Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಲೆಗಳನ್ನಿಡಲು ಮಾಡಿದ್ದ ಶೆಡ್ ಕೂಡಾ...

ಬಲೆಗಳನ್ನಿಡಲು ಮಾಡಿದ್ದ ಶೆಡ್ ಕೂಡಾ ಸಮುದ್ರಪಾಲು: ಉಳ್ಳಾಲ ಕಡಲ್ಕೊರೆತ ಪ್ರದೇಶಗಳಲ್ಲಿ ಸ್ಥಳೀಯರ ಆತಂಕ

ವಿಧಾನ ಪರಿಷತ್‌ನ ಬಾಕಿ ಭರವಸೆಗಳ ಸಮಿತಿಯಿಂದ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ5 May 2022 1:27 PM IST
share
ಬಲೆಗಳನ್ನಿಡಲು ಮಾಡಿದ್ದ ಶೆಡ್ ಕೂಡಾ ಸಮುದ್ರಪಾಲು: ಉಳ್ಳಾಲ ಕಡಲ್ಕೊರೆತ ಪ್ರದೇಶಗಳಲ್ಲಿ ಸ್ಥಳೀಯರ ಆತಂಕ

ಮಂಗಳೂರು, ಮೇ 5: ಕಡಲ್ಕೊರೆತ ತಡೆಗಾಗಿ ಇಲ್ಲಿ ಪ್ರತೀ ವರ್ಷ ಸಮುದ್ರ ಕಿನಾರೆಗೆ ಕಲ್ಲು ಹಾಕಲಾಗುತ್ತದೆ. ಸಮುದ್ರದ ಮದ್ಯದಲ್ಲೇ ಅಲೆಗಳ ರಭಸಕ್ಕೆ ಬ್ರೇಕ್ ಹಾಕಿ ಸಮುದ್ರ ತೀರದ ಮನೆಗಳನ್ನು ರಕ್ಷಿಸುವ ಉದ್ದೇಶದಿಂದ ರೀಫ್‌ಗಳನ್ನು ಅಳವಡಿಸಲಾಗಿದೆ. ಆದರೆ ಯಾವುದೂ ಪ್ರಯೋಜನವಾಗುತ್ತಿಲ್ಲ. ಮೀನುಗಾರಿಕಾ ಬಲೆಗಳನ್ನಿಡಲು ನಿರ್ಮಿಸಲಾಗಿದ್ದ ಶೆಡ್ ಕೂಡಾ ಇತ್ತೀಚೆಗೆ ಸಮುದ್ರಪಾಲಾಗಿದೆ. ಇದು ಇಂದು ಉಳ್ಳಾಲ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲ ಪ್ರದೇಶಕ್ಕೆ ವಿಧಾನ ಪರಿಷತ್‌ನ ಬಾಕಿ ಭರವಸೆಗಳ ಸಮಿತಿ ಪರಿಶೀಲನೆಗೆ ಭೇಟಿ ನೀಡಿದ್ದ ವೇಳೆ ಸ್ಥಳೀಯರಿಂದ ವ್ಯಕ್ತವಾದ ಆತಂಕದ ಮಾತುಗಳು.

ಪ್ರತಿ ವರ್ಷ ಇಲ್ಲಿ ಮಳೆಗಾಲದ ಸಂದರ್ಭ ಕಡಲ್ಕೊರೆತಕ್ಕೆ ರಸ್ತೆಗಳು ಸಮುದ್ರಪಾಲಾಗುತ್ತವೆ. ಮತ್ತೆ ಕೋಟಿಗಟ್ಟಲೆ ಹಣ ವ್ಯಯಿಸಿ ರಸ್ತೆ ನಿರ್ಮಿಸಲಾಗುತ್ತದೆ. ಆದರೆ ಒಂದೇ ವರ್ಷದಲ್ಲಿ ಅದು ಕಡಲ್ಕೊರೆತಕ್ಕೆ ಕೊಚ್ಚಿ ಹೋಗುತ್ತದೆ. ಇಲ್ಲಿ ಸಮುದ್ರದ ಅಲೆಯನ್ನು ತಡೆಯಲು ಶಾಶ್ವತ ಕ್ರಮ ವಹಿಸದೆ ರಸ್ತೆ ಮಾಡಿ ಏನೂ ಪ್ರಯೋಜನವಿಲ್ಲ ಎಂದು ಸಮಿತಿಯ ಅಧ್ಯಕ್ಷ ಬಿ.ಎಂ. ಫಾರೂಕ್ ಅಧಿಕಾರಿಗಳ ಜತೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು.

