Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಸ್ಕಾಂ ಟಿಸಿ ನಿರ್ವಹಣೆ ಅಭಿಯಾನ: ಎರಡು...

ಬೆಸ್ಕಾಂ ಟಿಸಿ ನಿರ್ವಹಣೆ ಅಭಿಯಾನ: ಎರಡು ದಿನಗಳಲ್ಲಿ 1146 ಟಿಸಿ ಗಳ ನಿರ್ವಹಣೆ

ವಾರ್ತಾಭಾರತಿವಾರ್ತಾಭಾರತಿ8 May 2022 7:32 AM IST
share
ಬೆಸ್ಕಾಂ ಟಿಸಿ ನಿರ್ವಹಣೆ ಅಭಿಯಾನ: ಎರಡು ದಿನಗಳಲ್ಲಿ 1146 ಟಿಸಿ ಗಳ ನಿರ್ವಹಣೆ

ಬೆಂಗಳೂರು: ವಿದ್ಯುತ್ ಪರಿವರ್ತಕಗಳ (ಟಿಸಿ) ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಟ್ರಾನ್ಸ್ ಫಾರ್ಮರ್ ಗಳ ನಿರ್ವಹಣೆ ಕಾರ್ಯ ಭರದಿಂದ ಸಾಗಿದ್ದು, ಕೇವಲ ಎರಡು ದಿನಗಳಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 1146 ಟಿಸಿಗಳ ನಿರ್ವಹಣೆ ಆಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಇಂಧನ ಇಲಾಖೆ ಕೈಗೆತ್ತಿಕೊಂಡಿರುವ ಟಿಸಿ ನಿರ್ವಹಣೆ ಅಭಿಯಾನಕ್ಕೆ  ಮೇ 5 ರಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಿದ್ದು, ಟಿಸಿ ಗಳ ನಿರ್ವಹಣೆ ಕಾರ್ಯವನ್ನು ಬೆಸ್ಕಾಂ ಏಕಕಾಲದಲ್ಲಿ 8 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಆರಂಭಿಸಿದೆ. 

ಬೆಸ್ಕಾಂ ನಿರ್ದೇಶಕ ರಾಜೇಂದ್ರ ಚೋಳನ್ ಅವರು ಕ್ವೀನ್ಸ್ ರಸ್ತೆಯ ಕೆ.ಪಿ.ಸಿ.ಸಿ. ಕಚೇರಿ ಸಮೀಪ ಪಾದಚಾರಿ ಮಾರ್ಗದಲ್ಲಿನ ಪರಿವರ್ತಕದ ನಿರ್ವಹಣೆಗೆ ಮೇ 5 ರಂದು ಚಾಲನೆ ನೀಡಿದರು. 

ಎಲ್ಲಾ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಆಯಾ ಶಾಖಾ ವ್ಯಾಪ್ತಿಯಲ್ಲಿನ ನಿರ್ವಹಣ ಸ್ಥಳಕ್ಕೆ ಭೇಟಿ ನೀಡಿ ಟಸಿ ನಿರ್ವಹಣೆ ಕಾರ್ಯದ ಮೇಲ್ಬುಸ್ಥುವಾರಿ ವಹಿಸಿದರು. ಅವಶ್ಯವಿರುವ ಮಾನವ ಸಂಪನ್ಮೂಲ, ಸಾಮಗ್ರಿಗಳು ಮತ್ತು ಸಲಕರಣೆಗಳನ್ನು ನೀಡಲಾಗಿದ್ದು, ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯನಿರ್ವಹಣೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿರುತ್ತದೆ.

ಟಿಸಿ ನಿರ್ವಹಣೆ ಅಭಿಯಾನದಲ್ಲಿ ಎಲ್ಲಾ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಮತ್ತು ಪವರ್ ಮ್ಯಾನ್ ಗಳು ಭಾಗವಹಿಸಿ ಪಾಲನಾ ಕಾರ್ಯವನ್ನು ಸಂಪೂರ್ಣವಾಗಿ ಹಾಗೂ ಸುಸೂತ್ರವಾಗಿ ನಿರ್ವಹಿಸಿರುತ್ತಾರೆ. 

ಬೆಸ್ಕಾಂನ 535 ಶಾಖೆಗಳಲ್ಲಿ 1146 ಪರಿವರ್ತಕಗಳ ನಿರ್ವಹಣೆಯನ್ನು ಮಾಡಿರುವ ಕುರಿತು ಬೆಸ್ಕಾಂ ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಖಚಿತ ಪಡಿಸಿಕೊಂಡಿದ್ದಾರೆ. 

