Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೈವಿಕ-ಅರಣ್ಯ ನಾಶವನ್ನು ಗುರುತಿಸಲು...

ಜೈವಿಕ-ಅರಣ್ಯ ನಾಶವನ್ನು ಗುರುತಿಸಲು ಕ್ರಿಯಾ ಯೋಜನೆ ರೂಪಿಸಿ: ಮುಖ್ಯಮಂತ್ರಿ ಬೊಮ್ಮಾಯಿ

''ಕಾಡಿನ ಹೊರಗಿರುವ ಪ್ರಾಣಿಗಳ ಸಂರಕ್ಷಣೆಗೆ ಕ್ರಮ ವಹಿಸಿ'' ► ''ಶ್ರೀಗಂಧ ನೀತಿ ದುರ್ಬಳಕೆಯಾಗದಂತೆ ಎಚ್ಚರ ವಹಿಸಿ''

ವಾರ್ತಾಭಾರತಿವಾರ್ತಾಭಾರತಿ6 May 2022 8:49 PM IST
share
ಜೈವಿಕ-ಅರಣ್ಯ ನಾಶವನ್ನು ಗುರುತಿಸಲು ಕ್ರಿಯಾ ಯೋಜನೆ ರೂಪಿಸಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಮೇ 6: ‘ರಾಜ್ಯದಲ್ಲಿ ಅರಣ್ಯ ಜೀವಿಶಾಸ್ತ್ರ ವ್ಯವಸ್ಥೆಯ ಮೇಲೆ ಉಂಟಾಗಿರುವ ದುಷ್ಪರಿಣಾಮಗಳನ್ನು ಸರಿದೂಗಿಸಲು ಐಐಎಸ್ಸಿ ಸಂಸ್ಥೆಯ ತಜ್ಞರ ನೆರವಿನೊಂದಿಗೆ ಕ್ರಿಯಾ ಯೋಜನೆ ರೂಪಿಸಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಯವ್ಯಯ ಘೋಷಣೆಗಳ ಅನುಷ್ಠಾನ ಸಂಬಂಧ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ‘ಕ್ರಿಯಾಯೋಜನೆ ಸಿದ್ದಪಡಿಸಿ ಜಿಲ್ಲೆಗಳಿಗೆ ಕಾಲಮಿತಿ ನಿಗದಿಪಡಿಸಿ ಅನುಷ್ಟಾನದ ರೂಪುರೇಷೆಗಳನ್ನು ಸಿದ್ಧಪಡಿಸುವುದು. ವಿಶ್ವಬ್ಯಾಂಕ್ ನೆರವಿನ ಪ್ಲಾಸ್ಟಿಕ್ ನಿರ್ವಹಣೆ ಯೋಜನೆಗೆ ದೊಡ್ಡ ಮೊತ್ತದ ಅನುದಾನ ನಿಗದಿಪಡಿಸಿದೆ. ಪ್ಲಾಸ್ಟಿಕ್ ನಿಯಂತ್ರಣಕ್ಕೆ ನಿರ್ದಿಷ್ಟ ಯೋಜನೆಯನ್ನು ರೂಪಿಸಬೇಕು. ವ್ಯಾಪಕ ಪ್ರಚಾರ ನೀಡಬೇಕು. ಸಾರ್ವಜನಿಕರನ್ನು  ತೊಡಗಿಸಿಕೊಳ್ಳಬೇಕು. ಫಲಿತಾಂಶವನ್ನು ಜನರಿಗೆ ತಿಳಿಸಬೇಕು' ಎಂದು ನಿರ್ದೇಶನ ನೀಡಿದರು.  