ಸಮುದ್ರ ತೀರದಲ್ಲಿ ಮರಗಳನ್ನು ನೆಟ್ಟು ಹಸಿರೀಕರಣದೊಂದಿಗೆ ಬಹುಮಟ್ಟಿಗೆ ಕಡಲ್ಕೊರೆತ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಮಿತಿಗೆ ತಿಳಿಸಿದಾಗ, ಇಷ್ಟು ವರ್ಷಗಳಿಂದ ಕಡಲ್ಕೊರೆತ ತಡೆಗಾಗಿ ಎಷ್ಟು ಹಣವನ್ನು ವಿನಿಯೋಗಿಸಲಾಗಿದೆ. ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡುವಂತೆ ಸೂಚಿಸಿದರು.

ಸಮುದ್ರವೇ ಮರಳನ್ನು ಎಳೆದೊಯ್ದಿದೆ!

ಒಂದೆರಡು ವರ್ಷಗಳ ಹಿಂದೆ ಪರ್ವತಾಕಾರದಲ್ಲಿ ಶೇಖರವಾಗಿದ್ದ ಮರಳು ಎಲ್ಲಿ ಹೋಗಿದೆ ಎಂದು ಬಿ.ಎಂ.ಫಾರೂಕ್  ಪ್ರಶ್ನಿಸಿದಾಗ, ಆ ಮರಳನ್ನೆಲ್ಲಾ ಸಮುದ್ರವೇ ಎಳೆದೊಯ್ದಿದೆ. ಅದು ಕೇರಳ ಭಾಗಕ್ಕೆ ಸಾಗಿ ಅಲ್ಲಿ ಶೇಖರಣೆಯಾಗಿದೆ ಎಂದು ಸ್ಥಳೀಯರು ಪ್ರತಿಕ್ರಿಯಿಸಿದರು.

ಬಂದು ನೋಡಿ ಹೋಗುತ್ತಾರಷ್ಟೆ, ನಮ್ಮ ಸಮಸ್ಯೆ ಪರಿಹಾರವಾಗುತ್ತಿಲ್ಲ!

ಇಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರತೀ ವರ್ಷ ಬಂದು ಕಡಲ್ಕೊರೆತವನ್ನು ವೀಕ್ಷಿಸಿ ಹೋಗುತ್ತಾರೆ. ಭರವಸೆ ನೀಡುತ್ತಾರೆ. ಆದರೆ ನಾವು ಮಾತ್ರ ಇಲ್ಲಿ ಪ್ರತಿನಿತ್ಯ ಆತಂಕದಲ್ಲೇ ದಿನ ಕಳೆಯುತ್ತಿದ್ದೇವೆ. ಈ ಬಾರಿ ನಮ್ಮ ಮನೆಗಳೂ ಸಮುದ್ರಪಾಲಾಗುವ ಆತಂಕವನ್ನು ಎದುರಿಸುತ್ತಿದ್ದೇವೆ. ಇಲ್ಲಿ ಸಮುದ್ರ ತೀರಕ್ಕೆ ಕಲ್ಲು ಹಾಕುವ ಕೆಲಸ ಆಗಿಲ್ಲ ಎಂದು ಉಚ್ಚಿಲ ಬಳಿ ಸಮುದ್ರ ತೀರದ ರಸ್ತೆಯ ಬದಿಯ ಮನೆಗಳ ನಿವಾಸಿಗಳು ಸಮಿತಿ ಎದುರು ಅಳಲು ತೋಡಿಕೊಂಡರು.

