Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಪ್ರಾರ್ಥನಾ ಮಂದಿರದ ಒಳನುಗ್ಗಿ...

ಕಡಬ: ಪ್ರಾರ್ಥನಾ ಮಂದಿರದ ಒಳನುಗ್ಗಿ ಶಿಲುಬೆ ಒಡೆದು, ಹನುಮಂತನ ಫೋಟೊ ಇರಿಸಿದ ದುಷ್ಕರ್ಮಿಗಳ ತಂಡ

ವಿದ್ಯುತ್‌ ಸಂಪರ್ಕದ ಮೀಟರ್‌, ನೀರಿನ ಪಂಪ್ ತೆಗೆದುಕೊಂಡು ಹೋದ ತಂಡದ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ6 May 2022 7:22 PM IST
share
ಕಡಬ: ಪ್ರಾರ್ಥನಾ ಮಂದಿರದ ಒಳನುಗ್ಗಿ ಶಿಲುಬೆ ಒಡೆದು, ಹನುಮಂತನ ಫೋಟೊ ಇರಿಸಿದ ದುಷ್ಕರ್ಮಿಗಳ ತಂಡ

ಕಡಬ: ಕ್ರೈಸ್ತ ಧರ್ಮದ ಪ್ರಾರ್ಥನಾ ಮಂದಿರದ ಬಾಗಿಲು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಚರ್ಚ್‌ನ ಒಳಗಡೆ ಹನುಮಂತ ದೇವರ ಫೋಟೊ ಇರಿಸಿದ್ದಲ್ಲದೆ ಮೇಲ್ಭಾಗದಲ್ಲಿದ್ದ ಶಿಲುಬೆಯನ್ನು ಒಡೆದು ಕೇಸರಿ ಧ್ವಜವನ್ನು ಅಳವಡಿಸಿರುವ ಘಟನೆ ಕಡಬ ಸಮೀಪದ ಕುಟ್ರುಪ್ಪಾಡಿ ಎಂಬಲ್ಲಿ ಮೇ 1ರಂದು ನಡೆದಿದ್ದು, ಇದೀಗ ದಿನಕ್ಕೊಂದು ತಿರುವು ಪಡೆಯುತ್ತಿದೆ.

ಕುಟ್ರುಪ್ಪಾಡಿ ಗ್ರಾಮದ ಪೇರಡ್ಕ ಎಂಬಲ್ಲಿರುವ 'ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್' ಚರ್ಚ್‌ಗೆ ಮೇ 1ರಂದು ತಡರಾತ್ರಿ ದುಷ್ಕರ್ಮಿಗಳ ತಂಡ ಬಾಗಿಲನ್ನು ಒಡೆದು ಅಕ್ರಮ ಪ್ರವೇಶ ಮಾಡಿ ಕಟ್ಟಡದ ಮೇಲ್ಭಾಗದಲ್ಲಿದ್ದ ಶಿಲುಬೆಯನ್ನು ನಾಶ ಮಾಡಿ ಕೇಸರಿ ಧ್ವಜವನ್ನು ಅಳವಡಿಸಿ, ಚರ್ಚ್‌ನ ಒಳಭಾಗದಲ್ಲಿ ಹನುಮಂತನ ಫೋಟೊವನ್ನು ಇರಿಸಿ, ಚರ್ಚ್‌ಗೆ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಣೆ ಮಾಡಿಟ್ಟಿದ್ದ ಕಪಾಟನ್ನು ಹೊಡೆದು ನಾಶ ಮಾಡಿ, ವಿದ್ಯುತ್‌ ಸಂಪರ್ಕದ ಉದ್ದೇಶಕ್ಕೆ ಅಳವಡಿಸಿದ್ದ ಮೀಟರ್‌ನ್ನು ಹಾಗೂ ನೀರಿನ ಪಂಪನ್ನು ತೆಗೆದುಕೊಂಡು ಹೋಗಿರುತ್ತಾರೆ. ಬುಧವಾರ ರಾತ್ರಿ ಕಟ್ಟಡಕ್ಕೆ ಅಳವಡಿಸಿದ್ದ ವಿದ್ಯುತ್‌ ಕಂಬದಿಂದ ಸರ್ವಿಸ್‌ ವಯರ್‌ಗಳನ್ನು ತುಂಡರಿಸಿರುವುದಾಗಿ ಫಾ. ಜೋಸ್ ವರ್ಗೀಸ್ ಅವರು ಗುರುವಾರ ಕಡಬ ಠಾಣೆಗೆ ದೂರು ನೀಡಿದ್ದಾರೆ.

