ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

ಮಂಗಳೂರು : ಸಮಾಜದಲ್ಲಿ ಬಂಟ ಸಮಾಜಕ್ಕೆ ವಿಶೇಷವಾದ ಗೌರವ, ಸ್ಥಾನಮಾನವಿದೆ. ಎಂಟೆದೆಯ ಬಂಟರಾಗಿ ಐಕಳ ಹರೀಶ್ ಶೆಟ್ಟಿ ಎಲ್ಲಾ ಸಮಾಜದ ಕಷ್ಟಕ್ಕೆ ಒಕ್ಕೂಟದ ಮೂಲಕ ಧ್ವನಿಯಾಗಿರುವುದು ಶ್ಲಾಘನೀಯ. ಹಿಂದೆ ಹೆಚ್ಚಿನ ದೇವಸ್ಥಾನ, ದೈವಸ್ಥಾನಗಳ ಅಧಿಕಾರ ಜೈನರು ಹಾಗೂ ಬಂಟರಲ್ಲಿತ್ತು. ಈಗ ಬೇರೆಯವರ ಪಾಲಾಗುತ್ತಿದೆ. ಈ ಬಗ್ಗೆ ಗಮನಹರಿಸಿ ಸಮಾಜದದಲ್ಲಿನ ನಮ್ಮ ಅಧಿಕಾರವನ್ನು ಉಳಿಸಿ ಬೆಳೆಸುವಂತೆ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ಆರ್. ರಾಜೇಂದ್ರ ಕುಮಾರ್ ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಯೋಜನೆ ಹಾಗೂ ಬಂಟ ಸಮಾಜದ ದೈವದ ಮುಕ್ಕಾಲ್ದಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಮುಂಬೈ ಹೇರಂಬ ಇಂಡಸ್ಟ್ರೀಸ್‌ನ ಅಧ್ಯಕ್ಷ, ಒಕ್ಕೂಟದ ನಿರ್ದೇಶಕ ಸದಾಶಿವ ಶೆಟ್ಟಿ ಕುಳೂರು-ಕನ್ಯಾನ, ಮಾಜಿ ಸಚಿವ ವಿ. ನಾಗರಾಜ ಶೆಟ್ಟಿ, ಒಕ್ಕೂಟದ ನಿರ್ದೇಶಕ ಪ್ರವೀಣ್ ಭೋಜ ಶೆಟ್ಟಿ, ಉದ್ಯಮಿ ರಾಜೇಂದ್ರ ಶೆಟ್ಟಿ ಹುಬ್ಬಳ್ಳಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಂಟ ಸಮಾಜದ ದೈವ ಪಾತ್ರಿಗಳಾದ ಶ್ರೀಧರ ಶೆಟ್ಟಿ ಪಾಲಡ್ಕ, ಪೂವಪ್ಪಶೆಟ್ಟಿ ಕರೀಂಜೆ, ಲಾಡಿ ಅಣ್ಣು ಶೆಟ್ಟಿ, ಪದ್ಮನಾಭ ಶೆಟ್ಟಿ ಮಲಾರಬೀಡು, ನಾರಾಯಣ ಶೆಟ್ಟಿ ಪುದ್ದರಕೋಡಿ, ಪ್ರಸಾದ್ ಶೆಟ್ಟಿ ಪೆರ್ವಾಜೆ, ಸುನೀಲ್ ನಾರಾಯಣ ಶೆಟ್ಟಿ ಕಾಪು, ಪ್ರಭಾಕರ ಶೆಟ್ಟಿ ದರೆಗುಡ್ಡೆ, ಸುನೀಲ್ ಶೆಟ್ಟಿ ಮಾರೂರು, ಅಭಿಲಾಷ್ ಚೌಟ ಕೊಡಿಪಾಡಿ ಬಾಳಿಕೆ, ಬಾಲಕೃಷ್ಣ ಉಪ್ಪೂರು, ಸೌರವ್ ಶೆಟ್ಟಿ ಮೇರಮಜಲುಗುತ್ತು ಹಾಗೂ ರಮೇಶ್ ಶೆಟ್ಟಿ ಮಾರ್ನಾಡ್ ಅವರನ್ನು ಸನ್ಮಾನಿಸಲಾಯಿತು. ಡಾ. ಸುಧಾರಾಣಿ, ಡಾ. ಮಂಜುಳಾ ಶೆಟ್ಟಿ, ಡಾ. ಪ್ರಿಯಾ ಹರೀಶ್ ಶೆಟ್ಟಿ ಸನ್ಮಾನಪತ್ರ ವಾಚಿಸಿದರು.
ಸಮಾಜ ಕಲ್ಯಾಣ ಯೋಜನೆಯಡಿ ಶಿಕ್ಷಣ, ಮದುವೆ, ಮನೆ ನಿರ್ಮಾಣ, ಕ್ರೀಡೆ, ವೈದ್ಯಕೀಯ ಫಲಾನುಭವಿಗಳಿಗೆ ೪೭ ಲಕ್ಷ ರೂ. ಅಧಿಕ ಮೊತ್ತದ ಚೆಕ್‌ಗಳನ್ನು ವಿತರಿಸಲಾಯಿತು.
ಕದ್ರಿ ನವನೀತ ಶೆಟ್ಟಿ ಹಾಗೂ ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಡಾ. ಪ್ರತಿಭಾ ರೈ ಪ್ರಾರ್ಥಿಸಿದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ ವಂದಿಸಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಜತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಲ್ಕೆಬೈಲು, ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಮತ್ತಿತರರು ಉಪಸ್ಥಿತರಿದ್ದರು.







