ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ಉಚಿತ ವಾಲಿಬಾಲ್ ಶಿಬಿರ
ಕುಂದಾಪುರ : ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗ ಮತ್ತು ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಮೇ 7ರಿಂದ 15ರವರೆಗೆ ಉಚಿತ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರವು ಪ್ರತಿದಿನ ಬೆಳಗ್ಗೆ 7.30ರಿಂದ 10.30ರವರೆಗೆ, ಅಪರಾಹ್ನ 3ರಿಂದ 6ರವರೆಗೆ ಕಾಲೇಜು ಆವರಣದಲ್ಲಿ ನಡೆಯಲಿದ್ದು 14ರಿಂದ 18 ವರ್ಷ ವಯೋ ಮಿತಿಯ ವಿದ್ಯಾರ್ಥಿಗಳು ಭಾಗವಹಿಸಬಹುದು.
ಆಸಕ್ತರು ತರಬೇತುದಾರರಾದ ಮುಹಮ್ಮದ್ ಸಮೀರ್(ಮೊ-9911246407), ಇಲ್ಯಾಸ್, ವೀಣಾ ಅಗೇರ್‌ರನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಪ್ರೊ.ದೋಮ ಚಂದ್ರಶೇಖರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story