ಉಡುಪಿ: ಕಾಂಕ್ರೀಟ್ ರಸ್ತೆ ಕುಸಿತ; ಪಲ್ಟಿಯಾಗಿ ಹೊಳೆಗೆ ಬಿದ್ದ ಟಿಪ್ಪರ್

ಉಡುಪಿ : ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್ ರಸ್ತೆಯಲ್ಲಿ ಕುಸಿದು ಪಲ್ಟಿಯಾಯಿತು ಎಂದು ತಿಳಿದುಬಂದಿದೆ.
ರಸ್ತೆಯಲ್ಲಿ ಬಿರುಕು ಬಿಟ್ಟು ಸಂಪೂರ್ಣ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿತ್ತು ಎಂದು ಸ್ಥಳೀಯರು ತಿಳಿಸಿದ್ದು, ಆದರೆ ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.






.jpeg)
.jpeg)

.jpeg)


