Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕೆಪಿಎಸ್ಸಿ ಕಾರ್ಯದರ್ಶಿಯಾಗಿ ‘ಅಕ್ರಮ...

ಕೆಪಿಎಸ್ಸಿ ಕಾರ್ಯದರ್ಶಿಯಾಗಿ ‘ಅಕ್ರಮ ಫಲಾನುಭವಿ’ ಆರೋಪಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಜಿ.ಮಹಾಂತೇಶ್ಜಿ.ಮಹಾಂತೇಶ್6 May 2022 8:29 AM IST
share
ಕೆಪಿಎಸ್ಸಿ ಕಾರ್ಯದರ್ಶಿಯಾಗಿ ‘ಅಕ್ರಮ ಫಲಾನುಭವಿ’ ಆರೋಪಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಬೆಂಗಳೂರು: 1999ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಯಲ್ಲಿ ‘ಅಕ್ರಮ ಫಲಾನುಭವಿ’ ಎಂದೇ ಹೈಕೋರ್ಟ್‌ನ ಸತ್ಯಶೋಧನಾ ಸಮಿತಿ ವರದಿಯಲ್ಲಿ ಗುರುತಿಸಲಾಗಿರುವ ಬಾಗಲಕೋಟೆಯ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರನ್ನೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿರುವ ಸರಕಾರವು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ಸಹಾಯಕ ಪ್ರಾಧ್ಯಾಪಕರ ನೇಮಕಾತಿ, ಎಫ್‌ಡಿಎ, ಎಸ್‌ಡಿಎ ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯ ನಡುವೆಯೇ ಕಳಂಕಿತ ಅಧಿಕಾರಿಯನ್ನೇ ಆಯೋಗಕ್ಕೆ ಕಾರ್ಯದರ್ಶಿಯನ್ನಾಗಿ ನೇಮಿಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. 1998, 1999 ಮತ್ತು 2004ನೇ ಸಾಲಿನಲ್ಲಿ ವಾಮಮಾರ್ಗದ ಮೂಲಕ ನೇಮಕವಾಗಿದ್ದ ಅಧಿಕಾರಿಗಳ ನೇಮಕಾತಿ ಮತ್ತು ಅವರಿಗೆ ಐಎಎಸ್‌ಗೆ ನೀಡಿದ್ದ ಬಡ್ತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಖಲೀಲ್ ಅಹ್ಮದ್ ಮತ್ತಿತರರು ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಅದಿನ್ನೂ ವಿಚಾರಣೆಗೆ ಬಾಕಿ ಇದೆ. ಹೀಗಿದ್ದರೂ ಅದೇ ಸಾಲಿನಲ್ಲಿ ಅಕ್ರಮ ಫಲಾನುಭವಿ ಎಂದೇ ಸತ್ಯಶೋಧನೆ ಸಮಿತಿ ವರದಿಯಲ್ಲಿ ಗುರುತಿಸಲಾಗಿರುವ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ಅವರನ್ನು ಆಯೋಗಕ್ಕೆ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿರುವುದಕ್ಕೆ ಬಲವಾದ ಆಕ್ಷೇಪಗಳು ವ್ಯಕ್ತವಾಗಿವೆ.

1999ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಯಲ್ಲಿ ಗಂಭೀರ ಸ್ವರೂಪದ ಅಕ್ರಮಗಳು ನಡೆದಿದ್ದವು ಎಂದು ಸಿಐಡಿ ತನಿಖಾ ವರದಿ ಸಲ್ಲಿಸಿತ್ತು. ಈ ವರದಿ ಆಧರಿಸಿ ಸರಕಾರವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಖಲೀಲ್ ಅಹ್ಮದ್ ಮತ್ತಿತರರು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಇಡೀ ಅಕ್ರಮದ ಸತ್ಯಾಸತ್ಯತೆ ತಿಳಿಯಲು ಹೈಕೋರ್ಟ್ ತನ್ನ ಕಣ್ಗಾವಲಿನಲ್ಲೇ ಸತ್ಯಶೋಧನೆ ಸಮಿತಿಯನ್ನೂ ರಚಿಸಿತ್ತು. ಈ ಸಮಿತಿ ನೀಡಿದ್ದ ವರದಿಯಲ್ಲಿಯೂ ಕ್ಯಾಪ್ಟನ್ ರಾಜೇಂದ್ರ ಅವರನ್ನು ಅಕ್ರಮ ಫಲಾನುಭವಿ ಎಂದೇ ಗುರುತಿಸಲಾಗಿತ್ತು. ಇವರಿಗೆ ಆಯೋಗದ ಅಂದಿನ ಅಧ್ಯಕ್ಷರಾಗಿದ್ದ ಡಾ.ಎಚ್.ಎನ್. ಕೃಷ್ಣ ಅವರು ವ್ಯಕ್ತಿತ್ವ ಪರೀಕ್ಷೆಯಲ್ಲಿ ಅಸಹಜ ಅಂಕಗಳನ್ನು ನೀಡಿದ್ದರು ಎಂದು ವರದಿಯಲ್ಲಿ ವಿವರಿಸಲಾಗಿತ್ತು. 2005ರ ಆಗಸ್ಟ್ 13ರಂದು ನಡೆದಿದ್ದ ವ್ಯಕ್ತಿತ್ವ ಪರೀಕ್ಷೆಯಲ್ಲಿ ಕ್ಯಾಪ್ಟನ್ ರಾಜೇಂದ್ರ ಅವರಿಗೆ ಆಯೋಗದ ಅಂದಿನ ಅಧ್ಯಕ್ಷ ಡಾ.ಎಚ್.ಎನ್. ಕೃಷ್ಣ ಅವರೊಬ್ಬರೇ 200ಕ್ಕೆ 194 ಅಂಕಗಳನ್ನು ಕರುಣಿಸಿದ್ದರು. ಉಳಿದ ಸದಸ್ಯರು ಕ್ರಮವಾಗಿ 125, 110, 165, 100, 150 ಅಂಕ ನೀಡಿದ್ದರು ಎಂಬುದು ಸತ್ಯಶೋಧನೆ ಸಮಿತಿ ವರದಿಯಿಂದ ತಿಳಿದು ಬಂದಿದೆ.