ಇಲ್ಲಿ ಕೇವಲ ಕಲ್ಲುಹಾಕುವುದರಿಂದ ಪ್ರಯೋಜನವಾಗದು. ಅದನ್ನು ಪರಿಶೀಲಿಸುವುದಾಕ್ಕಾಗಿಯೇ ನಾವು ಬಂದಿದ್ದೇವೆ ಎಂದು ಬಿ.ಎಂ. ಫಾರೂಕ್ ಜನರ ಮನವಿಗೆ ಪ್ರತಿಕ್ರಿಯಿಸಿದರು.

ಎಸ್‌ಟಿಪಿ ವೈಜ್ಞಾನಿಕವಾಗಿ ಆಗಲಿ

ಉಳ್ಳಾಲದ ಎಸ್‌ಟಿಪಿ (ಒಳಚರಂಡಿ ಸಂಸ್ಕರಣಾ ಘಟಕ)ಗೆ ಸಮಿತಿ ಭೇಟಿ ನೀಡಿದ ವೇಳೆ ಸ್ಥಳೀಯರು ಅಲ್ಲಿನ ಒಳಚರಂಡಿ ವ್ಯವಸ್ಥೆಗಳ ಬಗೆ ಗಮನಸೆಳೆದರು. 30 ವರ್ಷಗಳಾದರೂ ಇನ್ನೂ ಇಲ್ಲಿನ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಎಸ್‌ಟಿಪಿ ಭೂಗತವಾಗಿ ಸ್ಥಾಪನೆಯಾಗಬೇಕು. ಆದರೆ ಇಲ್ಲಿ ನೆಲದ ಮೇಲೆಯೇ ರಚಿಸಲಾಗಿದೆ. ಇದರಿಂದ ಸಮುದ್ರ ತೀರದಲ್ಲೇ ಇರುವ ಈ ಪ್ರದೇಶದಲ್ಲಿ ಸಾಕಷ್ಟು ತೊಂದರೆಯಾಗಲಿದೆ ಎಂದು ಸ್ಥಳೀಯ ಹಿರಿಯ ನಾಗರಿಕರೊಬ್ಬರು ಆತಂಕ ವ್ಯಕ್ತಪಡಿಸಿದರು.

2009ರಲ್ಲಿ ಆರಂಭವಾದ ಎಸ್‌ಟಿಪಿ ಕಾಮಗಾರಿಗೆ ಸುಮಾರು 16 ವರ್ಷಗಳ ಬಳಿಕ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (ಎನ್‌ಜಿಟಿ)ಯಿಂದ ಒಂದೆರಡು ವರ್ಷದ ಹಿಂದಷ್ಟೇ ಅನುಮತಿ ಪಡೆಯಲಾಗಿದೆ. ಕಾಮಗಾರಿ ಆರಂಭವಾಗುವ ಮೊದಲು ಸರ್ವೆಯ ಆರಂಭದಲ್ಲೇ ಈ ಅನುಮತಿಯನ್ನು ಪಡೆಯಬೇಕಾಗಿದ್ದರೂ ಅದನ್ನು ಪಡೆಯದೆ ಕಾಮಗಾರಿ ಆರಂಭಿಸಲಾಗಿದೆ. ಇದು ಯಾವ ಆಧಾರದಲ್ಲಿ ಮಾಡಿರುವುದು ಎಂದು ಬಿ.ಎಂ. ಫಾರೂಕ್ ಅಧಿಕಾರಿಗಳನ್ನು ಪ್ರಶ್ನಿಸಿದರು.

ಎಸ್‌ಟಿಪಿಯು ನೇತ್ರಾವತಿ ನದಿಯ ತಟದಲ್ಲೇ ಜನವಸತಿ ಪ್ರದೇಶದ ಸಮೀಪವೇ ನಿರ್ಮಾಣವಾಗಿರುವುದಲ್ಲದೆ, ಸಮುದ್ರಕ್ಕೂ ಸಮೀಪದಲ್ಲಿದೆ ಎಂದು ಅವರು ಹೇಳಿದರು.

ಸಮಿತಿ ಸದಸ್ಯರಾದ ಯು.ಬಿ. ವೆಂಕಟೇಶ್, ಶಶೀಲ್ ಜಿ. ನಮೋಶಿ, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಸಹಾಯಕ ಆಯುಕ್ತ ಮದನ್ ಮೋಹನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X