ಮೇ 3 ರಂದು ಘಟನಾ ಸ್ಥಳಕ್ಕೆ ಹಿಂದುತ್ವ ಸಂಘಟನೆಗಳ ಮುಖಂಡರು ಭೇಟಿ ಇಲ್ಲಿ‌ನ ಚರ್ಚ್ ಅಕ್ರಮ ಕಟ್ಟಡವಾಗಿದ್ದು, ಸೂಕ್ತ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದರು. ಈ ಮಧ್ಯೆ ಪ್ರಾರ್ಥನಾ ಮಂದಿರದ ಹತ್ತಿರದ ವಾಸಿ ಎನ್ಕಾಜೆ ಶೋಭರಾಜ್ ಎಂಬವರು ತಹಶೀಲ್ದಾರರಿಗೆ ದೂರು ನೀಡಿದ್ದು, ನನ್ನ ಸ್ವಾಧೀನದ ಜಮೀನಿಗೆ ಅಪರಿಚಿತ ವ್ಯಕ್ತಿಗಳು ಅಕ್ರಮ ಪ್ರವೇಶ ಮಾಡಿ, ಧಾರ್ಮಿಕ ವಿಧಿ ವಿಧಾನಕ್ಕೆ ತಯಾರು ಮಾಡುತ್ತಿದ್ದಾರೆ. ನನ್ನ ತಂದೆಯವರಿಗೆ ಸದರಿ ಭೂಮಿ ಮಂಜೂರಾಗಿದ್ದು, ನನ್ನ ತಂದೆಯವರ ಮರಣದ ನಂತರ ನಾನು ಮತ್ತು ನನ್ನ ಸಹೋದರಿಯವರ ಜಂಟಿ ಹಕ್ಕಿನ ಸ್ಥಿರಾಸ್ತಿಯಾಗಿರುತ್ತದೆ. ಈ ಸ್ಥಿರಾಸ್ತಿಯಲ್ಲಿ ಕೃಷಿ ಮಾಡಿಕೊಂಡು ಬರುತ್ತಿದ್ದು, ನನ್ನ ಕುಟುಂಬ ನಿರ್ವಹಣೆ ಇದರಿಂದ ನಡೆಯುತ್ತಿದೆ. ಈ ಸ್ಥಿರಾಸ್ತಿಗೆ ಅಪರಿಚಿತ ವ್ಯಕ್ತಿಗಳು, ಇತರ ಧರ್ಮೀಯರು ಬಂದು ಜಾಗವನ್ನು ಅಗೆದು ಸಮತಟ್ಟುಗೊಳಿಸಿ ಕಟ್ಟಡ ಸಾಮಗ್ರಿಗಳನ್ನು ತಂದು ಅನಧಿಕೃತ ಕಟ್ಟಡ ನಿರ್ಮಾಣ ಮಾಡಲು ತಯಾರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ವಿವಾದಿತ ಕಟ್ಟಡದ ಆವರಣಕ್ಕೆ ಭೇಟಿ ನೀಡಿದ ಎಸ್‌ಡಿಪಿಐ ಮುಖಂಡರ ತಂಡ, ಹಿಂದುತ್ವ ಸಂಘಟನೆ ವಿರುದ್ಧ ಆರೋಪ ಮಾಡಿದೆ. ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟೀಸ್ ಮಾತನಾಡಿ, ರಾಜಕೀಯ ಲಾಭಕ್ಕೋಸ್ಕರ ಶಾಂತವಾಗಿದ್ದ ಕಡಬದಲ್ಲಿ ಕೋಮು ಗಲಭೆ ಸೃಷ್ಠಿಸುವ ಉದ್ದೇಶದಿಂದ ಹಿಂದುತ್ವ ಸಂಘಟನೆಯವರೇ ಚರ್ಚ್ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹ ಘಟನೆ ನಡೆಯುತ್ತಿದ್ದು, ಇದಕ್ಕೆ ಜಿಲ್ಲಾಡಳಿತವೇ ಹೊಣೆ. ಎಲ್ಲವನ್ನೂ ಅನಧಿಕೃತವೆಂದು ಯಾವ ಆಧಾರದಲ್ಲಿ ಹೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಕೋಮು ದ್ವೇಷ ಹರಡುವವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದೆಲ್ಲದರ ನಡುವೆ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕಿ ಗಾನಾ ಪಿ. ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಾರ್ಥನಾ ಮಂದಿರದ ಪ್ರಮುಖರನ್ನು ವಿಚಾರಣೆ ಮಾಡಿ ಘಟನೆಯ ಬಗ್ಗೆ ವಿವರ ಪಡೆದಿದ್ದಾರೆ‌. ಈ ಸಂದರ್ಭದಲ್ಲಿ ಕಡಬ ಠಾಣಾ ತನಿಖಾ ಎಸ್‌ಐ ಶ್ರೀಕಾಂತ್ ರಾಥೋಡ್, ಗುಪ್ತಚರ ಇಲಾಖಾ ಪೊಲೀಸ್ ಸಿಬ್ಬಂದಿ, ಕಡಬ ಪೊಲೀಸ್ ಸಿಬ್ಬಂದಿ ಹಾಗೂ ನೂಜಿಬಾಳ್ತಿಲ ಗ್ರಾಮ ಕರಣಿಕ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳಕ್ಕೆ ಉಪ್ಪಿನಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಉಮೇಶ್ ಉಪ್ಪಳಿಕೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X