Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಕ್ರಮದ ಅಂಗಡಿ ತೆಗೆದದ್ದು ಯಾರು?:...

ಅಕ್ರಮದ ಅಂಗಡಿ ತೆಗೆದದ್ದು ಯಾರು?: ಡಿ.ಕೆ.ಶಿವಕುಮಾರ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ3 May 2022 3:19 PM IST
share
ಅಕ್ರಮದ ಅಂಗಡಿ ತೆಗೆದದ್ದು ಯಾರು?: ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಬಿಜೆಪಿಯವರು ಅಕ್ರಮದ ಅಂಗಡಿ ತೆರೆದಿದ್ದ ಕಾರಣ ಜನ ಅವರ ಬಳಿ ಖರೀದಿಗೆ ಹೋಗಿದ್ದಾರೆ. ಇವರು ಅಂಗಡಿ ತೆರೆಯದಿದ್ದರೆ ಅವರು ಹೋಗುತ್ತಿದ್ದರಾ? ಅಂಗಡಿ ತೆರೆದವರು ಯಾರು? ಸಂಪರ್ಕ ಕೊಟ್ಟವರಾರು? ಈ ಪ್ರಕರಣದಲ್ಲಿ ಪೊಲೀಸರು, ರಾಜಕಾರಣಿಗಳು ಯಾವ ರೀತಿ ಭಾಗಿಯಾಗಿದ್ದಾರೆ? ಯಾರು ಆಸ್ತಿ ಮಾಡಿದ್ದಾರೆ? ಯಾರು ಸಾಲ ಮಾಡಿದ್ದಾರೆ? ಇವೆಲ್ಲವೂ ಬಹಿರಂಗವಾಗಬೇಕು ಅಲ್ಲವೇ? ಇದ್ಯಾವುದೂ ನಡೆಯದೇ ಏಕಾಏಕಿ ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆಗೆ ಆದೇಶಿಸಿದರೆ ನಾವು ಸುಮ್ಮನಿರಲು ಸಾಧ್ಯವೇ? ಅಕ್ರಮದಲ್ಲಿ ಯಾರು ಭಾಗಿಯಾಗಿದ್ದಾರೆ, ಯಾರು ಯಾರಿಂದ ವಸೂಲಿ ಮಾಡಿದ್ದಾರೆ? ಎಂಬುದು ಬಹಿರಂಗವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿರುವ  ಡಿಕೆ ಶಿವಕುಮಾರ್, 'ಅಮಿತ್ ಶಾ ಅವರು ಅವರ ಪಕ್ಷದ ವಿಚಾರವಾಗಿ ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದು ಅವರಿಗೆ ಬಿಟ್ಟ ವಿಚಾರ. ನೇಮಕಾತಿ ಅಕ್ರಮ ವಿಚಾರ ಕೇವಲ ಮಲ್ಲೇಶ್ವರಂ ಅಥವಾ ಮಾಗಡಿಗೆ ಸೀಮಿತವಾದ ವಿಚಾರವಲ್ಲ. ರಾಜ್ಯದ ಎಲ್ಲಾ ಯುವಕರಿಗೆ ಆಘಾತಕಾರಿ ವಿಚಾರ. ಪಿಎಸ್ಐ, ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ನೇಮಕಾತಿ ಅಕ್ರಮ ನಡೆದಿದೆ. ಉದ್ಯೋಗ ವಿಚಾರದಲ್ಲಿ ಯುವಕರಿಗೆ ನ್ಯಾಯ ಎಲ್ಲಿ ಸಿಗುತ್ತದೆ? ಈ ವಿಚಾರವಾಗಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅನುಮಾನ ಇಲ್ಲದೆ ದೂರು ದಾಖಲಿಸಲು ಸಾಧ್ಯವೇ? ಈ ವಿಚಾರವಾಗಿ ತನಿಖೆ ಸರಿಯಾಗಿ ಆಗುತ್ತದೆಯಾ? ಮಾಗಡಿ ಕ್ಷೇತ್ರವೊಂದರಲ್ಲಿ ಎರಡು ಕೋಟಿ ರೂ. ಅಕ್ರಮ ನಡೆದಿದ್ದು  ಇದರಲ್ಲಿ ಭಾಗಿಯಾಗಿರುವ ಸಚಿವರು ರಾಜೀನಾಮೆ ನೀಡಬೇಕು. ಕಾಂಗ್ರೆಸ್ ಪಕ್ಷ ಇದರ ಬಗ್ಗೆ ಹೋರಾಟ ಮಾಡುತ್ತದೆ. ಈ ವಿಚಾರವಾಗಿ ಯಾವುದೇ ವೇದಿಕೆಯಲ್ಲಿ ಚರ್ಚೆ ಮಾಡಲು ನಮ್ಮ ಪಕ್ಷದ ವಕ್ತಾರರು ಸಿದ್ಧರಿದ್ದಾರೆ' ಎಂದರು.

