Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮೃತ ನಗರೋತ್ಥಾನ: 15 ಜಿಲ್ಲೆಗಳ 1,519...

ಅಮೃತ ನಗರೋತ್ಥಾನ: 15 ಜಿಲ್ಲೆಗಳ 1,519 ಕೋಟಿ ರೂ.ಕ್ರಿಯಾ ಯೋಜನೆಗೆ ಅನುಮೋದನೆ; ಸಚಿವ ಎಂಟಿಬಿ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ4 May 2022 5:16 PM IST
share
ಅಮೃತ ನಗರೋತ್ಥಾನ: 15 ಜಿಲ್ಲೆಗಳ 1,519 ಕೋಟಿ ರೂ.ಕ್ರಿಯಾ ಯೋಜನೆಗೆ ಅನುಮೋದನೆ; ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು, ಮೇ 4: ‘ರಾಜ್ಯದ ಹದಿನೈದು ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೆ ಹಂತದಲ್ಲಿ 1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ' ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆ ನಾಲ್ಕನೆ ಹಂತದ ಯೋಜನೆಗಳ ರಾಜ್ಯ ಮಟ್ಟದ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ‘ಬೆಂ.ಗ್ರಾ.ಜಿಲ್ಲೆ, ಮಂಡ್ಯ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ(ಚಿಕ್ಕಬಳ್ಳಾಪುರ ನಗರಸಭೆ ಹೊರತುಪಡಿಸಿ), ದಕ್ಷಿಣ ಕನ್ನಡ(ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪ.ಪಂ.ಹೊರತುಪಡಿಸಿ), ಯಾದಗಿರಿ, ಬೀದರ್, ಶಿವಮೊಗ್ಗ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2022-23ರಿಂದ 2024-25ನೆ ಸಾಲಿನ ಆರ್ಥಿಕ ವರ್ಷದವರೆಗೆ ಸಿಎಂ ನಗರೋತ್ಥಾನ ಯೋಜನೆಯಡಿ ಈ ಕಾಮಗಾರಿಗಳನ್ನು ಕೈಗತ್ತಿಕೊಳ್ಳಲಾಗುತ್ತದೆ' ಎಂದರು.

‘ಬೆಂ.ಗ್ರಾಮಾಂತರ ಜಿಲ್ಲೆ: 80.34 ಕೋಟಿ ರೂ., ಮಂಡ್ಯ ಜಿಲ್ಲೆ: 89.25 ಕೋಟಿ ರೂ., ಕೋಲಾರ ಜಿಲ್ಲೆ: 123.25 ಕೋಟಿ ರೂ., ಚಿಕ್ಕಬಳ್ಳಾಪುರ ಜಿಲ್ಲೆ(ಚಿಕ್ಕಬಳ್ಳಾಪುರ ನಗರಸಭೆ ಹೊರತುಪಡಿಸಿ): 84.82 ಕೋಟಿ ರೂ., ದಕ್ಷಿಣ ಕನ್ನಡ ಜಿಲ್ಲೆ(ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪ.ಪಂ.ಹೊರತುಪಡಿಸಿ): 72.25 ಕೋಟಿ ರೂ., ಧಾರವಾಡ ಜಿಲ್ಲೆ: 29.75 ಕೋಟಿ ರೂ., ಗದಗ ಜಿಲ್ಲೆ( ಗದಗ-ಬೆಟಗೇರಿ ನಗರಸಭೆ ಹೊರತುಪಡಿಸಿ): 55.25 ಕೋಟಿ ರೂ., ಕೊಪ್ಪಳ: 106.25 ಕೋಟಿ ರೂ., ಹಾವೇರಿ ಜಿಲ್ಲೆ(ಶಿಗ್ಗಾಂವ, ಬಂಕಾಪುರ, ಸವಣೂರು ಪುರಸಭೆ ಹೊರತುಪಡಿಸಿ): 97.75 ಕೋಟಿ ರೂ., ರಾಯಚೂರು ಜಿಲ್ಲೆ(ಮಾನ್ವಿ, ಜಾಲಹಳ್ಳಿ ಪುರಸಭೆ ಮತ್ತು ಕವಿತಾಳ ಪ.ಪಂ.ಹೊರತುಪಡಿಸಿ): 110.50 ಕೋಟಿ ರೂ., ಯಾದಗಿರಿ ಜಿಲ್ಲೆ: 114.75 ಕೋಟಿ ರೂ., ಬೀದರ್ ಜಿಲ್ಲೆ: 97.75 ಕೋಟಿ ರೂ., ಶಿವಮೊಗ್ಗ ಜಿಲ್ಲೆ: 106.25 ಕೋಟಿ ರೂ., ಬಾಗಲಕೋಟೆ ಜಿಲ್ಲೆ: 208.25 ಕೋಟಿ ರೂ., ಉತ್ತರ ಕನ್ನಡ ಜಿಲ್ಲೆ: 143.02 ಕೋಟಿ ರೂ., ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲು ಸಮಿತಿ ಒಪ್ಪಿಗೆ ನೀಡಿದೆ.

ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೆ ಹಂತದ ಯೋಜನೆಯಡಿ 3,885 ಕೋಟಿ ರೂ.ಮೊತ್ತದ ಕ್ರಿಯಾ ಯೋಜನೆಗೆ ಸಚಿವ ಸಂಪುಟ ಜನವರಿಯಲ್ಲಿ ಅನುಮೋದನೆ ನೀಡಿತ್ತು. ಅದಕ್ಕೆ ಪೂರಕವಾಗಿ ಈ ಬಾರಿಯ 15 ಜಿಲ್ಲೆಗಳು ಸೇರಿದಂತೆ ಈವರೆಗೆ 25 ಜಿಲ್ಲೆಗಳ ಸಿಎಂ ಅಮೃತ ನಗರೋತ್ಥಾನ ಯೋಜನೆಯ 2367.57 ಕೋಟಿ ರೂ.ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಿದಂತಾಗಿದೆ.  

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖಾ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಅರ್ಚನಾ, ಮುಖ್ಯ ಇಂಜಿನಿಯರ್ ಸತ್ಯನಾರಾಯಣ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X