ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಡಾ.ರಾಜನಂದಿನಿ
ಸಾಗರ,ಮೇ.4 : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಅವರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿಸಿಸಿ ಕಾರ್ಯದರ್ಶಿಯಾಗಿರುವ ಡಾ. ರಾಜನಂದಿನಿ ಕಾಗೋಡು ಅವರ ಕಾರನ್ನು ತ್ಯಾಗರ್ತಿ ಸಮೀಪ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನಲೆಯಲ್ಲಿ ತ್ಯಾಗರ್ತಿ ಗ್ರಾಮದ ಮಂಜು ಮತ್ತು ಇತರ ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಜನಂದಿನಿ ಅವರು ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ತ್ಯಾಗರ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಸಾಗರಕ್ಕೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವಾಹನ ಚಾಲಕ ಪ್ರಕಾಶ್ ಪೋಲೀಸರಿಗೆ ದೂರು ನೀಡಿದ್ದಾರೆ.
Next Story