ಇಂಧನ ಸಚಿವರು ಸೂಚಿಸಿರುವ ಅಭಿಯಾನದಿಂದ ಟಿಸಿ ಆಗಾಗ್ಗೆ ಕೆಡುವುದನ್ನು ಕಡಿಮೆ ಮಾಡುವುದಲ್ಲದೇ, ವಿದ್ಯುತ್ ಅವಘಡಗಳನ್ನು ಕಡಿಮೆ ಮಾಡಲು ಅನುಕೂಲವಾಗುತ್ತದೆ ಅಲ್ಲದೆ ಬೆವಿಕಂಗೆ ಆರ್ಥಿಕ ನಷ್ಟವನ್ನು ತಪ್ಪಿಸಬಹುದಾಗಿರುತ್ತದೆ. ಇದರಿಂದಾಗಿ ಗ್ರಾಹಕರಿಗೆ ನಿರಂತರ ಹಾಗೂ ಉತ್ತಮ ಗುಣಮಟ್ಟದ ವಿದ್ಯುತ್ ನೀಡಲು ಅನುಕೂಲವಾಗುತ್ತದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

ಬೆಸ್ಕಾಂ ನ ಎಲ್ಲ 8 ವಲಯಗಳಲ್ಲಿ ಟಿಸಿ ನಿರ್ವಹಣೆ ಅಭಿಯಾನ ಕಾರ್ಯ ಬಹಳ ಭರದಿಂದ ಸಾಗಿದ್ದು, ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಭಿಯಾನಕ್ಕೆ ಚಾಲನೆ ದೊರಕಿದ ದಿನದಂದು (ಮೇ 5) 542 ಟಿಸಿ ಗಳ ನಿರ್ವಹಣೆ ಆಗಿದ್ದರೆ, ಮೇ 6 ರಂದು  604 ಟಿಸಿಗಳ ನಿರ್ವಹಣೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಸ್ಕಾಂ ಟಿಸಿ ನಿರ್ವಹಣೆ ವಿವರ

ಬೆಂಗಳೂರು ಪಶ್ಚಿಮ ವೃತ್ತ- 105, ದಕ್ಷಿಣ ವೃತ್ತ- 94, ಪೂರ್ವ ವೃತ್ತ- 96, ಉತ್ತರ ವೃತ್ತ -135, ಬಿಆರ್ ಸಿ- 96, ರಾಮನಗರ- 122, ಕೋಲಾರ- 171, ತುಮಕೂರು- 154, ದಾವಣಗೆರೆ- 200 ಟಿಸಿಗಳ ನಿರ್ವಹಣೆ ಮಾಡಲಾಗಿದೆ.

ಈ ಅಭಿಯಾನ ಮೇ 15 ಕ್ಕೆ ಪೂರ್ಣಗೊಳ್ಳಲಿದೆ.  ಟಿಸಿ ನಿರ್ವಹಣೆ ಅಭಿಯಾನದಲ್ಲಿ ದುಸ್ಥಿತಿಯಲ್ಲಿರುವ ಟಿಸಿಗಳ ಸಮರ್ಪಕ ನಿರ್ವಹಣೆ, ಹೊಸ ಟಿಸಿಗಳ ಅಳವಡಿಕೆ, ಸುರಕ್ಷಿತ ಸ್ಥಳ ಗಳಿಗೆ ಟಿಸಿಗಳ ಸ್ಥಳಾಂತರ ಮಾಡಲಾಗುತ್ತದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ

ಬೆವಿಕಂ ವ್ಯಾಪ್ತಿಗೆ ಒಳಪಡುವ ಒಟ್ಟು 535 ಶಾಖೆಗಳಲ್ಲಿ ಸಂಬಂಧಪಟ್ಟ ಶಾಖಾಧಿಕಾರಿಯು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಂಡುಬಂದಿರುವ ಅಪಾಯಕಾರಿ ಸ್ಥಿತಿಯಲ್ಲಿರುವ/ಶಿಥಿಲಾವಸ್ಥೆಯಲ್ಲಿರುವ/ ಹಾನಿಯಾಗಿರುವ ಪರಿವರ್ತಕವನ್ನು ಶಾಖಾವಾರು ದಿನಕ್ಕೆ ಕನಿಷ್ಟ ಒಂದರಂತೆ ಗುರುತಿಸಿ ನಿರ್ವಹಣೆಯನ್ನು ಕೈಗೊಳ್ಳುವಂತೆ ಸೂಚಿಸಲಾಗಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X