ಈವರೆಗೆ ಬಂದಿರುವ ಗೋಧಿಯು 2021ರಲ್ಲಿ ಈ ಅವಧಿಯಲ್ಲಿ ಬಂದಿರುವ ಗೋಧಿಗಿಂತ ಕನಿಷ್ಠ 20 ಶೇಕಡ ಕಡಿಮೆಯಾಗಿದೆ ಎಂಬುದಾಗಿ ‘ದ ಹಿಂದೂ’ ಪತ್ರಿಕೆಯ ಅಂಕಿಅಂಶಗಳ ವಿಶ್ಲೇಷಣೆಯು ತಿಳಿಸಿದೆ. ಪಂಜಾಬ್ ದೇಶದ ಅತಿ ದೊಡ್ಡ ಆಹಾರ ಉತ್ಪಾದಕ ರಾಜ್ಯವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ, ಇಳುವರಿಯೂ ಈ ವರ್ಷ ಕಡಿಮೆಯಾಗಿದೆ. 2021ರಲ್ಲಿ ಪ್ರತಿ ಎಕರೆಗೆ ಸರಾಸರಿ 19.8 ಕ್ವಿಂಟಾಲ್ ಗೋಧಿ ಉತ್ಪಾದನೆಯಾಗಿತ್ತು. ಈ ಬಾರಿ ಅದು ಎಕರೆಗೆ 17.8 ಕ್ವಿಂಟಾಲ್‌ಗೆ ಇಳಿಕೆಯಾಗಿದೆ ಎಂದು ‘ದ ಹಿಂದೂ’ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಉಷ್ಣತೆಯು ಹೆಚ್ಚಿದ ಹಿನ್ನೆಲೆಯಲ್ಲಿ ರೈತರು ತಮ್ಮ ಬೆಳೆಗಳನ್ನು ಬೇಗನೆ ಕಟಾವು ಮಾಡುವ ಬಲವಂತಕ್ಕೆ ಒಳಗಾದರು ಎಂದು ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆಯ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಹೇಳಿದರು. ಕೆಲವು ಪ್ರಕರಣಗಳಲ್ಲಿ ಇಳುವರಿಯು ಉತ್ತಮ ಬೆಳೆ ಬಂದ ವರ್ಷದ ಅರ್ಧಕ್ಕಿಂತಲೂ ಕಡಿಮೆಯಾಗಿದೆ ಎಂದು ಅವರು ಸಂಸತ್‌ನಲ್ಲಿ ಹೇಳಿದರು.

ಅತೀವ ಉಷ್ಣತೆಯು ಕೆಲಸದ ಅವಧಿಯ ಕಡಿತಕ್ಕೂ ಕಾರಣವಾಗಿದೆ. ಉಷ್ಣ ಮಾರುತವು ಇದೇ ರೀತಿಯಲ್ಲಿ ಮುಂದುವರಿದರೆ, ಭಾರತವು ಪ್ರತಿ ವರ್ಷ 10,000 ಕೋಟಿ ಕೆಲಸದ ಗಂಟೆಗಳನ್ನು ಕಳೆದುಕೊಳ್ಳುತ್ತದೆ ಎಂದು ವಿಜ್ಞಾನ ಪತ್ರಿಕೆ ‘ನೇಚರ್’ನಲ್ಲಿ 2021ರಲ್ಲಿ ಪ್ರಕಟಗೊಂಡಿರುವ ಅಧ್ಯಯನ ವರದಿಯೊಂದು ಹೇಳಿದೆ.

(ಕೃಪೆ: qz.com)

share
ಮಾನವಿ ಕಪೂರ್
ಮಾನವಿ ಕಪೂರ್
Next Story
X