ಪಿಎಸ್ಸೈ ನೇಮಕಾತಿ ಹಗರಣ: ಕೆಎಟಿ ಮೊರೆ ಹೋದ ಅಭ್ಯರ್ಥಿಗಳು

ಫೈಲ್ ಚಿತ್ರ
ಬೆಂಗಳೂರು, ಮೇ 4: ಪಿಎಸ್ಸೈ ನೇಮಕಾತಿ ಹಗರಣ ಸಂಬಂಧ ನೇಮಕಾತಿ ರದ್ದುಗೊಳಿಸಿರುವ ಸರಕಾರದ ಕ್ರಮ ಪ್ರಶ್ನಿಸಿ ಆಯ್ಕೆಯಾದ ಹಲವು ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಮೊರೆ ಹೋಗಿದ್ದಾರೆ.
ಸರಕಾರದ ಆದೇಶ ರದ್ದುಪಡಿಸಲು ಮನವಿ ಕೋರಿ ಪವಿತ್ರಾ ಸೇರಿ 28 ಅಭ್ಯರ್ಥಿಗಳು ಕೆಎಟಿಗೆ ಮೊರೆ ಹೋಗಿದ್ದಾರೆ. ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಬೇಕು. ಕಳಂಕಿತರಲ್ಲದವರಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಕೆಎಟಿ ಬಳಿ ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೆ, ಈ ಹಿಂದೆ ನಡೆದಿದ್ದ ಪಿಎಸ್ಸೈ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರಕಾರ ರದ್ದು ಮಾಡಿದೆ. 545 ಪಿಎಸ್ಸೈ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಈಗಾಗಲೇ ಪ್ರಕಟಿಸಿದ್ದಾರೆ.
Next Story





