Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯ ನಾಯಕ-ಪಿಎಸ್‌ಐ ಪರೀಕ್ಷೆ ಅಕ್ರಮದ...

ಬಿಜೆಪಿಯ ನಾಯಕ-ಪಿಎಸ್‌ಐ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ʼಗೂ ಲಿಂಕ್ ಇದೆ: ಕುಮಾರಸ್ವಾಮಿ ಆರೋಪ

"ಕಮಲ್‌ ಪಂಥ್‌ʼಗೆ ಬಿಜೆಪಿ ನಾಯಕರಿಂದ ಅಪಮಾನ"

ವಾರ್ತಾಭಾರತಿವಾರ್ತಾಭಾರತಿ4 May 2022 12:40 PM IST
share
ಬಿಜೆಪಿಯ ನಾಯಕ-ಪಿಎಸ್‌ಐ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ʼಗೂ ಲಿಂಕ್ ಇದೆ: ಕುಮಾರಸ್ವಾಮಿ ಆರೋಪ

ಚನ್ನಪಟ್ಟಣ: ನಿಷ್ಠಾವಂತ, ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದ್ದ ಬಿಜೆಪಿಯ ನಾಯಕನಿಗೆ ಪರೀಕ್ಷೆ ಅಕ್ರಮದಲ್ಲಿ ಈಗ ಬಂಧನಕ್ಕೊಳಗಾಗಿರುವ ಕಿಂಗ್‌ಪಿನ್ ಲಿಂಕ್ ಇತ್ತು.‌ ಪೊಲೀಸರು ಅದರ ಜಾಡು ಹಿಡಿದು ಎಲ್ಲವನ್ನೂ ಹೊರಗೆಳೆದು ಜನರ ಮುಂದೆ ಇಟ್ಟಿದ್ದಾರೆ. ಹೇಳುತ್ತಾ ಹೋದರೆ ಇದೇ ದೊಡ್ಡ ಕಥೆ ಆಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು.

ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. ಬಿಜೆಪಿಯ ವಕ್ತಾರರೊಬ್ಬರು ಪೊಲೀಸ್‌ ಆಯುಕ್ತ ಕಮಲ್ ಪಂಥ್ ವಿರುದ್ಧವೇ ಆರೋಪ ಮಾಡಿದ್ದರು. ಆ ಕೊಲೆಯ ವಿಚಾರವಾಗಿ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆಂದು ಅವರು ದೂರಿದ್ದರು. ಪರಸ್ಪರ ದ್ವಿಚಕ್ರ ವಾಹನ ಢಿಕ್ಕಿ ಕಾರಣಕ್ಕೆ ಗಲಾಟೆ ನಡೆದು ಯುವಕನ ಕೊಲೆಯಾಗಿತ್ತು ಎಂದು ಪೊಲೀಸರು ಹೇಳಿದ್ದರು. ಆದರೆ, ಬಿಜೆಪಿ ನಾಯಕರು ಹಠಕ್ಕೆ ಬಿದ್ದವರಂತೆ ಉರ್ದು ಭಾಷೆ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಗಲಾಟೆಯಾಗಿ ಯುವಕನ ಕೊಲೆಯಾಯಿತು ಎಂದು ಕಥೆ ಕಟ್ಟಿದ್ದರು. ಅದು ಅಲ್ಲಿಂದ ಪಿಎಸ್‌ಐ ಪರೀಕ್ಷೆ ಅಕ್ರಮದವರೆಗೂ ಬಂದು ನಿಂತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ. ಬಿಜೆಪಿ ನಾಯಕರು ಪೊಲೀಸ್ ಇಲಾಖೆಯ ಪ್ರಾಮಾಣಿಕ ಅಧಿಕಾರಿ ಕಮಲ್ ಪಂಥ್ ಅವರಿಗೆ ಅವಮಾನ‌ ಮಾಡಿದ್ದರು. ಅದಕ್ಕಾಗಿ ಇಲಾಖೆಯಲ್ಲಿರುವ ಅವರ ಅಭಿಮಾನಿಗಳು ಕೆಲವರು ಸರಕಾರಕ್ಕೆ ಬುದ್ಧಿ ಕಲಿಸಲೆಂದೇ  ಅವರೇ ಹಗರಣವನ್ನು ಹೊರತೆಗೆದಿದ್ದಾರೆ. ಇದು ಸರಕಾರದಿಂದ ಹೊರಬಂದಿಲ್ಲ, ಪೊಲೀಸ್ ಇಲಾಖೆಯಿಂದಲೇ ಇದು ಹೊರಬಂದಿದೆ. ಈ ಸರಕಾರದ ನಡವಳಿಕೆಯನ್ನು ಪೊಲೀಸ್‌ ಇಲಾಖೆಯವರೇ ಹೊರಗೆಳೆದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಎಲ್ಲಾ ಅಭ್ಯರ್ಥಿಗಳು ದುಡ್ಡು ಕೊಟ್ಟು ಆಯ್ಕೆ ಅಗಿದ್ದಾರೆ ಎನ್ನಲು ಆಗುವುದಿಲ್ಲ. 30% ಆಭ್ಯರ್ಥಿಗಳು ಹಣದಿಂದ ಹುದ್ದೆ ಗಿಟ್ಟಿಸಿರಬಹುದು. ಹಾಗೆಯೇ 30-40% ಆಭ್ಯರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರಬಹುದು, ನ್ಯಾಯಯುತವಾಗಿ ಆಯ್ಕೆಯಾದವರಿಗೆ ಅನ್ಯಾಯ ಆಗಬಾರದು ಎಂದಷ್ಟೇ ನಾನು ಹೇಳಿದ್ದೆ ಎಂದರು.

