ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಬೆಂಗಳೂರು, ಮೇ 2: ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಸೋಮವಾರ ರಾತ್ರಿ ವಿಶೇಷ ವಿಮಾನದ ಮೂಲಕ ನಗರದ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಶಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ರಾಜ್ಯ ಸಚಿವರುಗಳಾದ ಆರಗ ಜ್ಞಾನೇಂದ್ರ, ಗೋವಿಂದ ಎಂ. ಕಾರಜೋಳ, ನಾರಾಯಣ ಗೌಡ, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Next Story





