ಸುರತ್ಕಲ್ ಬಂಟರ ಸಂಘದಿಂದ ವೈದ್ಯಕೀಯ ತಪಾಸಣಾ ಶಿಬಿರ

ಸುರತ್ಕಲ್: ಸಂಪ್ರದಾಯ, ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಸುರತ್ಕಲ್ ಬಂಟರ ಸಂಘ ಮಾಡುತ್ತಿದೆ. ಸಂಘವು ಬಂಟ ಸಮಾಜಕ್ಕೆ ಮಾತ್ರ ಸೀಮಿತವಾಗದೆ ಎಲ್ಲಾ ವರ್ಗದ ಜನರು ಮೆಚ್ಚುವ ಕಾರ್ಯವನ್ನು ಮಾಡುತ್ತಿದೆ. ಇಂತಹ ಸಮಾಜ ಕಾರ್ಯಗಳಿಗೆ ಹೆಸರುವಾಸಿಯಾಗಿರುವ ಸುರತ್ಕಲ್ ಬಂಟರ ಸಂಘಕ್ಕೆ ಅರ್ಹವಾಗಿಯೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಬೆಳ್ಳಿ ಹಬ್ಬದ ಹೊಸ್ತಿಲಲ್ಲಿರುವ ಸಂಘ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಾ ಬರಲಿ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ತಿಳಿಸಿದರು.
ಬಂಟರ ಸಂಘ (ರಿ.) ಸುರತ್ಕಲ್, ವಿಜಯ ಪಾಲಿ ಕ್ಲಿನಿಕ್ ಡಯಾಗ್ನಸ್ಟಿಕ್ ಸೆಂಟರ್, ವಿಜಯ್ ಮೆಡಿಕಲ್ಸ್ ಸುರತ್ಕಲ್ ಇದರ ಸಂಯುಕ್ತ ಆಶ್ರಯದಲ್ಲಿ ಬಂಟರ ಭವನದಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜಾ ವಹಿಸಿದ್ದರು. ಅತಿಥಿಗಳಾಗಿ ಡಾ. ವಿಜಯ್ ಎಂ. ಬುದ್ನಾರ್, ಡಾ. ರಾಹುಲ್ ರಾವ್, ವಿಜಯ ಮೆಡಿಕಲ್ಸ್ ಮಾಲಕರಾದ ದಯಾನಂದ ಡಿ. ಶೆಟ್ಟಿ, ವೈದ್ಯಕೀಯ ಸಮಿತಿಯ ಸಂಚಾಲಕ ಪ್ರತಾಪ್ ಶೆಟ್ಟಿ, ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಲೋಕಯ್ಯ ಶೆಟ್ಟಿ ಸ್ವಾಗತಿಸಿದರು. ಪ್ರವೀಣ್ ಶೆಟ್ಟಿ ವಂದಿಸಿದರು. ಸುಧಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.