ಅತ್ಯಾಚಾರ ಆರೋಪ: ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕನನ್ನು ಬಂಧಿಸಿದ ದಿಲ್ಲಿ ಪೊಲೀಸರು

ಹೊಸದಿಲ್ಲಿ: ವಿವಾಹದ ನೆಪದಲ್ಲಿ 10 ವರ್ಷಗಳ ಕಾಲ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ 32 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಿಲ್ಲಿ ಪೊಲೀಸರು ಪ್ರಶಸ್ತಿ ವಿಜೇತ ಲೇಖಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗೋರಖ್‌ಪುರ ಮೂಲದ ಮಹಿಳೆಯ ದೂರಿನ ಆಧಾರದ ಮೇಲೆ ರಾಷ್ಟ್ರ ರಾಜಧಾನಿಯ ತಿಮಾರ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಕಳೆದ 10 ವರ್ಷಗಳಿಂದ ದಿಲ್ಲಿಯ ಮುಖರ್ಜಿ ನಗರದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದು, ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ಪರೀಕ್ಷೆಗೆ ತಯಾರಿ ನಡೆಸುತ್ತಿರುವುದಾಗಿ ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಎಫ್‌ಐಆರ್ ಪ್ರಕಾರ, ಸುಮಾರು 10 ವರ್ಷಗಳ ಹಿಂದೆ ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಬರಹಗಾರರನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಭೇಟಿಯಾಗಿ ಸ್ನೇಹಿತರಾದರು.
ತನ್ನ ಕಣ್ಣಿನ ಶಸ್ತ್ರಚಿಕಿತ್ಸೆಯ ನಂತರ ಅವನು ತನ್ನನ್ನು ನಿಂದಿಸಿದ ಮತ್ತು ಥಳಿಸಿದ ಘಟನೆಯನ್ನು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
2013 ರಲ್ಲಿ ತಾನು ಕಣ್ಣಿನ ಚಿಕಿತ್ಸೆಗಾಗಿ ಏಮ್ಸ್ ಗೆ ಹೋಗಿದ್ದೆ. ತಾನು ಮನೆಗೆ ಹಿಂದಿರುಗುವಾಗ ತಡವಾಯಿತು. ಅದಕ್ಕಾಗಿ ಆತ ನನಗೆ ನಿಂದಿಸಿದ ಹಾಗೂ ಥಳಿಸಿದ.ನಾನು ಅಳಲು ಆರಂಭಿಸಿದೆ ಆದರೆ ಆತ ತನ್ನ ಮೇಲೆ ಅತ್ಯಾಚಾರ ಮಾಡಿದ. ಮರುದಿನ ಬಂದು ಕ್ಷಮೆ ಕೇಳತೊಡಗಿದ. ನನ್ನನ್ನು ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.