ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಎಫ್‍ಐಆರ್ ರದ್ದು ಕೋರಿ ಹೈಕೋರ್ಟ್‍ಗೆ ಅರ್ಜಿ

ಬೆಂಗಳೂರು, ಮೇ 6: ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಮೊದಲ ಆರೋಪಿ ಎಸ್.ಜಾಗೃತ್ ಹಾಗೂ 17ನೆ ಆರೋಪಿ ರಚನಾ ಹನುಮಂತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮೇ 19ಕ್ಕೆ ಅರ್ಜಿ ವಿಚಾರಣೆಗೆ ಬರಲಿದೆ.
ರಚನಾ ಹಾಗೂ ಜಾಗೃತ್ ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ನಡೆದಿರುವ ಸಿಐಡಿ ತನಿಖೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ವಿರುದ್ಧ ಯಾವುದೇ ಆರೋಪ ಮತ್ತು ಸಾಕ್ಷ್ಯಾಧಾರಗಳು ಕಂಡುಬಂದಿಲ್ಲ. ಅಲ್ಲದೆ, ನಿಯಮಗಳ ಪ್ರಕಾರ ದೂರು ಸಲ್ಲಿಸಿದ ಅಧಿಕಾರಿಯೇ ತನಿಖೆ ನಡೆಸುವಂತಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
Next Story





