ಪಿಎಸ್‌ಐಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲವೆಂದ ಆರಗ ಜ್ಞಾನೇಂದ್ರ ಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು : ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಅವರು ಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ, ಅವರನ್ನು ವಜಾ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಇರುವ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅನೇಕ ಹಗರಣ ಹೊರಬರುತ್ತಿವೆ. ಉಪನ್ಯಾಸಕರ ನೇಮಕದಲ್ಲಿಯೂ ಅಕ್ರಮ, ಕೆಲವರ ಬಂಧನ ಆಗಿದೆ. ಇದರಲ್ಲಿ ಉನ್ನತ ಶಿಕ್ಷಣ ಸಚಿವರ ಪಾತ್ರ ಏನು. ಅವರ ಜವಾಬ್ದಾರಿ ಏನು ಎಂಬ ಬಗ್ಗೆ ತನಿಖೆ ನಡೆಯಬೇಕು. ಗೃಹ ಮತ್ತು ಉನ್ನತ ಶಿಕ್ಷಣ ಸಚಿವರು ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಯಾವುದೆ ಸಾಕ್ಷ್ಯ ಇಲ್ಲದೆ ನೋಟಿಸ್ ನೀಡಲು ಸಾಧ್ಯವಿಲ್ಲ, ಸರಕಾರದ ಒತ್ತಡ ಇಲ್ಲದೆ ವಿಚಾರಣೆ ನಡೆಸಿ ಕೈಬಿಟ್ಟು ಕಳುಹಿಸಲಾಗಿದೆ. ಸಚಿವ ಅಶ್ವತ್ಥ ನಾರಾಯಣ ಮೇಲೆ ತೂಗುಗತ್ತಿ ಇದೆ. ಇದು ಜನಸಾಮಾನ್ಯರ ಪೀಡಕ, ಸುಲಿಗೆ ಸರಕಾರ. ಪ್ರಧಾನಿ ಮೋದಿ ಅವರು ನಾಟಕ ಬಿಟ್ಟು ಕೂಡಲೇ ತನಿಖೆ ಮಾಡಿಸಬೇಕು. ಹಗರಣ, ಅಕ್ರಮಗಳು ನಡೆಯುತ್ತಿದ್ದು, ಇದನ್ನು ಬದಲು ನ್ಯಾಯಾಂಗ ತನಿಖೆ. ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದಲೇ ತನಿಖೆ ಆಗಬೇಕು ಎಂದು ಸಿದ್ದರಾಮಯ್ಯ ಹೇಳಿದರು.





