ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮೇ 8: ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶೆ, ನ್ಯಾ.ರತ್ನಕಲಾ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ.ಗುರುಪಾದಸ್ವಾಮಿ (ಇಂಜಿನಿಯರಿಂಗ್ ಪರಿಣತ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ವಿಷಯ ಪರಿಣತ) ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಸಮಿತಿಯು ಈಗಾಗಲೇ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳಂತೆ 50 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಟೆಂಡರು ಗಳು ಪಾರದರ್ಶಕ, ನ್ಯಾಯಸಮ್ಮತವಾಗಿರುವ ಕುರಿತು ಪರಿಶೀಲನೆ ನಡೆಸಲಿದೆ. ಯೋಜನೆಯನ್ನು ರೂಪಿಸಲಾಗಿರುವ ರೀತಿ, ಅದಕ್ಕೆ ತಗುಲುವ ವೆಚ್ಚ ದ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.
Next Story





