ವಿಟ್ಲ; ಬಾಲಕಿ ಆತ್ಮಹತ್ಯೆ ಪ್ರಕರಣ: ಆರೋಪಿ ಸೆರೆ

ಸಾಹುಲ್ ಹಮೀದ್
ಬಂಟ್ವಾಳ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಯಾನೆ ಕುಟ್ಟ ಬಂಧಿತ ಆರೋಪಿ.
ಈತನ ವಿರುದ್ಧ ಬಾಲಕಿ ಆತ್ಮಹತ್ಯೆ ಮಾಡಲು ದುಷ್ಪ್ರೇರಣೆ ನೀಡಿರುವುದಾಗಿ ಆರೋಪಿಸಿ ಬಾಲಕಿಯ ಹೆತ್ತವರು ದೂರು ನೀಡಿದ್ದು ಅದರಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಪೊಲೀಸರು ಎರಡು ತಂಡಗಳನ್ನು ರಚಿಸಿದ್ದರು. ಗುರುವಾರ ರಾತ್ರಿ ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story