Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ಅಶಾಂತಿ...

ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವರು ಭಯೋತ್ಪಾದಕರು, ಅವರನ್ನೆಲ್ಲ ಯುಎಪಿಎ ಅಡಿಯಲ್ಲಿ ಬಂಧಿಸಿ: ಬಿಕೆ ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ9 May 2022 2:41 PM IST
share
ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವರು ಭಯೋತ್ಪಾದಕರು, ಅವರನ್ನೆಲ್ಲ ಯುಎಪಿಎ ಅಡಿಯಲ್ಲಿ ಬಂಧಿಸಿ: ಬಿಕೆ ಹರಿಪ್ರಸಾದ್

ಬೆಂಗಳೂರು: ರಾಜ್ಯದಲ್ಲಿ ಯಾರು ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರು, ಅಶಾಂತಿ ಸೃಷ್ಟಿಸುವ ಮೂಲಕ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು, ಕೂಡಲೇ ಯುಎಪಿಎ ಅಡಿಯಲ್ಲಿ ಬಂಧನ ಮಾಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. 

ವಿಕಾಸಸೌಧದಲ್ಲಿ ಮಾಧ್ಯಮದವರನ್ನ ಕುರಿತು ಮಾತನಾಡಿದ ಅವರು, ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ ಆಕ್ಟೋಪಸ್ ಇದ್ದ ಹಾಗೆ, ಇವರ ಕೈಯಲ್ಲಿ ಈ ಕೆಲಸ ಮಾಡಿಸುತ್ತಿದ್ದಾರೆ‌. ರಾಜ್ಯದಲ್ಲಿ ಶಾಂತಿ ಕದಡಲು ಯಾರು ಪ್ರಯತ್ನ ಮಾಡುತ್ತಿದ್ದಾರೋ ಅವರನ್ನು ಭಯೋತ್ಪಾದಕರು ಎಂದು ಯುಎಪಿಎ ಅಡಿಯಲ್ಲಿ ಬಂಧಿಸಬೇಕು ಎಂದು ಆಗ್ರಹಿಸಿದ್ರು. 

ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರ ಹೋರಾಟಕ್ಕೆ ಬೆಂಬಲ: ಸರ್ಕಾರದ ನಿರ್ಣಯ 1200 ಉಪನ್ಯಾಸಕರ ವರ್ಗಾವಣೆ ಅವೈಜ್ಞಾನಿಕವಾಗಿದೆ. ಸಚಿವರ ಗಮನಕ್ಕೆ ತರುವ ನಿಟ್ಟಿನಲ್ಲಿ ಪರಿಷತ್ ಸದಸ್ಯ ಮರಿತಿಬ್ಬೇಗೌಡರ ಧರಣಿಗೆ ಬೆಂಬಲ ನೀಡಿದ್ದೇವೆ. ಏಪ್ರಿಲ್ ಮೇ ತಿಂಗಳಲ್ಲಿ ಕಾಲೇಜು ಪರೀಕ್ಷೆ, ಮೌಲ್ಯಮಾಪನ ನಡೆಯುತ್ತಿದೆ  ಈ ಸಂದರ್ಭದಲ್ಲಿ ಅವೈಜ್ಞಾನಿಕ ವರ್ಗಾವಣೆ ಸರಿಯಲ್ಲ 

ಗರ್ಭಿಣಿ ಮಹಿಳೆಯರು, ಅಂಗವಿಕಲರು ಇರುತ್ತಾರೆ ಏಕಾಏಕಿ ವರ್ಗಾವಣೆ ಮಾಡಲಾಗಿದೆ
ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಸರ್ಕಾರದ ಕ್ರಮದ ವಿರುದ್ಧ ಹರಿಹಾಯ್ದರು.

ಸರ್ಕಾರ ಕಮಿಷನ್ ದಂಧೆ ನಡೆಯುತ್ತಿರುವುದು ಕುಖ್ಯಾತಿ ಆಗಿದೆ. ಶಿಕ್ಷಕರ ವರ್ಗಾವಣೆ ಕಮಿಷನ್ ದಂಧೆ ಊಹಾಪೋಹಗಳು ಇವೆ. ವರ್ಗಾವಣೆ ನೀತಿಯನ್ನು ಸರ್ಕಾರ ತರಬೇಕು. ಏಕಾಏಕಿ ವರ್ಗಾವಣೆ ಶಿಕ್ಷಣಕ್ಕೆ ಅಡ್ಡಿ ಆಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ತೊಂದರೆ ಆಗುತ್ತಿದೆ. ಮರಿತಿಬ್ಬೇಗೌಡರ ಧರಣಿ ಹಿನ್ನೆಲೆಯಲ್ಲಿ ಸಚಿವರು ಖುದ್ದಾಗಿ ಭೇಟಿ ನೀಡಿ ಮಾತನಾಡಬೇಕು. ಅಧಿಕಾರಿಗಳ ಮಾತು ಕೇಳಿಕೊಂಡು ವರ್ಗಾವಣೆ ಮಾಡಬಾರದು ಸಚಿವರು ತಕ್ಷಣವೇ ವರ್ಗಾವಣೆ ಪ್ರಕ್ರಿಯೆ ರದ್ದು ಮಾಡಬೇಕೆಂದು ಒತ್ತಾಯಿಸಿದ್ರು. 

ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಸದಸ್ಯರಾದ ವೆಂಕಟೇಶ್, ಗೋವಿಂದ ರಾಜು, ಮೋಹನ್ ಕೊಂಡಜ್ಜಿ ಭಾಗವಹಿಸಿದ್ರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X