ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ : ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಕಚೇರಿ ಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆಯೊಂದಿಗೆ, ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಮೇ 11 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: ೦೮೨೦-೨೫೭೪೯೭೨ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story