ಸಿಎಂ ಬದಲಾವಣೆ ವಿಚಾರವಾಗಿ ಯತ್ನಾಳ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯತ್ನಾಳ್ ಅವರಾಗಲಿ ಅಥವಾ ಬೇರೆ ಯಾರೇ ಮಾತನಾಡಿದರು ಅದು ನಮಗೆ ಪ್ರಮುಖ ವಿಚಾರವಲ್ಲ. ಸಮರ್ಥರು, ಅಸಮರ್ಥರು, ಯಾವ ಸೂತ್ರ ಬರುತ್ತದೆ ಎಂಬುದೂ ನಮಗೆ ಮುಖ್ಯವಲ್ಲ. ಮುಖ್ಯಮಂತ್ರಿ ಬದಲಾವಣೆ ಅವರ ಪಕ್ಷದ ವಿಚಾರ. ನಮಗೂ ಅದಕ್ಕೂ ಸಂಬಂಧವಿಲ್ಲ. ರಾಜ್ಯಕ್ಕೆ ಉತ್ತಮ ಆಡಳಿತ ಸಿಗಬೇಕು ಎಂಬುದು ಕಾಂಗ್ರೆಸ್ ಪಕ್ಷದ ಉದ್ದೇಶ. ಈ ರಾಜ್ಯ ಶಾಂತಿಯ ತೋಟವಾಗಬೇಕು, ಎಲ್ಲಾ ಧರ್ಮದವರಿಗೂ ರಕ್ಷಣೆ ಸಿಗಬೇಕು. ಸರ್ಕಾರ ಈ ಕೆಲಸ ಮಾಡಿದರೆ ಸಾಕು.

ಸ್ವಚ್ಛ ಮಾಡೋದು ಎಂದರೆ ಇದೇನಾ?

ಮಾಧ್ಯಮಗಳಲ್ಲಿ ಭ್ರಷ್ಟಾಚಾರ ವಿಚಾರ ಪ್ರಕಟವಾಗುತ್ತಿದ್ದರೂ, ಪೊಲೀಸರು ಸರಿಯಾದ ತನಿಖೆ ನಡೆಸುತ್ತಿಲ್ಲ. ವಿಚಾರಣೆಗೆ ಕರೆಸಿದ ದರ್ಶನ್ ಗೌಡ ಯಾವ ಹೇಳಿಕೆ ಕೊಟ್ಟಿದ್ದಾನೆ? ಆತನನ್ನು ಯಾಕೆ ಪೂರ್ಣಪ್ರಮಾಣದಲ್ಲಿ ವಿಚಾರಣೆ ಮಾಡದೆ ಬಿಟ್ಟು ಕಳುಹಿಸಲಾಯಿತು? ಈ ವಿಚಾರವಾಗಿ ಯಾವುದೇ ಮಾಹಿತಿ ನೀಡುತ್ತಿಲ್ಲ ಯಾಕೆ?  ಆತನ ವಿಚಾರಣೆ ಮಾಡಿದರೆ ಸಚಿವರ ಸಂಪರ್ಕ ಬಹಿರಂಗವಾಗುತ್ತದೆ ಎಂಬ ಕಾರಣಕ್ಕೆ ಆತನನ್ನು ಬಿಟ್ಟು ಕಳುಹಿಸಲಾಗಿದೆ. ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ? ರಾಮನಗರ ಸ್ವಚ್ಛ ಮಾಡುತ್ತೇನೆ ಎಂದು ಬಂದವರು ಮಾಡಿದ ಸ್ವಚ್ಛ ಇದೇನಾ?' ಎಂದು ಪ್ರಶ್ನಿಸಿದರು.

ಪಕ್ಷದ ರಾಷ್ಟ್ರೀಯ ನಾಯಕರಾದ ಶ್ರೀಮತಿ ಮೀರಾ ಕುಮಾರ್ ಅವರು ಮೈಸೂರಿನಲ್ಲಿ ಬಾಬು ಜಗಜೀವನ್ ರಾಮ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕರ್ತರನ್ನು ಭೇಟಿ ಮಾಡಿದ್ದಾರೆ.

ನಮ್ಮ ಹಿರಿಯ ನಾಯಕರ ಅನುಭವ, ಅವರ ವಿಚಾರ, ಅವರ ಮಾರ್ಗದರ್ಶನ ನಮಗೆ ಅವಶ್ಯಕತೆಯಿದ್ದು, ನಾನು ಹಾಗೂ ನಮ್ಮ ನಾಯಕರು ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ ಎಂದರು.

ಬಿಜೆಪಿ ಆಂತರಿಕ ವಿಚಾರ ನಮಗೆ ಬೇಡ

ಮುಂದಿನ ಎರಡು ಮೂರು ದಿನಗಳಲ್ಲಿ ಬಾರಿ ದೊಡ್ಡ ಮಟ್ಟದ ಬದಲಾವಣೆ ಆಗಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ಯಡಿಯೂರಪ್ಪನವರು ನಿನ್ನೆ ಒಂದು ಹೇಳಿಕೆ ನೀಡಿದ್ದು, ಯತ್ನಾಳ್ ಅವರು ಒಂದು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭೋಜನಕೂಟ ಇದೆ. ಇದೆಲ್ಲವೂ ಅವರ ಪಕ್ಷದ ವಿಚಾರಗಳು. ಅವರ ಪಕ್ಷದ ವಿಚಾರದ ಬಗ್ಗೆ ನಾವ್ಯಾಕೆ ಮಾತನಾಡಬೇಕು. ಅವರನ್ನು ಪ್ರಶಂಸಿಸಲು, ಅವರಿಗೆ ಸಲಹೆ ನೀಡಲು, ಅವರನ್ನು ತೆಗಳಲು ನಾವಿಲ್ಲ' ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X