Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶರಣ ಚಳವಳಿಯ ನವ ರಾಜಕಾರಣದಿಂದ ನವ...

ಶರಣ ಚಳವಳಿಯ ನವ ರಾಜಕಾರಣದಿಂದ ನವ ಕಾವ್ಯಮೀಮಾಂಸೆ ಹುಟ್ಟು: ಪ್ರೊ.ರಾಜೇಂದ್ರ ಚೆನ್ನಿ

‘ವಚನಗಳ ಓದು’ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ6 May 2022 9:09 PM IST
share
ಶರಣ ಚಳವಳಿಯ ನವ ರಾಜಕಾರಣದಿಂದ ನವ ಕಾವ್ಯಮೀಮಾಂಸೆ ಹುಟ್ಟು: ಪ್ರೊ.ರಾಜೇಂದ್ರ ಚೆನ್ನಿ

ಮಣಿಪಾಲ : ಹನ್ನೆರಡನೇ ಶತಮಾನದ ಶರಣ ಚಳವಳಿಯ ‘ನವ ರಾಜಕಾರಣ’ ಕರ್ನಾಟಕದಲ್ಲಿ ಅಪೂರ್ವವಾದ ವಚನ ಸಾಹಿತ್ಯಕ್ಕೆ ನಾಂದಿಯಾಗಿ ‘ನವ ಕಾವ್ಯಮೀಮಾಂಸೆ’ಯ  ಹುಟ್ಟಿಗೆ ಕಾರಣವಾಯಿತು ಎಂದು ಖ್ಯಾತ ಲೇಖಕ ಹಾಗೂ ಸಂಸ್ಕೃತಿ ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ ಹೇಳಿದ್ದಾರೆ. 

ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ‘ವಚನಗಳ ಓದು’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ.ಚೆನ್ನಿ, ಶರಣ ಚಳವಳಿಯ ಸಂದರ್ಭದಲ್ಲಿ ವಿವಿಧ ವೃತ್ತಿ ಮತ್ತು ಸಾಮಾಜಿಕ ಸ್ತರಗಳಿಗೆ ಸೇರಿದ ಪುರುಷ ಮತ್ತು ಮಹಿಳೆ ಯರು ಕಾವ್ಯಗಳನ್ನು ರಚಿಸಿ ಆ ಯುಗದ ಕಾವ್ಯಮೀಮಾಂಸೆಯನ್ನೇ ಬದಲಾಯಿಸಿದರು ಎಂದು ಅಭಿಪ್ರಾಯಪಟ್ಟರು.

ಅದು ಜಾತಿ ಮತ್ತು ವರ್ಗಗಳು ಅತಿಯಾಗಿದ್ದ ಹಿಂಸಾತ್ಮಕ ಯುಗ. ಹೀಗಾಗಿ ಆ ಹೊತ್ತಲ್ಲಿ ದಯೆಯ ಬಗ್ಗೆ ಮಾತನಾಡುವ ಅಗತ್ಯವಿತ್ತು. ಶ್ರೇಣೀಕೃತ ಜಾತಿ- ಸಂರಚನೆಯನ್ನು ಮುರಿದು ಆಧ್ಯಾತ್ಮಿಕ ಅನುಭವವು ಯಾವುದೇ ವರ್ಗಗಳಿಗೆ ಸೀಮಿತವಾಗದೆ ಎಲ್ಲರಿಗೂ ಲಭ್ಯವಾಗುವಂತೆ ಬಸವಣ್ಣ (ಬಸವೇಶ್ವರ), ಅಕ್ಕ ಮಹಾದೇವಿ, ಅಲ್ಲಮಪ್ರಭು, ದೇವರ ದಾಸಿಮಯ್ಯ ಹಾಗೂ ಇನ್ನೂ ಅನೇಕರು ಇದೇ ರೀತಿ ಜಾತಿ ವ್ಯವಸ್ಥೆಯನ್ನು ಮುರಿದು ಬರೆದು ಬದುಕಿದ್ದಾರೆ ಎಂದರು.

