ಸಾಮಾಜಿಕ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಅಗತ್ಯ: ಯು.ಟಿ.ಖಾದರ್

ಮಂಗಳೂರು : ಸಾಮಾಜಿಕ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಶಾಸಕ ಹಾಗೂ ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲ ತಾಣಗಳಲ್ಲಿ ಕೆಲವರು ಎಚ್ಚರಿಕೆ, ಬೆದರಿಕೆ ಹಾಕಿ ಸಾಮಾಜಿಕ ಶಾಂತಿಗೆ, ಕೋಮು ಸಾಮರಸ್ಯ ಹಾನಿ ಉಂಟು ಮಾಡುತ್ತಿರುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಹರಾಜು ಮಾಡುವ ದರಪಟ್ಟಿಯನ್ನು ಆಡಳಿತ ಪಕ್ಷದ ಶಾಸಕ ಬಹಿರಂಗ ವಾಗಿ ಹೇಳಿಕೆ ನೀಡಿರುವ ಮೂಲಕ ರಾಜ್ಯದ ಘನತೆಗೆ ಕುಂದುಂಟು ಮಾಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಸಾರ್ವಜನಿಕ ಚರ್ಚೆ ನಡೆಯುತ್ತಿರುವ ವಿಷಯದ ಬಗ್ಗೆ ಹೇಳಿಕೆ ನೀಡಿದ ಪ್ರೀಯಾಂಕ್ ಖರ್ಗೆಗೆ ನೋಟಿಸ್ ನೀಡಲಾಗಿದೆ. ಆದರೆ ಸರಕಾರದ ವಿರುದ್ಧ ಗಂಭೀರ ವಾದ ಆರೋಪ ಮಾಡುತ್ತಿರುವ ಬಿಜೆಪಿ ಶಾಸಕರ ವಿರುದ್ಧ ಬಿಜೆಪಿ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ಮುಖಂಡ ರಾದ ಸದಾಶಿವ ಉಳ್ಳಾಲ್, ಸಂತೋಷ್ ಶೆಟ್ಟಿ, ನಝೀರ್ ಮಠ, ನೀರಜ್ ಪಾಲ್ , ಸುರೇಶ್ ಭಟ್ನಗರ ಮೊದಲಾದ ವರು ಉಪಸ್ಥಿತರಿದ್ದರು.





