ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ಮೇ 9: ಶಬ್ದ ಮಾಲಿನ್ಯ ಉಂಟು ಮಾಡುವ ಯಾವುದೇ ಚಟುವಟಿಕೆಗಳನ್ನು ನಿಯಂತ್ರಿಸಲು, ನ್ಯಾಯಾಲಯಗಳ ಆದೇಶದಂತೆ, ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳ ಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಅಝಾನ್ ವಿರುದ್ಧವಾಗಿ ಹನುಮಾನ್ ಚಾಲೀಸಾ ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಹೇಳಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವರು, ನ್ಯಾಯಾಲಯದ ಆದೇಶವನ್ನು, ಎಲ್ಲರೂ ಗೌರವಿಸಬೇಕು. ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು, ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಈ ನಡುವೆ ವಿಜಯಪುರ ಮತ್ತು ತುಮಕೂರು ಜಿಲ್ಲೆಯ ಒಂದೆರಡು ದೇವಾಲಯಗಳಲ್ಲಿ ಶ್ರೀರಾಮ ಸೇನೆ ಮತ್ತು ಕೆಲವು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಇಂದು ಮುಂಜಾನೆ ಸುಪ್ರಭಾತ, ಭಜನೆ ಮತ್ತು ಹನುಮಾನ್ ಚಾಲಿಸಾ ಪಠಿಸಿದರು. ಯಾವುದೇ ಅಹಿಕತರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು.
Next Story