ವಚನಗಳು ದುಡಿಯುವ ವರ್ಗದ ಅಧಿಕೃತ ಧ್ವನಿಯೂ ಆಗಿತ್ತು. ಜಾತಿ, ಲಿಂಗ, ಆಚಾರ, ಸಾಂಪ್ರದಾಯಿಕ ತಾರತಮ್ಯಗಳ ನಿರಾಕರಣೆ ಮತ್ತು ದುಡಿಮೆಯನ್ನು (ಶ್ರಮ) ಪೂಜೆಯಾಗಿ ಸ್ವೀಕರಿಸುವುದು (ಕಾಯಕವೇ ಕೈಲಾಸ), ಕಾವ್ಯದ ಭಾಷೆಯನ್ನೇ ಬದಲಾಯಿಸಿತು. ಬಸವಣ್ಣನವರು ‘ಆನು ಒಲಿದಂತೆ ಹಾಡುವೆನು’ ಎಂದು ಘೋಷಿಸಿ ಯುಗದ ಮೀಮಾಂಸೆಗೆ ನಾಂದಿ ಹಾಡಿದರು.

ಅಂದಿನ ಶ್ರೇಷ್ಠ ಕವಯಿತ್ರಿ ಎನಿಸಿದ ಅಕ್ಕ ಮಹಾದೇವಿ ಲಿಂಗ ತಾರತಮ್ಯದ ಕುರಿತು ಖಚಿತವಾದ ಮಾತುಗಳಲ್ಲಿ ಬರೆದಿದ್ದಾರೆ. ಶೃಂಗಾರದ ಉಪಮೆಗಳ ಮೂಲಕ  ಆಧ್ಯಾತ್ಮಿಕತೆಯ ಸೌಂದರ್ಯವನ್ನು ಅಕ್ಕ ಚಿತ್ರಿಸಿದರು. ಅಲ್ಲಮಪ್ರಭು ಆ ಕಾಲದ ಎಲ್ಲಾ ತಾತ್ವಿಕ ಪರಂಪರೆಗಳೊಂದಿಗೆ ವಾಗ್ವಾದದಲ್ಲಿ  ತೊಡಗಿಸಿ ಕೊಂಡರು ಎಂದು ಪ್ರೊ.ಚೆನ್ನಿ ವಿವರಿಸಿದರು. ಪ್ರೊ.ಚೆನ್ನಿ ತಮ್ಮ ಮಾತನ್ನು ಪುಷ್ಟಿಕರಿಸುತ್ತ  ದೇವರ ದಾಸಿಮಯ್ಯ, ಮಡಿವಾಳ ಮಾಚಯ್ಯ ಸೇರಿದಂತೆ ವಿವಿಧ ವಚನಕಾರರ ಹಲವಾರು ವಚನಗಳನ್ನು ಉಲ್ಲೇಖಿಸಿದರು.

ಪ್ರಾರಂಭದಲ್ಲಿ ಮಾತನಾಡಿ ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ, ಶರಣ ಆಂದೋಲನವು ಸಾಮಾಜಿಕವಾಗಿ ಮತ್ತು ತಾತ್ವಿಕವಾಗಿ ಅತ್ಯಂತ ಪ್ರಕ್ಷುಬ್ಧ ಹಂತವಾಗಿದೆ ಮತ್ತು ವಚನಗಳಲ್ಲಿ ಅದು ಅತ್ಯುತ್ತಮ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತದೆ ಎಂದರು.

ಈ ಸಂದರ್ಭದಲ್ಲಿ ಶ್ರಾವ್ಯ ಬಾಸ್ರಿ ‘ದಯವಿಲ್ಲದ ಧರ್ಮವಾವುದಯ್ಯ?’ ಸೇರಿದಂತೆ ಅನೇಕ ವಚನಗಳನ್ನು ಹಾಡಿದರು. ಸುಹಾನಿ ರಾಜ್ಪೂತ್ ಕಾರ್ಯಕ್ರಮ ನಿರೂಪಿಸಿದರೆ, ವೆಲಿಕಾ ಎಸ್. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X