‘ಶ್ರೀಗಂಧ ನೀತಿ ದುರ್ಬಳಕೆಯಾಗದಂತೆ ಎಚ್ಚರ ವಹಿಸಬೇಕು. ಸಂರಕ್ಷಣಾ ಮೀಸಲು ಅರಣ್ಯ ಪ್ರದೇಶಗಳಿಗೆ 5ಕೋಟಿ ರೂ.ಗಳ ವಿಶೇಷ ಅನುದಾನ ಒದಗಿಸಲಾಗಿದೆ. ಕಾಡಿನ ಹೊರಗಿರುವ ಪ್ರಾಣಿಗಳ ಸಂರಕ್ಷಣೆಯನ್ನು ಕೈಗೊಳ್ಳುವುದು. ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ರೈಲು ಹಳಿ ತಡೆಗೋಡೆ ನಿರ್ಮಾಣಕ್ಕೆ 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಮರಗಳ ಕಡಿತಲೆ ಮತ್ತು ಸಾಗಾಣಿಕೆ ಸರಳೀಕರಣ ಯೋಜನೆಯಡಿ ಖಾಸಗಿ ಭೂಮಿಗಳಲ್ಲಿ ರೈತರು ಬೆಳೆದಿರುವ ಮರಗಳನ್ನು ಕಡಿಯುವ ಮತ್ತು ಸಾಗಣಿಕೆ ಮಾಡಲು ಅನುಮತಿ ಪ್ರಕ್ರಿಯೆ ಸರಳೀಕರಣ ಮಾಡುವುದು-ದುರ್ಬಳಕೆಯಾಗದಂತೆ ಕ್ರಮ ವಹಿಸುವುದು. ಹಳಿಯಾಳ, ದಾಂಡೇಲಿಗಳಲ್ಲಿನ ಟಿಂಬರ್ ಮಾರುಕಟ್ಟೆ ಮೇಲೆ ನಿಯಂತ್ರಿಸಬೇಕು. ಆಡಳಿತದಲ್ಲಿ ಸುಧಾರಣೆ, ಮಾಲಿನ್ಯ ನಿಯಂತ್ರಣಾ ಮಂಡಳಿಯಲ್ಲಿ ಅರ್ಜಿಗಳ ಸರಳೀಕರಣ ಮಾಡುವುದು. ಮಾಲಿನ್ಯಗಳ ವರ್ಗೀಕರಣವನ್ನು ಮಂಡಳಿ ತೀರ್ಮಾನಿಸಲಿ' ಎಂದು ಹೇಳಿದರು.

‘ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಕ್ಲಿಷ್ಟವಿರುವ ಕೆಲವು ನಿಯಮಗಳನ್ನು ತೆಗೆದುಹಾಕಬೇಕು. ವ್ಯವಸ್ಥೆಯನ್ನು ಆದಷ್ಟು ಸರಳೀಕರಿಸಬೇಕು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ತೊಂದರೆಯಾಗಬಾರದು. ಸಮ್ಮತಿಗಾಗಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಅನುಮತಿ ನೀಡುವ ಮುನ್ನ ಕಡ್ಡಾಯವಾಗಿ ಕೈಗಾರಿಕೆಗಳಿಗೆ ಭೇಟಿ ನೀಡಿ ಪರಿಶೀಲಿಸುವುದು. ಬೆಳಗಾವಿ ಹಿಡ್ಕಲ್ ಅಣೆಕಟ್ಟು ಪ್ರದೇಶದಲ್ಲಿ ಪಕ್ಷಿಧಾಮ ಮತ್ತು ಚಿಟ್ಟೆಗಳ ಉದ್ಯಾನವನ್ನು ಪ್ರವಾಸೋದ್ಯಮ ದೃಷ್ಟಿ ಇಟ್ಟುಕೊಂಡು ಅಭಿವೃದ್ಧಿಪಡಿಸುವುದು' ಎಂದು ಅವರು ತಿಳಿಸಿದರು. 

ಅರಣ್ಯ ಸಚಿವ ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‍ಎನ್ ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಕೆ.ಸಿಂಗ್, ವಿಜಯ್ ಕುಮಾರ್ ಗೋಗಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X