Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿಗೆ ಅಮಿತ್ ಶಾ ಭೇಟಿ ಖಂಡಿಸಿ ಯುವ...

ಬೆಂಗಳೂರಿಗೆ ಅಮಿತ್ ಶಾ ಭೇಟಿ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 May 2022 11:51 AM IST
share
ಬೆಂಗಳೂರಿಗೆ ಅಮಿತ್ ಶಾ ಭೇಟಿ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು, ಮೇ 3: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿರುವುದನ್ನು ಖಂಡಿಸಿ ಅಮಿತ್ ಶಾ ಗೋ ಬ್ಯಾಕ್ ಎಂದು ಘೋಷಣೆ ಕೂಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕನ್ನಡ ವಿರೋಧಿ ಅಮಿತ್ ಶಾ ಹಾಗೂ ಪಿಎಸ್ಸೈ ನೇಮಕಾತಿ ಸಹಿತ ವಿವಿಧ ಅಕ್ರಮ ಮತ್ತು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿರುವ ಅಮಿತ್ ಶಾ, ಈ ಭ್ರಷ್ಟಾಚಾರದಲ್ಲಿ ನಿಮ್ಮ ಪಾಲೆಷ್ಟು ಎಂಬುದರ ಬಗ್ಗೆ ರಾಜ್ಯದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸಿದರು.

ಭ್ರಷ್ಟ ಬಿಜೆಪಿ ಸರಕಾರ ದೇಶದ ಇತಿಹಾಸದಲ್ಲೇ ಎಲ್ಲ ಇಲಾಖೆಯಲ್ಲೂ ದಿನನಿತ್ಯ ಲೂಟಿ ಮಾಡಿ ಹಾಗೂ  ನೇಮಕಾತಿ ಹಗರಣಗಳಲ್ಲಿ  ಬಿಜೆಪಿ ಮಂತ್ರಿಗಳು  ಬಿಜೆಪಿ ಪಕ್ಷದ ಮುಖಂಡರು ಭಾಗಿಯಾಗಿ ಸಮಾಜದ ಮೌಲ್ಯವನ್ನು ಹಾಳುಗೆಡುವುತ್ತಿದ್ದಾರೆ ಹಾಗೂ ಶ್ರಮವಹಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ದ್ರೋಹವೆಸಗಿದ್ದಾರೆ. ಇಂತಹ ಭ್ರಷ್ಟಾಚಾರಿಗಳನ್ನು ರಾಜ್ಯದ ಜನತೆ ಕ್ಷಮಿಸುವ ಮಾತೇ ಇಲ್ಲ ಎಂದು ಎಚ್ಚರಿಸಿದರು.

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಬಿಜೆಪಿಯಂತಹ ಹಗಲು ದರೋಡೆ ಸರ್ಕಾರ ಪಕ್ಷ ಮತ್ತೊಂದಿಲ್ಲ ಎಂಬುದು ಸಾಬೀತಾಗಿದೆ. ಇಷ್ಟೆಲ್ಲಾ ಭ್ರಷ್ಟಾಚಾರ ನಡೆದರೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಭ್ರಷ್ಟಾಚಾರವನ್ನು  ಖಂಡಿಸುತ್ತಿಲ್ಲ.

 ಭ್ರಷ್ಟಾಚಾರದಲ್ಲಿ ಕೇಂದ್ರ ಸರ್ಕಾರದ ಮಂತ್ರಿಗಳು ಹಾಗೂ ಪಕ್ಷವು ಸಹ ಪಾಲು ಪಡೆದಂತೆ ಕಾಣಿಸುತ್ತಿದೆ,

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನ ನಡೆಸುತ್ತಿದ್ದಾರೆ. ಕನ್ನಡ ನೆಲದಲ್ಲಿ ಕನ್ನಡವನ್ನು ಕಡೆಗಣಿಸುವ ಮಾತನಾಡಿದರೆ ಅತ್ಯಂತ ಕಠಿಣ ನಿರ್ಧಾರವನ್ನು  ಕನ್ನಡಿಗರು ಕೈಗೊಳ್ಳುತ್ತಾರೆ ಎಂಬುದನ್ನು ಆಮಿಷ ಅರ್ಥೈಸಿಕೊಳ್ಳಬೇಕು. ಹಿಂದಿ ಭಾಷೆ ನಿಮಗೆ  ಕನ್ನಡ ಭಾಷೆ ಕನ್ನಡಿಗರಿಗೆ  ಕನ್ನಡ ಭಾಷೆಯ ಇತಿಹಾಸ ಎಲ್ಲಾ ಭಾಷೆಗಿಂತ ಹಳೆಯದು ಎಂಬುದನ್ನು ಅರ್ಥೈಸಿಕೊಳ್ಳಬೇಕು ಹಾಗೂ  ಕನ್ನಡದ ಬಗ್ಗೆ ಹಗುರವಾಗಿ ಮಾತನಾಡುವ ಯಾರನ್ನು ಸಹಿಸಲು ಸಾಧ್ಯವಿಲ್ಲ  ಎಂಬುದನ್ನು ಮೊದಲು ಅರ್ಥೈಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಹೇಳಿದರು.

ಪಿಎಸ್ಐ ಹಗರಣದಲ್ಲಿ ಕೋಟಿ ಕೋಟಿ ಬಾಚುತ್ತಿರುವ ಬಿಜೆಪಿಗರ ಬಗ್ಗೆ ಅಮಿತ್ ಶಾ ಅಕ್ರಮ ಏನೆಂಬುದನ್ನ ರಾಜ್ಯದ ಜನತೆಗೆ ತಿಳಿಸಬೇಕೆಂದು ಈ ಪ್ರತಿಭಟನೆ ಮೂಲಕ ಆಗ್ರಹಪಡಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X