ಮೈಸೂರು: ಕರ್ತವ್ಯ ನಿರತರಾಗಿದ್ದಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಎಪಿಎಂಸಿ ಏಜೆಂಟ್ ರವಿ ಬರ್ಬರ ಹತ್ಯೆ

ಎಂ.ಜೆ.ರವಿ
ಮೈಸೂರು: ಮೈಸೂರು ನಗರದ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆಯ ಏಜೆಂಟ್ ಎಂ.ಜೆ.ರವಿ (35) ಅವರನ್ನು ಮಂಗಳವಾರ ಸಂಜೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಂಗಳವಾರ ಸಂಜೆ ಎಪಿಎಂಸಿ ಮಳಿಗೆಯಲ್ಲಿ ಕರ್ತವ್ಯ ನಿರತರಾಗಿದ್ದಾಗಲೇ ಗುಂಪೊಂದು ಏಕಾ ಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ.
ಮೂಲತಃ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ನಿವಾಸಿಯಾದ ಎಂ.ಜೆ.ರವಿ ಉತ್ತನಹಳ್ಳಿಯಲ್ಲಿ ವಾಸವಾಗಿದ್ದರು. ಮೃತರಿಗೆ ತಂದೆ-ತಾಯಿ, ಪತ್ನಿ, ಮೂವರು ಮಕ್ಕಳು, ಸಹೋದರಿ ಇದ್ದಾರೆ.
ಸ್ಥಳಕ್ಕೆ ಎಎಸ್ಪಿ ಶಿವಕುಮಾರ್ ಆರ್.ದಂಡಿನ, ದಕ್ಷಿಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Next Story





