Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಳೆಯಂಗಡಿ: ವಿಶೇಷ ಅತಿಥಿಗಳೊಂದಿಗೆ ಈದ್...

ಹಳೆಯಂಗಡಿ: ವಿಶೇಷ ಅತಿಥಿಗಳೊಂದಿಗೆ ಈದ್ ಆಚರಿಸಿದ ಬೊಳ್ಳೂರಿನ ರಿಲಾಯನ್ಸ್ ಅಸೋಸಿಯೇಷನ್

ವಾರ್ತಾಭಾರತಿವಾರ್ತಾಭಾರತಿ5 May 2022 5:14 PM IST
share
ಹಳೆಯಂಗಡಿ: ವಿಶೇಷ ಅತಿಥಿಗಳೊಂದಿಗೆ ಈದ್ ಆಚರಿಸಿದ ಬೊಳ್ಳೂರಿನ ರಿಲಾಯನ್ಸ್ ಅಸೋಸಿಯೇಷನ್

ಹಳೆಯಂಗಡಿ: ಬೊಳ್ಳೂರಿನ ರಿಲಾಯನ್ಸ್ ಅಸೋಸಿಯೇಷನ್ ವತಿಯಿಂದ ಮುಲ್ಕಿಯ ಆಪತ್ಬಾಂಧವ ಆಶ್ರಮದಲ್ಲಿ ವಿಶೇಷ ಅತಿಥಿಗಳೊಂದಿಗೆ ಈದ್ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಆಶ್ರಮದಲ್ಲಿ ಆಶ್ರಯ ಪಡೆದುಕೊಂಡಿರುವ ಐವತ್ತುಕ್ಕೂ ಹೆಚ್ಚು ಅನಾಥ, ನಿರ್ಗತಿಕ ಮತ್ತು ಮಾನಸಿಕ ಅಸ್ವಸ್ಥರಿಗೆ ಹೊಸ ಬಟ್ಟೆಯನ್ನು ಉಡುಗೊರೆಯಾಗಿ ನೀಡಲಾಯಿತು. ಜೊತೆಗೆ ಈ ವಿಶೇಷ ಅತಿಥಿಗಳಿಗಾಗಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಜೊತೆಗೆ ದಾನಿಗಳ ಸಹಕಾರದೊಂದಿಗೆ ಅನಾಥಾಶ್ರಮಕ್ಕೆ ಎರಡು ಟೇಬಲ್ ಫ್ಯಾನ್ ಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಿಲಾಯನ್ಸ್ ಅಸೋಸಿಯೇಷನ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾರಿಶ್ ನವರಂಗ್, "ಆಶ್ರಮದ ಮುಖ್ಯಸ್ಥ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಬಾಂಧ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದೊಂದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದು,  ಅವರ ಅನುಪಸ್ಥಿತಿಯಲ್ಲಿ ಆಶ್ರಮವು ಬಹಳಷ್ಟು ಸಂಕಷ್ಟದಲ್ಲಿದೆ ಎಂಬ ವಿಚಾರ ನಮ್ಮ ಗಮನಕ್ಕೆ ಬಂದಿತ್ತು. ಆ ಕಾರಣದಿಂದಲೇ ನಮ್ಮ ಸಂಸ್ಥೆಯು ಈ ಬಾರಿಯ ಈದ್ ಸಂಭ್ರಮಾಚರಣೆಯನ್ನು ಇಲ್ಲಿನ ವಿಶೇಷ ಅತಿಥಿಗಳೊಂದಿಗೆ ಆಚರಿಸುವ ಯೋಜನೆಯನ್ನು ರೂಪಿಸಿತು. ಇಲ್ಲಿನ ನಿರ್ಗತಿಕರೊಂದಿಗೆ ಬೆರೆಯಲು ಅವಕಾಶ ದೊರಕಿರುವುದು ಸಂತಸ ತಂದಿದೆ ಮತ್ತು ಈ ಬಾರಿಯ ಈದ್ ಸಂಭ್ರಮಾಚರಣೆ ಒಂದಷ್ಟು ಅರ್ಥಪೂರ್ಣವಾಗಿ ಆಚರಿಸಿದ ಧನ್ಯತಾ ಭಾವ ನಮ್ಮ ಸಂಸ್ಥೆಯ ಕಾರ್ಯಕರ್ತರಲ್ಲಿ ಮೂಡಿದೆ ಎಂದು ಹೇಳಿದರು.

ಹಾಗೆಯೇ ನಮ್ಮ ಮಹತ್ಕಾರ್ಯದಲ್ಲಿ ಕೈಜೋಡಿಸಿದ ಯುಬಿಟಿ ಗೈಸ್ ಜುಬೈಲ್ ಮತ್ತು ರಿಲಾಯನ್ಸ್ ಅಸೋಸಿಯೇಷನ್ ಜಿಸಿಸಿ ಘಟಕದ ಪದಾಧಿಕಾರಿಗಳಿಗೂ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಿಲಾಯನ್ಸ್ ಅಸೋಸಿಯೇಷನ್ ಅಧ್ಯಕ್ಷ ಅಕ್ಬರ್ ಬೊಳ್ಳೂರು, ಕಾರ್ಯದರ್ಶಿ ಇಕ್ಬಾಲ್ ಎಂ.ಎ,  ಜೊತೆ ಕಾರ್ಯದರ್ಶಿ ಫಾರೂಕ್ ನವರಂಗ್, ಉಪಾಧ್ಯಕ್ಷ ರಿಯಾಝ್ ಕೊಪ್ಪಳ, ಲೆಕ್ಕ ಪರಿಶೋಧಕ ಕೌಶಿಕ್ ಎಮ್.ಸಿ.ಎಫ್, ಗಲ್ಫ್ ಘಟಕದ ಫಾರೂಕ್ ಫ್ಯಾನ್ಸಿ, ನೌಶಾದ್ ದುಬೈ,,ಮಾಜಿ ಅಧ್ಯಕ್ಷ ಮುಬಾರಕ್ ಬೊಳ್ಳೂರು, ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಅಝೀಝ್, ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು, ಝಮೀರ್ ಜಮ್ಮಿ, ಸದಸ್ಯರಾದ ಮಮ್ತಾಜ್ ಅಲಿ, ಸಿದ್ದೀಕ್ ಬೊಳ್ಳೂರು, ಝಿಯಾಹುಲ್ ಹಕ್, ಬಾವ ನವರಂಗ್, ರಿಯಾಜ್ ಇಂದಿರಾನಗರ, ಹಕೀಮ್ ಇಂದಿರಾನಗರ, ಅಕ್ರಮ್, ಕಬೀರ್ ಹಾರಿಸ್ ಇಂದಿರಾನಗರ ಮತ್ತಿತರರು ಪಾಲ್ಗೊಂಡಿದ್ದರು. ಆಶ್ರಮದ ಆರೋಗ್ಯ ನಿರ್ವಾಹಕ ಶಹದ್ ಮನಲ್ ಈ ವೇಳೆ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X