Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ.: ರೇಪ್ ಕೇಸ್ ದಾಖಲಿಸಲು ಪೊಲೀಸ್...

ಉ.ಪ್ರ.: ರೇಪ್ ಕೇಸ್ ದಾಖಲಿಸಲು ಪೊಲೀಸ್ ಠಾಣೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ4 May 2022 10:24 AM IST
share
ಉ.ಪ್ರ.: ರೇಪ್ ಕೇಸ್ ದಾಖಲಿಸಲು ಪೊಲೀಸ್ ಠಾಣೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿ

ಲಕ್ನೋ: ಉತ್ತರ ಪ್ರದೇಶದ ಲಲಿತ್‌ಪುರದಲ್ಲಿ ದೂರು ದಾಖಲಿಸಲು  ತೆರಳಿದ್ದ 13 ವರ್ಷದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ನಾಲ್ವರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಹದಿಹರೆಯದ ಯುವತಿ ಆರೋಪಿಸಿದ್ದು, ಬಳಿಕ ಸಂಬಂಧಿಯೊಂದಿಗೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಳು.

ಆರೋಪಿ ಅಧಿಕಾರಿ, ಠಾಣಾಧಿಕಾರಿ ತಿಲಕಧಾರಿ ಸರೋಜ್ ನನ್ನು ಅಮಾನತುಗೊಳಿಸಲಾಗಿದೆ ಮತ್ತು ಆತನ  ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಪೊಲೀಸ್ ಅಧಿಕಾರಿ ಪರಾರಿಯಾಗಿದ್ದು, ಮೂರು ಪೊಲೀಸ್ ತಂಡಗಳು ಆತನನ್ನು ಹುಡುಕುತ್ತಿವೆ ಎಂದು ಲಲಿತ್‌ಪುರದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳವಾರ ಬಾಲಕಿಯ ತಂದೆ ದಾಖಲಿಸಿರುವ ಎಫ್‌ಐಆರ್‌ನಲ್ಲಿ ನಾಲ್ವರು ವ್ಯಕ್ತಿಗಳು ಪುತ್ರಿಗೆ ಆಮಿಷ ಒಡ್ಡಿ ಎಪ್ರಿಲ್ 22 ರಂದು ಭೋಪಾಲ್‌ಗೆ ಕರೆದೊಯ್ದು ನಾಲ್ಕು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ. ನಂತರ ಆರೋಪಿಯು ಆಕೆಯನ್ನು ತನ್ನ ಗ್ರಾಮಕ್ಕೆ ಮರಳಿ ಕರೆತಂದು ಪರಾರಿಯಾಗುವ ಮೊದಲು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಕರೆತಂದಿದ್ದಾನೆ.

ಆರೋಪಿ ಪೊಲೀಸ್ ಠಾಣೆಯ ಅಧಿಕಾರಿ ಬಾಲಕಿಯನ್ನು ಆಕೆಯ ಚಿಕ್ಕಮ್ಮನಿಗೆ ಹಸ್ತಾಂತರಿಸಿದ ಎಂದು  ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.  ಅಪ್ರಾಪ್ತೆಯ ಹೇಳಿಕೆಯನ್ನು ದಾಖಲಿಸಲು ಮರುದಿನ ಪೊಲೀಸ್ ಠಾಣೆಗೆ ಕರೆಸಲಾಯಿತು. ಮರುದಿನ  ಆರೋಪಿ ಅಧಿಕಾರಿಯು ಬಾಲಕಿಯ ಚಿಕ್ಕಮ್ಮನ ಸಮ್ಮುಖದಲ್ಲಿ ಪೊಲೀಸ್ ಠಾಣೆಯ ಕೊಠಡಿಯೊಳಗೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಎಫ್ ಐ ಆರ್ ನಲ್ಲಿ ತಿಳಿಸಲಾಗಿದೆ. ಎಫ್‌ಐಆರ್‌ನಲ್ಲಿ ಬಾಲಕಿಯ ಚಿಕ್ಕಮ್ಮನನ್ನೂ ಆರೋಪಿ ಎಂದು ಹೆಸರಿಸಲಾಗಿದೆ.

ಅಧಿಕಾರಿಯ ಮೇಲೆ ಅತ್ಯಾಚಾರ ಹಾಗೂ  ಕಠಿಣ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಆರೋಪ ಹೊರಿಸಿರುವುದಾಗಿ ಲಲಿತ್‌ಪುರ ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X