ಶಂಕರಾಚಾರ್ಯರಿಗೆ ದ.ಕ. ಜಿಲ್ಲಾಡಳಿತದಿಂದ ನಮನ

ಮಂಗಳೂರು : ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಹವ್ಯಕ ಮಂಡಲದ ಜಂಟಿ ಆಶ್ರಯದಲ್ಲಿ ಶುಕ್ರವಾರ ನಂತೂರಿನಲ್ಲಿರುವ ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರ ಶ್ರೀ ಸಭಾಭವನದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು.
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಹವ್ಯಕ ಮಂಡಲ ಅಧ್ಯಕ್ಷ ಗಣೇಶ್ ಮೋಹನ್ ಕಾಶಿಮಠ, ಭಾರತೀ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಹಾಗೂ ಇತರೆ ಗಣ್ಯರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಅರ್ಪಿಸಿದರು.
ನಿವೃತ್ತ ಬ್ಯಾಂಕ್ ಅಧಿಕಾರಿ ದಿವಾಣ ಕೇಶವ ಭಟ್ ಶ್ರೀ ಶಂಕರಾಚಾರ್ಯ ಜಯಂತಿಯ ಸಂದೇಶ ನೀಡಿದರು. ಇದೇ ವೇಳೆ ಮಂಗಳೂರು ಮೇಯರ್ ಹಾಗೂ ಅಪರ ಜಿಲ್ಲಾಧಿಕಾರಿ ಮಾತನಾಡಿದರು.

Next Story





