Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಬೀಚ್‌ನಲ್ಲಿ ಉಡುಪಿ ಜಿಲ್ಲಾಮಟ್ಟದ...

ಮಲ್ಪೆ ಬೀಚ್‌ನಲ್ಲಿ ಉಡುಪಿ ಜಿಲ್ಲಾಮಟ್ಟದ ತುಳುನಾಡ ಗೊಬ್ಬುಲು - ಆಹಾರ ಮೇಳ

ವಾರ್ತಾಭಾರತಿವಾರ್ತಾಭಾರತಿ8 May 2022 8:14 PM IST
share
ಮಲ್ಪೆ ಬೀಚ್‌ನಲ್ಲಿ ಉಡುಪಿ ಜಿಲ್ಲಾಮಟ್ಟದ ತುಳುನಾಡ ಗೊಬ್ಬುಲು - ಆಹಾರ ಮೇಳ

ಉಡುಪಿ, ಮೇ 8: ತುಳುಕೂಟ ಉಡುಪಿ, ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 317ಸಿ ಮತ್ತು ಇಂದ್ರಾಳಿ-ಉಡುಪಿ ಲಯನ್ಸ್ ಮತ್ತು ಲಿಯೋ ಕ್ಲಬ್ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ತುಳುನಾಡ ಗೊಬ್ಬುಲು- 2022 ಹಾಗೂ ಆಹಾರ ಮೇಳ, ತುಳುನಾಡ ಸಂಗೀತ ನೃತ್ಯ ಕಾರ್ಯಕ್ರಮವನ್ನು ಮಲ್ಪೆಕಡಲ ಕಿನಾರೆಯಲ್ಲಿ ಏರ್ಪಡಿಸಲಾಗಿತ್ತು.

ಕಳಸೆಗೆ ಭತ್ತ, ಅಕ್ಕಿ ಸುರಿದು ಸಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿದ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಮಲ್ಪೆಬೀಚ್ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕರಾವಳಿಯಲ್ಲಿ ಆಚರಣೆಯಲ್ಲಿರುವ ತುಳು ಸಂಸ್ಕೃತಿ ಹಾಗೂ ತುಳುವಿನ ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತದ್ದು. ಆರೋಗ್ಯದ ಹಿತದೃಷ್ಠಿಯಿಂದ ತುಳುವಿನ ತಿಂಡಿತಿನಿಸು, ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ತಿಳಿಸಿದರು.

ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕ ವಾಗಿ ಮಾತನಾಡಿ, ತುಳುನಾಡಿನಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಹಿರಿಯರು ಆಚರಿಸಿಕೊಂಡು ಬರುತ್ತಿದ್ದ ಜಾನಪದ ಕ್ರೀಡೆಗಳನ್ನು ಈ ಕಾರ್ಯಕ್ರಮದ ಮೂಲಕ ಯುವಜನಾಂಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಜಂಟಿ ಸಂಸ್ಥೆಗಳ ಮೂಲಕ ಪ್ರಯತ್ನಿಸಲಾಗಿದೆ ಎಂದರು.

ಲಯನ್ಸ್ ಜಿಲ್ಲಾ ಗವರ್ನರ್ ವಿಶ್ವನಾಥ್ ಶೆಟ್ಟಿ, ಇಂದ್ರಾಳಿ-ಉಡುಪಿ ಲಯನ್ಸ್ ಅಧ್ಯಕ್ಷ ಮನೋಹರ್ ಶೆಟ್ಟಿ ತೋನ್ಸೆ, ಉಡುಪಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸಾಹಿತಿ ಬನ್ನಂಜೆ ಬಾಬು ಅಮೀನ್, ಲಯನ್ಸ್ ಜಿಲ್ಲಾ ಉಪ ಗವರ್ನರ್ ಎಂ.ಕೆ.ಭಟ್, ಮುಹಮ್ಮದ್ ಹನೀಫ್, ಪಾಂಡುರಂಗ ಮಲ್ಪೆ, ಉದ್ಯಮಿ ಸಂದೇಶ್ ಕಾಮತ್, ಆಹಾರಮೇಳದ ಸಂಚಾಲಕ ಚಂದ್ರಶೇಖರ್ ರಾವ್, ರೋಶನ್ ಕುಮಾರ್ ಶೆಟ್ಟಿ, ಸುಧೇಶ್ ಶೆಟ್ಟಿ, ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ ದಯಾಕರ್ ವಿ.ಸುವರ್ಣ, ತುಳುಅಕಾಡೆಮಿ ಸದಸ್ಯರಾದ ತಾರಾ ಆಚಾರ್ಯ, ಆಕಾಶ್ ಜೈನ್, ತುಳುಕೂಟದ ಕೋಶಾಧಿಕಾರಿ ಎಂ.ಜಿ.ಚೈತನ್ಯ, ಯಶೋಧಾ ಕೇಶವ್, ಮೋಹನ್ ಶೆಟ್ಟಿ, ಪ್ರಭಾಕರ್ ಭಂಡಾರಿ, ರತ್ನಾಕರ್ ಇಂದ್ರಾಳಿ, ಮಹಮ್ಮದ್ ಮೌಲಾ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಚೊಕ್ಕಾಡಿ ಸಂತೋಷ್ ಶೆಟ್ಟಿ ಅವರ ಕಂಬಳದ ಕೋಣಗಳನ್ನು ಮಲ್ಪೆ ಬೀಚ್‌ನಲ್ಲಿ ಓಡಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಉಡುಪಿ ಜಿಲ್ಲಾಮಟ್ಟದ ತುಳುನಾಡ ಗೊಬ್ಬುಲು ಕಾರ್ಯಕ್ರಮದ ಸಂಚಾಲಕ ದಿವಾಕರ್ ಸ್ವಾಗತಿಸಿದರು. ಪ್ರಕಾಶ ಸುವರ್ಣ ಕಟಪಾಡಿ ಪ್ರಾರ್ಥಿಸಿ ದರು. ವಿ.ಕೆ.ಯಾದವ್ ಕಾರ್ಯಕ್ರಮ ನಿರೂಪಿಸಿದರು. ತುಳುಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಿದಿಯೂರ್ ವಂದಿಸಿದರು.

ಈ ಸಂದರ್ಭ ವಿಶೇಷವಾಗಿ ಮಹಿಳೆಯರು ಮತ್ತು ಪುರುಷರಿಗಾಗಿ ತುಳು ನಾಡಿನ ಕ್ರೀಡೆಗಳಾದ ಹಗ್ಗಜಗ್ಗಾಟ, ವಾಲಿಬಾಲ್, ತ್ರೋಬಾಲ್, ಕಬಡ್ಡಿ, ಮಾನವ ಗೋಪುರ, ಸೊಪ್ಪಾಟ, ಪಾಲೆದ ಗೊಬ್ಬು, ಚೆನ್ನೆಮಣೆ, ಪೊಕ್ಕು,ತೆಂಗಿನ ಸೋಗೆ ಹೆಣೇಯುವುದು, ತೆಂಗಿನಕಾಯಿ ಸಿಪ್ಪೆ ತೆಗೆಯುವ ಸ್ಫರ್ಧೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X