ಕಾಂಗ್ರೆಸ್‌ ನಾಯಕರ ಬಳಿ ದಾಖಲೆ ಇದೆಯಾ?

ಸಚಿವ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಬಳಿ ಸಚಿವರ ವಿರುದ್ಧ ದಾಖಲೆ ಇದೆಯಾ? ಅವರ ವಿರುದ್ಧ ಎಲ್ಲಿದೆ ದಾಖಲೆ ? ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿಗಳು; ಸಚಿವರ ವಿರುದ್ಧ ಅವರ ಸಹೋದ್ಯೋಗಿಗಳೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ  ಗೃಹ ಸಚಿವ ಅಮಿತ್‌ ಶಾ ಅವರು ಬೆಂಗಳೂರಿಗೆ ಬರುತ್ತಿದ್ದಂತೆಯೇ ಅದೆಲ್ಲ ಮಾಧ್ಯಮಗಳಲ್ಲಿ ಬರುವಂತೆ ನೋಡಿಕೊಂಡಿದ್ದಾರೆ. ಇದೆಲ್ಲ ಅಮಿತ್ ಶಾ ತಲೆಗೆ ಹೋಗಲಿ ಎಂದೇ ಸಚಿವರ ವಿರುದ್ಧ ಮಾಹಿತಿ ನೀಡಿದ್ದಾರೆ ಎಂದರು.

ಅಶ್ವತ್ಥನಾರಾಯಣ ವಿಕೆಟ್ ಉರುಳಿಸಲು ಬಿಜೆಪಿಯಲ್ಲಿಯೇ ಸಂಚು ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ತಮ್ಮ ಮನೆಗೆ ತಾವೇ ಬೆಂಕಿ ಹಚ್ಚಿಕೊಳ್ಳುತ್ತಿದ್ದಾರೆ, ನಾವು ಹಚ್ಚಬೇಕಿಲ್ಲ. ನಾನು ಮತ್ತೆ ಪೆಟ್ರೋಲ್ ತೆಗೆದುಕೊಂಡು ಹೋಗ್ಲಾ ಸುರಿಯೋಕೆ ? ಕಾಂಗ್ರೆಸ್ ನಾಯಕರಿಗೆ ನೈಜ ವಿಷಯಗಳ ಮೇಲೆ ಹೋರಾಟ ನಡೆಸುವ ಶಕ್ತಿ ಇಲ್ಲ. ಯಾರೋ ಹೇಳಿದ್ದನ್ನು ಹೇಳ್ಕೋತಾರೆ ಅಷ್ಟೇ ಎಂದು ಮಾಜಿ ಸಿಎಂ ತಿಳಿಸಿದರು.

ಧರ್ಮಗುರುಗಳ ಸಾವು ನೋವು ತಂದಿದೆ

ರಮಝಾನ್ ಹಬ್ಬದ ದಿನವೇ ಮುಸ್ಲಿಂ ಧರ್ಮಗುರುಗಳಾದ ಸೈಯದ್ ನಜ್ಮಿ ಮೃತಪಟ್ಟ ವಿಚಾರ ನನಗೆ ಬಹಳ ನೋವುಂಟು ಮಾಡಿದೆ ಎಂದು ಕುಮಾರಸ್ವಾಮಿ ದುಃಖ ವ್ಯಕ್ತಪಡಿಸಿದರು.‌

ನಮಾಝ್ ಬಳಿಕ ಕುಟುಂಬ ಸಮೇತರಾಗಿ ಊರಿಗೆ ಹೊರಟಿದ್ದವರು ಅಪಘಾತದಲ್ಲಿ ಧರ್ಮ ಗುರುಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಧರ್ಮಗುರುಗಳು, ಅವರ ಪತ್ನಿ, ಪುತ್ರಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಉಚಿತ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದೇನೆ. ಈ ಬಗ್ಗೆ ಆದಿಚುಂಚನಗಿರಿ ಶ್ರೀಗಳ ಜತೆ ಮಾತನಾಡಿ ಮನವಿ ಮಾಡಿದ್ದೇನೆ. ಶ್ರೀಗಳು ವೈಯಕ್ತಿಕವಾಗಿ ಆಕೆಗೆ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಯಾವುದೇ ರೀತಿಯ ಚಿಕಿತ್ಸಾ ವೆಚ್ಚವನ್ನು ತೆಗೆದುಕೊಳ್ಳದಂತೆ ಅವರು ಸೂಚಿಸಿದ್ದಾರೆ. ಗುರುಗಳು ಒಳ್ಳೆಯ ಹೆಸರು ಗಳಿಸಿದ್ದರು. ಧಾರ್ಮಿಕ ಕೆಲಸದ ಮೂಲಕ ಬಹಳಷ್ಟು ಸೇವೆ ಮಾಡಿದ್ದರು. ಆವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X