ನಾಳೆ (ಮೇ 10) ದಿಲ್ಲಿಗೆ ಸಿಎಂ ಬೊಮ್ಮಾಯಿ

ಬೆಂಗಳೂರು, ಮೇ 9: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ(ಮೇ 10) ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯ ಐಟಿ ಬಿಟಿ ಇಲಾಖೆಯಿಂದ ಹೂಡಿಕೆದಾರರ ಸಭೆ ನಿಗದಿಯಾಗಿದ್ದು, ಈ ಸಭೆಯಲ್ಲಿ ಭಾಗವಹಿಸಲು ದಿಲ್ಲಿಗೆ ಮುಖ್ಯಮಂತ್ರಿ ತೆರಳಲಿದ್ದಾರೆ. ಸಿಎಂಗೆ ಐಟಿ ಬಿಟಿ ಸಚಿವ ಡಾ.ಅಶ್ವತ್ಥನಾರಾಯಣ ಸಾಥ್ ನೀಡಲಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ದಿಲ್ಲಿಯಲ್ಲಿ ಕೇಂದ್ರದ ಕೆಲ ಸಚಿವರ ಭೇಟಿ ಮಾಡುವ ಸಾಧ್ಯತೆಗಳಿವೆ. ವರಿಷ್ಠರ ಭೇಟಿಗೂ ಸಿಎಂ ಮುಂದಾಗುವ ಸಾಧ್ಯತೆಯಿದ್ದು, ಸಂಪುಟದಲ್ಲಿ ಖಾಲಿ ಇರುವ ಐದು ಸ್ಥಾನಗಳ ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಹೈಕಮಾಂಡ್ ನಾಯಕರ ಬಳಿ ಸಂಪುಟ ಸರ್ಜರಿ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ. ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕರೆ ಮೇ 12ಕ್ಕೆ ಸಂಪುಟ ಸರ್ಜರಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.
Next Story