ನೇಮಕಾತಿಯಲ್ಲಿ ಅಕ್ರಮ ಫಲಾನುಭವಿ ಎಂದು ಗುರುತಿಸಲಾಗಿರುವ ರಾಜೇಂದ್ರ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಿಸಿರುವುದು ಸಾಕ್ಷಗಳ ನಾಶವಾಗುವ ಸಾಧ್ಯತೆಗಳಿವೆ ಎಂಬ ಆರೋಪ ಕೇಳಿ ಬಂದಿದೆ.

1998, 1999 ಮತ್ತು 2004ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆದಿದ್ದವು. ಈ ಸಂಬಂಧ ಖಲೀಲ್ ಅಹ್ಮದ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ್ಯಾಯಾಧೀಶರಾಗಿದ್ದ ಎನ್. ಕುಮಾರ್ ಅವರ ಪೀಠವು ಈ ನೇಮಕಾತಿಗಳು ಸಂವಿಧಾನಬಾಹಿರವಾಗಿ ನಡೆದಿವೆ ಎಂದು ಉಲ್ಲೇಖಿಸಿದ್ದರು. ಅಲ್ಲದೇ ಈ ಮೂರು ಸಾಲಿನ ನೇಮಕಾತಿಯ ಆಯ್ಕೆಪಟ್ಟಿಯನ್ನು ಪರಿಷ್ಕರಿಸಬೇಕು ಮತ್ತು ಅದನ್ನು 1;20 (ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯಪರೀಕ್ಷೆಗೆ) ಮತ್ತು 1;5 (ವ್ಯಕ್ತಿತ್ವ ಪರೀಕ್ಷೆ) ಅನುಪಾತದ ಪ್ರಕಾರ ಹೊಸದಾಗಿ ಪಟ್ಟಿಯನ್ನು ಪ್ರಕಟಿಸಬೇಕು ಎಂದು ತೀರ್ಪು ನೀಡಿತ್ತು.

ಆದರೆ ಸರಕಾರವು 6 ವರ್ಷಗಳಾದರೂ ಮೂರನೇ ಮೌಲ್ಯಮಾಪನ ಅಂಕಗಳು ಮತ್ತು 2014 ನವೆಂಬರ್ 11ರಂದು ಕೆಪಿಎಸ್ಸಿಯು ಹೈಕೋರ್ಟ್‌ಗೆ ಸಲ್ಲಿಸಿದ್ದ ಪಟ್ಟಿಯನ್ನು ಮಾತ್ರ ಪರಿಷ್ಕರಿಸಿದೆ. ಆದರೆ 1999 ಮತ್ತು 2004ನೇ ಸಾಲಿನ ನೇಮಕಾತಿ ಪಟ್ಟಿಯನ್ನು ಇದುವರೆಗೂ ಪರಿಷ್ಕರಿಸಿಲ್ಲ.

ಹೈಕೋರ್ಟ್ ಆದೇಶದ ಮೇರೆಗೆ ಆಯೋಗವು 1998ನೇ ಸಾಲಿನ ಪಟ್ಟಿಯನ್ನು ಪರಿಷ್ಕರಿಸಿದ್ದನ್ನು ಪ್ರಶ್ನಿಸಿ ಎಚ್.ಎನ್. ಗೋಪಾಲಕೃಷ್ಣ, ಎಚ್. ಬಸವರಾಜೇಂದ್ರ, ಕವಿತಾ ಮನ್ನಿಕೇರಿ, ಪಿ. ವಸಂತಕುಮಾರ್, ಎನ್. ಶಿವಶಂಕರ್, ಕರಿಗೌಡ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ ಈ ಅಧಿಕಾರಿಗಳಿಗೆ ಐಎಎಸ್ ಗೆ ಬಡ್ತಿಯನ್ನು ನೀಡುವಾಗ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ಬದ್ಧರಾಗಿರಬೇಕು ಎಂಬ ಷರತ್ತು ಬದ್ಧ ಒಪ್ಪಿಗೆ ನೀಡಿತ್ತು. ಇವರೆಲ್ಲರ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ತಿರಸ್ಕೃತವಾದರೂ ಈಗಲೂ ಐಎಎಸ್ ಹುದ್ದೆಯಲ್ಲಿಯೇ ಮುಂದುವರಿಯುತ್ತಿದ್ದಾರೆ.

ಇದಲ್ಲದೆ ಇದೇ ಅಧಿಕಾರಿಗಳು ಕೆಎಟಿಯಲ್ಲಿಯೂ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನೂ ಕೆಎಟಿ ವಜಾಗೊಳಿಸಿದೆ. ಇಷ್ಟೆಲ್ಲಾ ತೀರ್ಪುಗಳು ಪ್ರಕಟವಾದರೂ ಸರಕಾರ ಮಾತ್ರ ಯಾವ ತೀರ್ಪನ್ನೂ ಅನುಷ್ಠಾನಗೊಳಿಸಿಲ್ಲ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X